AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಜ್​ಶಾಲಾದಲ್ಲಿರುವ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಬಳಸಿಕೊಂಡು ನಿರ್ಮಿಸಲಾಗಿದೆ: ಎಎಸ್​ಐ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜ್​ಶಾಲಾ ಸಂಕೀರ್ಣದ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ASI ವರದಿ ದೃಢಪಡಿಸಿದೆ. ವೈಜ್ಞಾನಿಕ ತನಿಖೆ, ಉತ್ಖನನದಲ್ಲಿ ಗಣೇಶ ಸೇರಿ 94 ಶಿಲ್ಪಗಳು ಪತ್ತೆಯಾಗಿದ್ದು, ಇದು ಸರಸ್ವತಿ ದೇವಾಲಯವೆಂದು ಸೂಚಿಸಿದೆ. ಈ 2000 ಪುಟಗಳ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದು, ಮುಂದಿನ ವಿಚಾರಣೆ ಮಾರ್ಚ್ 16ಕ್ಕೆ ನಿಗದಿಯಾಗಿದೆ.

ಭೋಜ್​ಶಾಲಾದಲ್ಲಿರುವ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಬಳಸಿಕೊಂಡು ನಿರ್ಮಿಸಲಾಗಿದೆ: ಎಎಸ್​ಐ
ಕಮಲ್ ಮಸೀದಿ Image Credit source: Moneycontrol
ನಯನಾ ರಾಜೀವ್
|

Updated on:Feb 24, 2026 | 9:58 AM

Share

ಧಾರ್, ಫೆಬ್ರವರಿ 24: ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜ್​ಶಾಲಾ ಸಂಕೀರ್ಣದೊಳಗೆ ಇರುವ ಕಮಲ್ ಮೌಲಾ ಮಸೀದಿ(Mosque)ಯನ್ನು ಪ್ರಾಚೀನ ದೇವಾಲಯದ ಅವಶೇಷಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ ವರದಿ ಹೇಳಿದೆ. ತನ್ನ ತನಿಖಾ ವರದಿಯಲ್ಲಿ ಪ್ರಾಚೀನ ದೇವಾಲಯಗಳ ಅವಶೇಷಗಳನ್ನು ಬಳಸಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದಿದೆ.

ಎಎಸ್​ಐ ಪ್ರಕಾರ, ಈ ತೀರ್ಮಾನವು ವೈಜ್ಞಾನಿಕ ತನಿಖೆ, ಸಮೀಕ್ಷೆಗಳು, ಉತ್ಖನನಗಳು, ಉತ್ಖನನ ಅವಶೇಷಗಳ ಅಧ್ಯಯನ ಮತ್ತು ವಾಸ್ತುಶಿಲ್ಪದ ರಚನೆಗಳು, ಶಾಸನಗಳು, ಕಲೆ ಮತ್ತು ಶಿಲ್ಪಗಳ ವಿಶ್ಲೇಷಣೆಯನ್ನು ಆಧರಿಸಿದೆ. ಈ ಎಎಸ್​ಐ ವರದಿಯನ್ನು ಮದ್ಯಪ್ರದೇಶ ಹೈಕೋರ್ಟ್​​ನ ಇಂದೋರ್ ಪೀಠಕ್ಕೆ ಸಲ್ಲಿಸಲಾಗಿತ್ತು, 10 ಸಂಪುಟಗಳಲ್ಲಿ ಬಿಡುಗಡೆ ಮಾಡಲಾದ ಸುಮಾರು 2,000 ಪುಟಗಳ ವರದಿಯನ್ನು ASI ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ ತ್ರಿಪಾಠಿ ನೇತೃತ್ವ ವಹಿಸಿದ್ದರು.

ಉತ್ಖನನದ ಸಮಯದಲ್ಲಿ ಒಟ್ಟು 94 ಶಿಲ್ಪಗಳು ಮತ್ತು ಅವುಗಳ ಅವಶೇಷಗಳು ಕಂಡುಬಂದವು, ಅವುಗಳಲ್ಲಿ ಹಲವು ಹಾನಿಗೊಳಗಾಗಿದ್ದವು. ಇವುಗಳಲ್ಲಿ ಗಣೇಶ, ಬ್ರಹ್ಮ, ನರಸಿಂಹ ಮತ್ತು ಭೈರವ ಸೇರಿದಂತೆ ಹಲವಾರು ದೇವತೆಗಳ ಕೆತ್ತನೆಗಳು ಹಾಗೂ ಮಾನವ ಮತ್ತು ಪ್ರಾಣಿಗಳ ಆಕೃತಿಗಳು ಸೇರಿವೆ. ಈ ಸ್ಥಳವು ಸರಸ್ವತಿ ದೇವಿಗೆ ಅರ್ಪಿತವಾದ ಪ್ರಾಚೀನ ದೇವಾಲಯವಾಗಿರಬಹುದು ಎಂದು ಎಎಸ್​ಐ ಸೂಚಿಸಿದೆ.

ಮತ್ತಷ್ಟು ಓದಿ: ಬಾಬರಿ ಮಸೀದಿ ಶಿಲಾನ್ಯಾಸದ ವೇಳೆ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಬಂದ ಮುಸ್ಲಿಮರು

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅರ್ಜಿದಾರರು ಮತ್ತು ಹಿಂದೂ ಫ್ರಂಟ್ ಫಾರ್ ಜಸ್ಟೀಸ್‌ನ ರಾಜ್ಯ ಉಪಾಧ್ಯಕ್ಷ ಆಶಿಶ್ ಗೋಯಲ್, ಎಎಸ್‌ಐ ಸಮೀಕ್ಷೆಯು ಸಂಪೂರ್ಣ ರಚನೆಯು ಪರ್ಮಾರ್ ರಾಜವಂಶದ ಹಿಂದಿನದು ಮತ್ತು ರಾಜ ಭೋಜ್ ಮತ್ತು ಅವರ ಪೂರ್ವಜರಿಂದ ನಿರ್ಮಿಸಲ್ಪಟ್ಟಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಹೇಳಿದ್ದಾರೆ. ಈ ರಚನೆಯು ಸರಿಸುಮಾರು 950 ರಿಂದ 1,000 ವರ್ಷಗಳಷ್ಟು ಹಳೆಯದು ಎಂದರು.

ಮತ್ತೊಬ್ಬ ಅರ್ಜಿದಾರರಾದ ಭೋಜ್ ಉತ್ಸವ ಸಮಿತಿ ಸಂಚಾಲಕ ಅಶೋಕ್ ಜೈನ್ ಮಾತನಾಡಿ, ನಮ್ಮ ಬೇಡಿಕೆ ಮೊದಲಿನಿಂದಲೂ ಸ್ಪಷ್ಟವಾಗಿದೆ, ಸ್ಥಳವು ಮಸೀದಿಯಾಗಿದ್ದರೆ, ಅದನ್ನು ಮುಸ್ಲಿಂ ಕಡೆಯವರಿಗೆ ನೀಡಬೇಕು ಮತ್ತು ಅದು ದೇವಾಲಯವಾಗಿದ್ದರೆ, ಅದನ್ನು ಹಿಂದೂ ಕಡೆಯವರಿಗೆ ನೀಡಬೇಕು ಎಂದು ಹೇಳಿದರು.

ನ್ಯಾಯಮೂರ್ತಿ ವಿಜಯ್ ಕುಮಾರ್ ಶುಕ್ಲಾ ಮತ್ತು ನ್ಯಾಯಮೂರ್ತಿ ಅಲೋಕ್ ಅವಸ್ಥಿ ಅವರು ಪಕ್ಷಗಳು ತಮ್ಮ ಆಕ್ಷೇಪಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಹದಿನೈದು ದಿನಗಳೊಳಗೆ ಸಲ್ಲಿಸುವಂತೆ ಕೇಳಿದ್ದಾರೆ, ಮುಂದಿನ ವಿಚಾರಣೆಯನ್ನು ಮಾರ್ಚ್ 16ಕ್ಕೆ ನಿಗದಿಪಡಿಸಲಾಗಿದೆ.

ಧಾರ್‌ನಲ್ಲಿರುವ ಐತಿಹಾಸಿಕ ಸಂಕೀರ್ಣದ ವಿವಾದದ ನಂತರ, ಎಎಸ್‌ಐ ಏಪ್ರಿಲ್ 7, 2003 ರಂದು ಆದೇಶ ಹೊರಡಿಸಿತ್ತು, ಪ್ರತಿ ಮಂಗಳವಾರ ಹಿಂದೂಗಳು ಆ ಸ್ಥಳದಲ್ಲಿ ಪೂಜೆ ಸಲ್ಲಿಸಲು ಮತ್ತು ಪ್ರತಿ ಶುಕ್ರವಾರ ಮುಸ್ಲಿಮರು ಅಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:58 am, Tue, 24 February 26

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ