AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Nominees: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿದಂತೆ ನಾಲ್ವರು ಗಣ್ಯರು ರಾಜ್ಯಸಭೆಗೆ ಆಯ್ಕೆ

ಇಳಯರಾಜ(Ilayaraja), ವಿಜಯೇಂದ್ರ ಪ್ರಸಾದ್(Vijayendra Prasad), ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ(Veerendra Heggade), ಪಿ.ಟಿ.ಉಷಾ(PT Usha) ಸೇರಿದಂತೆ ನಾಲ್ವರು ಗಣ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

Rajya Sabha Nominees: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿದಂತೆ ನಾಲ್ವರು ಗಣ್ಯರು ರಾಜ್ಯಸಭೆಗೆ ಆಯ್ಕೆ
ಡಾ. ಡಿ ವೀರೇಂದ್ರ ಹೆಗ್ಗಡೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 08, 2022 | 12:22 PM

ಬೆಂಗಳೂರು: ಕೇಂದ್ರ ಸರ್ಕಾರ ನಾಲ್ವರು ಗಣ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಇಳಯರಾಜ(Ilayaraja), ವಿಜಯೇಂದ್ರ ಪ್ರಸಾದ್(Vijayendra Prasad), ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ(Veerendra Heggade), ಪಿ.ಟಿ.ಉಷಾ(PT Usha) ಸೇರಿದಂತೆ ನಾಲ್ವರು ಗಣ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ವಿಟರ್ನಲ್ಲಿ ಶುಭಾಶಯ ಕೋರಿದ್ದಾರೆ. ಹಾಗೂ ಇವರ ಆಯ್ಕೆಯಿಂದ ರಾಜ್ಯಸಭೆಯ ಘನತೆ ಹೆಚ್ಚಾಗಲಿದೆ ಎಂದಿದ್ದಾರೆ.

ತಮಿಳುನಾಡಿನಿಂದ ಸಂಗೀತ ನಿರ್ದೇಶಕ ಇಳಯರಾಜ, ಕರ್ನಾಟಕದಿಂದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಕೇರಳದಿಂದ ಕ್ರೀಡಾಪಟು ಪಿ.ಟಿ ಉಷಾ, ನಿರ್ದೇಶಕ ಎಸ್.ಎಸ್.ರಾಜಮೌಳಿ ತಂದೆ, ಖ್ಯಾತ ಕಥೆಗಾರ ವಿಜಯೇಂದ್ರ ಪ್ರಸಾದ್ ಸೇರಿ ನಾಲ್ವರನ್ನು ಕೇಂದ್ರ ಸರಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ವೀರೇಂದ್ರ ಹೆಗ್ಗಡೆ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನವೆಂಬರ್ 25, 1948 ರಂದು ಜನಿಸಿದರು. ಅವರು 20 ವರ್ಷದವರಿರುವಾಗಲೆ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಯಾದರು. ಸ್ವತಃ ಜೈನರಾಗಿ ಹಿಂದೂ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ನಿರ್ವಹಿಸುವ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಕ್ಷೇತ್ರಕ್ಕೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರ ಎಂದು ಹೆಸರು ಬರುವಂತೆ ಮಾಡಿದ್ದಾರೆ.ಧರ್ಮಸ್ಥಳದ ಬೃಹತ್ ಬಾಹುಬಲಿಯ ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದವರು ಇವರೇ. ಇವರು ವಿವಿಧ ಪರಿವರ್ತನಾ ಉಪಕ್ರಮಗಳನ್ನು ಮುನ್ನಡೆಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RDSETI) ಸ್ಥಾಪಿಸಿದರು. ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗ ಅವಕಾಶಗಳ ಬಗ್ಗೆ ಅರಿವು ಮತ್ತು ತರಬೇತಿ ನೀಡಿದರು.

ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಗುರುತಿಸಿ ಸರ್ಕಾರ ಮತ್ತು ಅನೇಕ ಸಂಸ್ಥೆಗಳು ಅವರಿಗೆ ಪ್ರಶಸ್ತಿ-ಗೌರವಗಳನ್ನು ನೀಡಿವೆ. -2015ರಲ್ಲಿ ಭಾರತ ಸರಕಾರದಿಂದ ಪದ್ಮವಿಭೂಷಣ ಪ್ರಶಸ್ತಿ. -1985ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ -1993ರಲ್ಲಿ ಅಂದಿನ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ರವರಿಂದ “ರಾಜರ್ಷಿ” ಗೌರವ. -1994ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ ದೊರಕಿದೆ. -ಮಂಗಳೂರು ವಿಶ್ವವಿದ್ಯಾಲಯ ಇವರಿಗೆ ಗೌರವ ಡಾಕ್ಟರೇಟ್ ನೀಡಿದೆ. -2003ರ, ದೇವಿ ಅಹಲ್ಯಾಬಾಯಿ ರಾಷ್ಟ್ರೀಯ ಪುರಸ್ಕಾರ, -2011ರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರಿಗೆ 2009ನೇ ಸಾಲಿನ ಕರ್ನಾಟಕ ಸರಕಾರ ನೀಡುವ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ “ಕರ್ನಾಟಕ ರತ್ನ” ನೀಡಿ ಪುರಸ್ಕರಿಸಲಾಗಿದೆ. ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಪ್ರತಿವರ್ಷ ನೀಡುವ ಸರ್‌ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ 2011ನೇ ಸಾಲಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ದೊರೆತಿದೆ. ಅನೇಕ ಧಾರ್ಮಿಕ ಮಠಗಳು ಇವರಿಗೆ “ಧರ್ಮರತ್ನ”, “ಧರ್ಮಭೂಷಣ”. “ಅಭಿನವ ಚಾವುಂಡರಾಯ”, “ಪರೋಪಕಾರ ಧುರಂಧರ” ಮೊದಲಾದ ಬಿರುದುಗಳನ್ನು ನೀಡಿ ಗೌರವಿಸಿವೆ.ಇತ್ತೀಚೆಗೆ 2004ರ “ವರ್ಷದ ಕನ್ನಡಿಗ” ಗೌರವ ವೀರೇಂದ್ರ ಹೆಗ್ಗಡೆಯವರಿಗೆ ಲಭಿಸಿದೆ.

ಇಳಯರಾಜ ಪದ್ಮಭೂಷಣ ಪ್ರಶಸ್ತಿ ವಿಜೇತ ಇಳಯರಾಜ ಅವರು ಕನ್ನಡ, ತೆಲುಗು, ತಮಿಳು, ಚಿತ್ರಗಳ ಖ್ಯಾತ ಸಂಗೀತ ನಿರ್ದೇಶಕರು. ಇವರು ಜನಿಸಿದ್ದು 2 ಜೂನ್ 1943 ತಮಿಳುನಾಡಿನ ಪನೈಪುರಂನಲ್ಲಿ. ತಮ್ಮ ಚಿಕ್ಕ ವಯಸ್ಸಿನಲ್ಲೇ ಸಂಗೀತ ಕಲಿಯುವುದರಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದು ಇವರು ಇಂದು ಇಡೀ ವಿಶ್ವವನ್ನೇ ಗೆದ್ದ ಸಂಗೀತ ಮಾಂತ್ರಿಕರಾಗಿ ಬೆಳೆದಿದ್ದಾರೆ. ಇವರು 1970 ದಿಂದ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಲು ಪ್ರಾರಂಭಿಸಿದರು. ಈವರೆಗೆ 8000ಕ್ಕೂ ಹೆಚ್ಚು ಹಾಡುಗಳನ್ನು ಸಂಯೋಜನೆ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು, ಭಾಷೆಯಲ್ಲಿ ರಾಷ್ಟ್ರೀಯ & ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇದನ್ನೂ ಓದಿ:  Ilaiyaraaja Birthday: ಇಳಯರಾಜ ಜನ್ಮದಿನ; ವಿಶೇಷ ಕಾರ್ಯಕ್ರಮದ ಮೂಲಕ ಹುಟ್ಟುಹಬ್ಬ ಆಚರಿಸಲಿರುವ ಸಂಗೀತ ಮಾಂತ್ರಿಕ

ಇಳಯರಾಜ ಅವರಿಗೆ ಲಭಿಸಿದ ಪ್ರಶಸ್ತಿಗಳು -ಪದ್ಮಭೂಷಣ ಪ್ರಶಸ್ತಿ -ನ್ಯಾಷನಲ್ ಫಿಲ್ಮ್ ಅವಾರ್ಡ್ಸ್ -ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟ್ ಅವಾರ್ಡ್ -ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ -ಫಿಲ್ಮ್ ಫೇರ್ ಅವಾರ್ಡ್ಸ್ -ಕೇರಳ ರಾಜ್ಯ ಫಿಲ್ಮ್ ಫೇರ್ ಅವಾರ್ಡ್ -ಕೇರಳ ರಾಜ್ಯ ಸರ್ಕಾರ ಪ್ರಶಸ್ತಿ -ಸ್ಕ್ರೀನ್ ಅವಾರ್ಡ್ಸ್ -ನಂದಿ ಅವಾರ್ಡ್ಸ್ -ತಮಿಳುನಾಡು ರಾಜ್ಯ ಪ್ರಶಸ್ತಿ -ತಮಿಳುನಾಡು ರಾಜ್ಯ ಫಿಲ್ಮ್ ಅವಾರ್ಡ್ಸ್ -ನಾರ್ವೆ ತಮಿಳ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ -ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ

ವಿಜಯೇಂದ್ರ ಪ್ರಸಾದ್ ಕೊಡುರಿ ವಿಶ್ವ ವಿಜಯೇಂದ್ರ ಪ್ರಸಾದ್ ಚಿತ್ರಕಥೆಗಾರ ಮತ್ತು ಚಲನಚಿತ್ರ ನಿರ್ದೇಶಕರಾಗಿದ್ದಾರೆ. ತಮಿಳು ಮತ್ತು ಹಿಂದಿ ಚಿತ್ರರಂಗದ ಜೊತೆಗೆ ತೆಲುಗು ಚಿತ್ರರಂಗದಲ್ಲಿ ಉತ್ತಮ ಹೆಸರುಗಳಿಸಿದ್ದಾರೆ. ಚಿತ್ರಕಥೆಗಾರನಾಗಿ ಇಪ್ಪತ್ತೈದಕ್ಕೂ ಹೆಚ್ಚು ಚಲನಚಿತ್ರಗಳನ್ನು ಮಾಡಿದ್ದಾರೆ. ಬಾಹುಬಲಿ, RRR, ಬಜರಂಗಿ ಭಾಯಿಜಾನ್, ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝಾನ್ಸಿ, ಮಗಧೀರ ಮತ್ತು ಮೆರ್ಸಲ್‌ನಂತಹ ಚಲನಚಿತ್ರಗಳಿಗೆ ಚಿತ್ರಕಥೆಗಾರರಾಗಿ ಗಮನಾರ್ಹ ಕೆಲಸ ಮಾಡಿದ್ದಾರೆ. 2011 ರಲ್ಲಿ, ಇವರ ತೆಲುಗು ಚಲನಚಿತ್ರ ರಾಜಣ್ಣಗೆ ಅತ್ಯುತ್ತಮ ಚಲನಚಿತ್ರಕ್ಕಾಗಿ ನಂದಿ ಪ್ರಶಸ್ತಿ ಬಂದಿದೆ. ಬಜರಂಗಿ ಭಾಯಿಜಾನ್ ಚಿತ್ರಕ್ಕಾಗಿ 2016 ರಲ್ಲಿ ಅತ್ಯುತ್ತಮ ಕಥೆಗಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಬಂದಿದೆ.

ಪಿ.ಟಿ.ಉಷಾ ಇವರು ಜೂನ್ 27, 1964 ರಂದು ಕೇರಳದ ಉತ್ತರ ಮಲಬಾರ್ ನ ಕರಾವಳಿ ಕೊಜಿಕೊಡ್ ಜಿಲ್ಲೆಯ ಪಯ್ಯೊಲಿ ಹಳ್ಳಿಯಲ್ಲಿ ಜನಿಸಿದರು. ಇವರು ಭಾರತದ ಪ್ರಖ್ಯಾತ ಕ್ರೀಡಾಪಟು. ಪಿ.ಟಿ ಉಷಾ 1979ರಿಂದಲೂ ಭಾರತದ ಕ್ರೀಡಾವಲಯದೊಂದಿಗೆ ತಮ್ಮ ಒಡನಾಟ ಹೊಂದಿದ್ದಾರೆ. ಇವರನ್ನು “ಭಾರತದ ಓಟದ ರಾಣಿ” ಎಂದು ಕರೆಯಲಾಗುತ್ತೆ. ಸದ್ಯ ಇವರು ಕೊಯಿಲ್ಯಾಂಡಿಯಲ್ಲಿ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ ಎಂಬ ಸಂಸ್ಥೆ ನಡೆಸುತ್ತಿದ್ದಾರೆ.

ಪಿ.ಟಿ.ಉಷಾರಿಗೆ ಸಿಕ್ಕ ಪ್ರಶಸ್ತಿಗಳು -ಅರ್ಜುನ ಪ್ರಶಸ್ತಿ -ಅತ್ಯುತ್ತಮ ಮಹಿಳಾ ಅಥ್ಲೆಟಿ ಪ್ರಶಸ್ತಿ -ಪದ್ಮಶ್ರೀ. -ಬೆಸ್ಟ್ ಅಥ್ಲೆಟಿ ಏಷಿಯನ್ ಅವಾರ್ಡ್ ಗಳು -ಅತ್ಯುತ್ತಮ ರೈಲ್ವೆ ಕ್ರೀಡಾಳು ಮಾರ್ಶಲ್ ಟಿಟೊ ಪ್ರಶಸ್ತಿ -ಸಿಯೊಲ್ ಏಷಿಯನ್ ಗೇಮ್ಸ್ , ನಲ್ಲಿ ಅತ್ಯುತ್ತಮ ಅಥ್ಲೆಟಿಯಾಗಿ ಆದಿದಾಸ್ ಗೊಲ್ಡನ್ ಶೂ ಅವಾರ್ಡ್ -ಅಥ್ಲೆಟಿಕ್ಸ್ ನಲ್ಲಿ ಅತ್ಯುತ್ತಮ ಸಾಧನೆಗಾಗಿ ಮೂವತ್ತು ಇಂಟರ್ ನ್ಯಾಶನಲ್ ಅವಾರ್ಡ್ಸ್ -ಕೇರಳ ಸ್ಪೋರ್ಟ್ಸ್ ಜರ್ನಾಲಿಸ್ಟ್ಸ್ ಅವಾರ್ಡ್ -ಅತ್ಯುತ್ತಮ ಅಥ್ಲೆಟಿಗಾಗಿ ವರ್ಲ್ಡ್ ಟ್ರೊಫಿ

Published On - 8:49 pm, Wed, 6 July 22

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ