AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಟೈರ್ ಬ್ಲಾಸ್ಟ್ ಆಗಿ ಸೇತುವೆಗೆ ಡಿಕ್ಕಿ, ಬೆಂಕಿಗೆ 4 ಸ್ನೇಹಿತರು ಸಜೀವ ದಹನ

ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇವಸ್ಥಾನದಿಂದ ಮರಳುತ್ತಿದ್ದ ಐವರು ಸ್ನೇಹಿತರ ಕಾರು ಟೈರ್ ಬ್ಲಾಸ್ಟ್ ಆಗಿ ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ನಾಲ್ವರು ಯುವಕರು ಸಜೀವ ದಹನಗೊಂಡಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಘಟನೆ ತಡರಾತ್ರಿ ನಡೆದಿದ್ದು, ಧಾರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕಾರಿನ ಟೈರ್ ಬ್ಲಾಸ್ಟ್ ಆಗಿ ಸೇತುವೆಗೆ ಡಿಕ್ಕಿ, ಬೆಂಕಿಗೆ 4 ಸ್ನೇಹಿತರು ಸಜೀವ ದಹನ
ಮಧ್ಯಪ್ರದೇಶ ರಸ್ತೆ ಅಪಘಾತImage Credit source: Google
ಅಕ್ಷಯ್​ ಪಲ್ಲಮಜಲು​​
|

Updated on: Oct 26, 2026 | 12:40 PM

Share

ಧಾರ, ಅ.26: ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿ ತಡರಾತ್ರಿ ಅತ್ಯಂತ ಬೆಚ್ಚಿಬೀಳಿಸುವ ಹಾಗೂ ದಾರುಣ ರಸ್ತೆ ಅಪಘಾತವೊಂದು ಸಂಭವಿಸಿದೆ. ಶೃಂಗಾರ ಕ್ಷೇತ್ರವಾದ ಸಾವರಿಯಾ ಸೇಥ್ ದೇವಾಲಯಕ್ಕೆ ತೆರಳಿ ದರ್ಶನ ಪಡೆದು ಮರಳುತ್ತಿದ್ದ ಐವರು ಆಪ್ತ ಸ್ನೇಹಿತರಿದ್ದ ಕಾರು, ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಕಾರಿನೊಳಗೆ ಸಿಲುಕಿಕೊಂಡ ನಾಲ್ವರು ಯುವಕರು ಕ್ಷಣಾರ್ಧದಲ್ಲಿ ಸಜೀವ ದಹನಗೊಂಡಿದ್ದರೆ, ಕಾರಿನಿಂದ ಹೊರಗೆ ಬಿದ್ದ ಮತ್ತೊಬ್ಬ ಯುವಕ ತೀವ್ರ ಗಾಯಗಳೊಂದಿಗೆ ಪವಾಡಸದೃಶ ರೀತಿಯಲ್ಲಿ ಬದುಕಿಳಿದಿದ್ದಾನೆ.

ಧಾರ ಜಿಲ್ಲೆಯ ಸಾದಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಲೇಬಡ್-ನಾಯಗಾಂವ್ ಹಾಗೂ ಮೌ-ನೀಮಚ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಹೀರಾ ಧಾಬಾ ಹಾಗೂ ಸಂಗೇಶರ ಸಮೀಪದ ಸೇತುವೆ ಬಳಿ ಭಾನುವಾರ ತಡರಾತ್ರಿ ಸುಮಾರು 11:14 ರಿಂದ 11:30ರ ವೇಳೆಗೆ ಈ ದುರಂತ ನಡೆದಿದೆ. ಸಾಂಗೋರ್ ಗ್ರಾಮದ ಐವರು ಯುವಕರು ದೇವಸ್ಥಾನದ ದರ್ಶನ ಮುಗಿಸಿ ತಮ್ಮ ಸ್ವಿಫ್ಟ್ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಸೇತುವೆ ದಾಟುವ ವೇಳೆ ಕಾರಿನ ಚಾಲಕನ ಬದಿಯ ಮುಂಭಾಗದ ಟೈರ್ ದಿಢೀರನೆ ಸ್ಫೋಟಗೊಂಡಿದೆ . ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ಕಾಲುವೆ/ಸೇತುವೆಯ ತಗ್ಗಿಗೆ ಬಿದ್ದು, ಕ್ಷಣಾರ್ಧದಲ್ಲೇ ತೀವ್ರವಾಗಿ ಬೆಂಕಿ ಹೊತ್ತಿಕೊಂಡಿದೆ.

ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿದ್ದ ಬಹುತೇಕ ಯುವಕರು ನಿದ್ರೆಯಲ್ಲಿದ್ದರೆನ್ನಲಾಗಿದೆ. ಸೇತುವೆಗೆ ಢಿಕ್ಕಿ ಹೊಡೆದು ತಗ್ಗಿಗೆ ಬಿದ್ದಾಗ ಶಬ್ದದೊಂದಿಗೆ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದರಿಂದ ಯುವಕರಿಗೆ ಹೊರಬರಲು ಸಾಧ್ಯವಾಗದೆ ಒಳಗೆಯೇ ಸಜೀವ ದಹನಗೊಂಡಿದ್ದಾರೆ. ಇನ್ನು ಮೃತಪಟ್ಟವರನ್ನು ಭೀಮ್ ಢಾಕಡ್(24 ವರ್ಷ), ಆದಿತ್ಯ ತಿವಾರಿ (22 ವರ್ಷ), ಚೇತನ್ ಢಾಕಡ್ ( 21 ವರ್ಷ), ಅಭಿಷೇಕ್ ಸೋಲಂಕಿ (19 ವರ್ಷ) ಎಂದು ಗುರುತಿಸಲಾಗಿದೆ. ಇನ್ನು ಮೃತಪಟ್ಟ ನಾಲ್ವರೂ ಸಾಂಗೋರ್ ನಿವಾಸಿಗಳಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಅಮಿತ್ ಶಾ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಕೋರ್ಟ್

ತುಷಾರ್ ಮುಖೇಶ್ ಮಂಡ್ಲೋಯಿ (20 ವರ್ಷ) ಎಂಬ ಯುವಕ ಅಪಘಾತದ ರಭಸಕ್ಕೆ ಕಾರಿನಿಂದ ಹೊರಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶೇ. 35 ರಿಂದ 40 ಪ್ರತಿಶತ ಬೆಂಕಿಯ ಗಾಯಗಳಿಂದ ಬಳಲುತ್ತಿರುವ ಇವನಿಗೆ ಧಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್‌ಗೆ ರವಾನಿಸಲಾಗಿದೆ. ಇವನ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ, ಕಾರು ಸಂಪೂರ್ಣವಾಗಿ ಭಸ್ಮಗೊಂಡಿತ್ತು. ಕಾರಿನೊಳಗೆ ನಾಲ್ವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಧಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಧಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಪಾರುಲ್ ಬೇಲಾಪುರ್ಕರ್ ಹಾಗೂ ಎಸ್‌ಪಿ ಸಚಿನ್ ಶರ್ಮಾ ಅವರ ನಿರ್ದೇಶನದಂತೆ ಸಾದಲ್‌ಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಏನಂದ್ರು ನೋಡಿ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಕುಮಾರಿ ವೇಸ್ಟ್​ ಪೀಸ್ ಎಂದ ಸೌಂದರ್ಯಾ ಶೆಟ್ಟಿ; ನಡೆಯಿತು ದೊಡ್ಡ ಜಗಳ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ