ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ; ಬಿಜೆಪಿ ನಾಯಕ ಘೋಷಣೆ

Maharashtra CM: ಇನ್ನೂ ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರದ ಸಿಎಂ ಯಾರೆಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ನೀಡಿಲ್ಲ. ಆದರೆ, ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಂದಿನ ಸಿಎಂ ಆಗಲಿದ್ದಾರೆ ಎಂದು ಘೋಷಿಸಿದ್ದಾರೆ.

ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ; ಬಿಜೆಪಿ ನಾಯಕ ಘೋಷಣೆ
ದೇವೇಂದ್ರ ಫಡ್ನವಿಸ್
Follow us
ಸುಷ್ಮಾ ಚಕ್ರೆ
|

Updated on:Dec 02, 2024 | 6:50 PM

ಮುಂಬೈ: ಮಹಾರಾಷ್ಟ್ರದ ಸಿಎಂ ರೇಸ್​ನಲ್ಲಿ ಶಿವಸೇನೆಯ ಏಕನಾಥ್ ಶಿಂಧೆ ಹಾಗೂ ಬಿಜೆಪಿಯ ದೇವೇಂದ್ರ ಫಡ್ನವಿಸ್ ಹೆಸರು ಚಾಲ್ತಿಯಲ್ಲಿತ್ತು. ಆದರೆ, ಕಳೆದ ವಾರ ಸುದ್ದಿಗೋಷ್ಠಿ ನಡೆಸಿದ್ದ ಏಕನಾಥ್ ಶಿಂಧೆ ತನಗೆ ಸಿಎಂ ಹುದ್ದೆಯಲ್ಲಿರಬೇಕೆಂಬ ಆಸೆಯಿಲ್ಲ ಎಂದು ಹೇಳಿದ್ದರು. ಹಾಗೇ, ಮುಖ್ಯಮಂತ್ರಿ ಯಾರಾಗಬೇಕೆಂಬ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ನಿರ್ಧಾರವೇ ಅಂತಿಮ, ಅವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದಿದ್ದರು. ಇನ್ನೂ ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರದ ಸಿಎಂ ಯಾರೆಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ನೀಡಿಲ್ಲ. ಆದರೆ, ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಂದಿನ ಸಿಎಂ ಆಗಲಿದ್ದಾರೆ ಎಂದು ಘೋಷಿಸಿದ್ದಾರೆ.

ಕೆಲವು ದಿನಗಳ ಹಿಂದೆ ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ, ಅಜಿತ್ ಪವಾರ್ ಮೂವರೂ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಆ ಭೇಟಿಯ ನಂತರ ಏನು ತೀರ್ಮಾನವಾಯಿತೆಂಬುದರ ಬಗ್ಗೆ ಯಾರೂ ಮಾಹಿತಿ ನೀಡಿರಲಿಲ್ಲ. ಆದರೆ, ಇದೀಗ ಬಿಜೆಪಿ ನಾಯಕ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿಯ ಈ ನಿರ್ಧಾರದ ಬಗ್ಗೆ ಏಕನಾಥ್ ಶಿಂಧೆ ಕೋಪಗೊಂಡಿಲ್ಲ. ಸಚಿವ ಸ್ಥಾನದ ಬಗ್ಗೆ ಅವರದೇ ಆದ ಬೇಡಿಕೆಗಳಿದ್ದರೆ ಕೋಪವಿದೆ ಎಂದು ಅರ್ಥವಲ್ಲ. ಎಲ್ಲರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಏಕನಾಥ್ ಶಿಂಧೆಯವರಿಗೆ ಸಿಗಬೇಕಾದ ಗೌರವ ಸಿಗುತ್ತದೆ. ಏಕನಾಥ್ ಶಿಂಧೆಯವರನ್ನೂ ಸರ್ಕಾರದ ಭಾಗವಾಗಿಸುತ್ತಾರೆ ಎಂದು ಎಂದು ಸುಧೀರ್ ಮುಂಗಂಟಿವಾರ್ ಹೇಳಿದ್ದಾರೆ.

ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಸುಧೀರ್ ಮುಂಗಂತಿವಾರ್ ಇಂದು ಘೋಷಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನೇ ಸಿಎಂ ಆಗಿ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂಬುದು ನನ್ನ ಅಭಿಪ್ರಾಯವಾಗಿದೆ. ಬಿಜೆಪಿ ಈ ಬಗ್ಗೆ ಯಾವುದೇ ಸರ್​ಪ್ರೈಸ್ ನೀಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ, ದೇವೇಂದ್ರ ಫಡ್ನವಿಸ್ ಹೇಳಿದ್ದೇನು?

ಡಿಸೆಂಬರ್ 5 ರಂದು ಮುಂಬೈನಲ್ಲಿ ಭವ್ಯವಾದ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಸುಧೀರ್ ಹೇಳಿದ್ದಾರೆ. ಇಂದು ಅಥವಾ ಡಿಸೆಂಬರ್ 3ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿರುವ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಭಾನುವಾರ ಹೇಳಿದ್ದಾರೆ.

“ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೊಸ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಆಯ್ಕೆ ಮಾಡುವ ಸಭೆಯು ಡಿಸೆಂಬರ್ 2 ಅಥವಾ 3 ರಂದು ನಡೆಯಲಿದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವುದರೊಂದಿಗೆ ಮಹಾಯುತಿ ಭಾರಿ ಜಯ ಸಾಧಿಸಿ ಒಂದು ವಾರವಾದರೂ ಹೊಸ ಸರ್ಕಾರ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ. ಡಿಸೆಂಬರ್ 5 ರಂದು ಸಂಜೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Maharashtra CM: ಮಹಾರಾಷ್ಟ್ರದ ಸಿಎಂ ರೇಸ್​ನಿಂದ ಹಿಂದೆ ಸರಿದ ಏಕನಾಥ್ ಶಿಂಧೆ; ದೇವೇಂದ್ರ ಫಡ್ನವಿಸ್ ಹಾದಿ ಸುಗಮ

ಬಿಜೆಪಿ ಮೂಲಗಳ ಪ್ರಕಾರ, ಶಿವಸೇನೆ ಮತ್ತು ಎನ್‌ಸಿಪಿ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನವನ್ನು ಪಡೆಯಲಿವೆ. ಉಪಮುಖ್ಯಮಂತ್ರಿ ಪಾತ್ರವನ್ನು ಒಪ್ಪಿಕೊಳ್ಳುವ ಅಥವಾ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಆಯ್ಕೆಯನ್ನು ಏಕನಾಥ್ ಶಿಂಧೆ ಅವರಿಗೆ ನೀಡಲಾಗಿದೆ ಎನ್ನಲಾಗಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 288 ಸದಸ್ಯ ಬಲದ ಸದನದಲ್ಲಿ 230 ಸ್ಥಾನಗಳನ್ನು ಗೆಲ್ಲುವ ಮೂಲಕ ಅದ್ಭುತ ಗೆಲುವು ಸಾಧಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯತಿ ಮೈತ್ರಿಕೂಟವು 288 ಸ್ಥಾನಗಳಲ್ಲಿ 235 ಸ್ಥಾನಗಳನ್ನು ಗೆದ್ದು ಅದ್ಭುತ ಯಶಸ್ಸನ್ನು ದಾಖಲಿಸಿದೆ. ಬಿಜೆಪಿ 132 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಶಿವಸೇನೆ (ಏಕನಾಥ್ ಶಿಂಧೆ ಬಣ) 57 ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್​ಸಿಪಿ ಅಜಿತ್ ಪವಾರ್ ಬಣ) 41 ಸ್ಥಾನಗಳನ್ನು ಪಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Mon, 2 December 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ