ಅಭಿವೃದ್ಧಿ, ಉತ್ತಮ ಆಡಳಿತಕ್ಕೆ ಸಿಕ್ಕ ಜಯ; ಮಹಾರಾಷ್ಟ್ರದಲ್ಲಿ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ
ಮಹಾರಾಷ್ಟ್ರದಲ್ಲಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿಗೆ ಜನರು ಮತ ಹಾಕಿದ್ದಾರೆ. ಒಗ್ಗಟ್ಟಾಗಿ ನಾವು ಇನ್ನಷ್ಟು ಎತ್ತರಕ್ಕೆ ಏರುತ್ತೇವೆ ಎಂದು ಪ್ರಧಾನಿ ಮೋದಿ ಅವರು ಭರ್ಜರಿ ಗೆಲುವಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 24 ಸ್ಥಾನಗಳನ್ನು ಗೆದ್ದಿದೆ. ಶಿವಸೇನೆ 15 ಸ್ಥಾನಗಳನ್ನು ಗೆದ್ದು ಇತರ 39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) 14 ಸ್ಥಾನಗಳನ್ನು ಗೆದ್ದು 27 ಇತರರಲ್ಲಿ ಮುನ್ನಡೆ ಸಾಧಿಸಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವನ್ನು ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಜನತೆಗೆ ಇಂದು ಅಭಿನಂದನೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಇದುವರೆಗೆ 24 ಸ್ಥಾನಗಳನ್ನು ಗೆದ್ದಿದೆ ಮತ್ತು ಇತರ 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ 15 ಮತ್ತು 14 ಸ್ಥಾನಗಳನ್ನು ಗಳಿಸಿವೆ. ‘ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ. ಒಗ್ಗೂಡಿ ನಾವು ಇನ್ನೂ ಎತ್ತರಕ್ಕೆ ಏರುತ್ತೇವೆ. ಎನ್‌ಡಿಎಗೆ ಐತಿಹಾಸಿಕ ಜನಾದೇಶಕ್ಕಾಗಿ ಮಹಾರಾಷ್ಟ್ರದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ಅದರಲ್ಲೂ ವಿಶೇಷವಾಗಿ ಮಹಾರಾಷ್ಟ್ರ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ಜೈ ಮಹಾರಾಷ್ಟ್ರ!” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Development wins!
Good governance wins!
United we will soar even higher!
Heartfelt gratitude to my sisters and brothers of Maharashtra, especially the youth and women of the state, for a historic mandate to the NDA. This affection and warmth is unparalleled.
I assure the…
— Narendra Modi (@narendramodi) November 23, 2024
ಇದನ್ನೂ ಓದಿ: ಭಾರತ-ಜರ್ಮನ್ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭ; ನ್ಯೂಸ್9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮೈತ್ರಿಕೂಟದ ಗೆಲುವಿಗೆ ಅಭಿನಂದನೆ ಸಲ್ಲಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ