AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ; ಒಂದೇ ವಿಮಾನದಲ್ಲಿ ಪ್ರಯಾಣಿಸಿದ ಫಡ್ನವಿಸ್ – ಉದ್ಧವ್ ಠಾಕ್ರೆ

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮುಂಬೈನಿಂದ ನಾಗ್ಪುರಕ್ಕೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ವಿಮಾನದ ಪ್ರಯಾಣದ ಸಮಯದಲ್ಲಿ ಇಬ್ಬರು ರಾಜ್ಯ ನಾಯಕರು ಭೇಟಿಯಾದರು. ಈ ವೇಳೆ ಇಬ್ಬರೂ ಪರಸ್ಪರ ಕೈಕುಲುಕಿ ಸ್ವಾಗತಿಸಿದರು. ಈ ಫೋಟೋಗಳು ರಾಜಕೀಯ ವಲಯಗಳಲ್ಲಿ ಊಹಾಪೋಹಗಳಿಗೆ ನಾಂದಿ ಹಾಡಿವೆ. ಎರಡೂ ಕಡೆಯವರು ಇದನ್ನು ಕೇವಲ ಕಾಕತಾಳೀಯ ಎಂದು ತಳ್ಳಿಹಾಕಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ; ಒಂದೇ ವಿಮಾನದಲ್ಲಿ ಪ್ರಯಾಣಿಸಿದ ಫಡ್ನವಿಸ್ - ಉದ್ಧವ್ ಠಾಕ್ರೆ
Uddhav Thackeray And FadnavisImage Credit source: TV9
ಸುಷ್ಮಾ ಚಕ್ರೆ
|

Updated on: Jun 26, 2026 | 10:36 PM

Share

ನಾಗ್ಪುರ, ಜೂನ್ 26: ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಇಂದು ಒಂದು ಅಪರೂಪದ ಹಾಗೂ ಅಚ್ಚರಿಯ ಬೆಳವಣಿಗೆ ನಡೆದಿದೆ. ಸದಾ ಪರಸ್ಪರ ಟೀಕೆ ಮಾಡಿಕೊಳ್ಳುವ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಶಿವಸೇನಾ (ಯುಬಿಟಿ) ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಮುಂಬೈನಿಂದ ನಾಗ್ಪುರಕ್ಕೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಅಷ್ಟೇ ಅಲ್ಲದೆ, ವಿಮಾನದಲ್ಲಿ ಮುಖಾಮುಖಿಯಾದಾಗ ಇಬ್ಬರೂ ನಾಯಕರು ಪರಸ್ಪರ ಕೈ ಕುಲುಕಿ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.

ರಾಜಕೀಯ ಕಾರ್ಯಕ್ರಮಗಳ ಕಾರಣಕ್ಕೆ ಉಭಯ ನಾಯಕರು ಮುಂಬೈನಿಂದ ನಾಗ್ಪುರಕ್ಕೆ ತೆರಳುತ್ತಿದ್ದರು. ಕಾಕತಾಳೀಯ ಎಂಬಂತೆ ಇಬ್ಬರಿಗೂ ಒಂದೇ ಕಮರ್ಷಿಯಲ್ ವಿಮಾನದಲ್ಲಿ ಸೀಟು ಕಾಯ್ದಿರಿಸಲಾಗಿತ್ತು. ವಿಮಾನದ ಒಳಗಡೆ ಇಬ್ಬರು ನಾಯಕರು ಎದುರಾದಾಗ, ಹಳೆಯ ರಾಜಕೀಯ ಕಹಿ ನೆನಪುಗಳನ್ನು ಬದಿಗಿಟ್ಟು ಅತ್ಯಂತ ಸೌಜನ್ಯದಿಂದ ಕೈಕುಲುಕಿದ್ದಾರೆ.

ಇದೇ ವಿಮಾನದಲ್ಲಿ ಉದ್ಧವ್ ಠಾಕ್ರೆ ಅವರ ಆಪ್ತ ಹಾಗೂ ಸಂಸದ ಸಂಜಯ್ ರಾವತ್ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಕೂಡ ಪ್ರಯಾಣಿಸುತ್ತಿದ್ದರು. ಉದ್ಧವ್ ಠಾಕ್ರೆ ಮತ್ತು ದೇವೇಂದ್ರ ಫಡ್ನವಿಸ್ ಇಬ್ಬರೂ ಇದನ್ನು ಕೇವಲ ಕಾಕತಾಳೀಯ ಭೇಟಿ ಎಂದಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪೂರ್ವ ನಿಗದಿತ ಸರ್ಕಾರಿ ಮತ್ತು ರಾಜಕೀಯ ಕಾರ್ಯಕ್ರಮಗಳ ಭಾಗವಾಗಿ ತಮ್ಮ ತವರು ರಾಜ್ಯ ಮತ್ತು ವಿಧಾನಸಭಾ ಕ್ಷೇತ್ರವಾದ ನಾಗ್ಪುರಕ್ಕೆ ಪ್ರಯಾಣಿಸುತ್ತಿದ್ದರು. ಉದ್ಧವ್ ಠಾಕ್ರೆ ಶನಿವಾರದಿಂದ ಮೂರು ದಿನಗಳ ವಿದರ್ಭ ಮತ್ತು ಮರಾಠವಾಡ ಪ್ರವಾಸಕ್ಕಾಗಿ ನಾಗ್ಪುರಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಠಾಕ್ರೆಗೆ ಶಾಕ್; ಶಿವಸೇನೆಯ 6 ಬಂಡಾಯ ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ

ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ:

2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬಳಿಕ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮುರಿದುಬಿದ್ದಿತ್ತು. ಅದಾದ ನಂತರ ಉದ್ಧವ್ ಠಾಕ್ರೆ ಕಾಂಗ್ರೆಸ್-ಎನ್‌ಸಿಪಿ ಜೊತೆ ಸೇರಿ ಸರ್ಕಾರ ರಚಿಸಿದ್ದರು. ತದನಂತರ ಏಕನಾಥ್ ಶಿಂಧೆ ಬಂಡಾಯ ಎದ್ದು ಬಿಜೆಪಿಯೊಂದಿಗೆ ಸರ್ಕಾರ ರಚಿಸಿದಾಗಿನಿಂದ ಫಡ್ನವಿಸ್ ಮತ್ತು ಠಾಕ್ರೆ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿತ್ತು. ಸಾರ್ವಜನಿಕ ವೇದಿಕೆಗಳಲ್ಲಿ ಒಬ್ಬರನ್ನೊಬ್ಬರು ಕಠಿಣ ಪದಗಳಿಂದ ಟೀಕಿಸುತ್ತಿದ್ದ ಇಬ್ಬರು ನಾಯಕರು ಈಗ ಹಸ್ತಲಾಘವ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್

“ಮಹಾರಾಷ್ಟ್ರದ ರಾಜಕೀಯ ಸಂಸ್ಕೃತಿಯಲ್ಲಿ ವೈಯಕ್ತಿಕ ದ್ವೇಷಕ್ಕೆ ಜಾಗವಿಲ್ಲ. ನಾವು ರಾಜಕೀಯವಾಗಿ ಭಿನ್ನಾಭಿಪ್ರಾಯ ಹೊಂದಿದ್ದರೂ, ಸಾರ್ವಜನಿಕವಾಗಿ ಎದುರಾದಾಗ ಕನಿಷ್ಠ ಸೌಜನ್ಯ ಪ್ರದರ್ಶಿಸುವುದು ನಮ್ಮ ಸಂಪ್ರದಾಯ” ಎಂದು ಉಭಯ ಪಕ್ಷಗಳ ನಾಯಕರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?