‘ಅಜಿತ’ನ ದುಸ್ಸಾಹಸಕ್ಕೆ ‘ದೇವ’ಲೋಕ ಹಾಳು.. ಫಡ್ನವಿಸ್ ಸಹ ರಾಜೀನಾಮೆ!
ಮುಂಬೈ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯು ರೋಚಕ ತಿರುವು ಪಡೆದುಕೊಂಡಿದೆ. ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿರುವ ಬೆನ್ನಲ್ಲೇ, ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಸಹ ರಾಜೀನಾಮೆ ನೀಡಿದ್ದಾರೆ. ವಿಪಕ್ಷ ಸ್ಥಾನದಲ್ಲಿ ಕೆಲಸ ಮಾಡುತ್ತೇವೆ: ನಮ್ಮ ಬಳಿ ಸರ್ಕಾರ ರಚನೆಗೆ ಅಗತ್ಯ ಬಹುಮತ ಇಲ್ಲ. ಹೀಗಾಗಿ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಹೊಸ ಸರ್ಕಾರಕ್ಕೆ ಶುಭ ಕೋರಿದ ದೇವೇಂದ್ರ ಫಡ್ನವಿಸ್, ನಾವು ವಿರೋಧ ಪಕ್ಷ […]
ಮುಂಬೈ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯು ರೋಚಕ ತಿರುವು ಪಡೆದುಕೊಂಡಿದೆ. ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿರುವ ಬೆನ್ನಲ್ಲೇ, ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಸಹ ರಾಜೀನಾಮೆ ನೀಡಿದ್ದಾರೆ.
ವಿಪಕ್ಷ ಸ್ಥಾನದಲ್ಲಿ ಕೆಲಸ ಮಾಡುತ್ತೇವೆ: ನಮ್ಮ ಬಳಿ ಸರ್ಕಾರ ರಚನೆಗೆ ಅಗತ್ಯ ಬಹುಮತ ಇಲ್ಲ. ಹೀಗಾಗಿ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಹೊಸ ಸರ್ಕಾರಕ್ಕೆ ಶುಭ ಕೋರಿದ ದೇವೇಂದ್ರ ಫಡ್ನವಿಸ್, ನಾವು ವಿರೋಧ ಪಕ್ಷ ಸ್ಥಾನದಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ನವೆಂಬರ್ 23ರಂದು ಅಚ್ಚರಿ ಬೆಳವಣಿಗೆಯಲ್ಲಿ ಬೆಳ್ಳಂಬೆಳಗ್ಗೆಯೇ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದ್ರೆ, ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬಹುಮತವೇ ಇಲ್ಲ ಎಂದು ಎನ್ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್ ಕದ ತಟ್ಟಿದವು.
ಇಂದು ಬೆಳಗ್ಗೆಯಷ್ಟೇ ತೀರ್ಪು ನೀಡಿದ ಸುಪ್ರೀಂಕೋರ್ಟ್, ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸಬೇಕೆಂದು ಫಡ್ನವಿಸ್ ಸರ್ಕಾರಕ್ಕೆ ಸೂಚನೆ ನೀಡಿತು. ಇದರ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ್ದನ್ನು ಅರಿತ ಫಡ್ನವಿಸ್, ಇದೀಗ ಸುದ್ದಿಗೋಷ್ಠಿ ನಡೆಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉದ್ದವ್ ಠಾಕ್ರೆ 5 ವರ್ಷ ಸಿಎಂ: ಶಿವಸೇನೆಯ ಯುವನಾಯಕ ಉದ್ದವ್ ಠಾಕ್ರೆ ಅವ್ರು 5 ವರ್ಷ ಪೂರ್ಣಾವಧಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ. ಸಂಜೆ ಉದ್ದವ್ ರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತೆ. ಉಪಮುಖ್ಯಮಂತ್ರಿಯಾಗಿ ಯಾರೂ ಇರುವುದಿಲ್ಲ ಎಂದು ಸಂಜಯ್ ರಾವತ್ ಮುಂಬೈನಲ್ಲಿ ಹೇಳಿದ್ದಾರೆ.
Published On - 3:41 pm, Tue, 26 November 19