NEET ವಿವಾದ: NTA ಕಾರ್ಯಚಟುವಟಿಕೆಯನ್ನು ಪರಿಶೀಲಿಸಲು ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
"ನಾವು ಯಾವುದೇ ದೋಷಗಳಿಲ್ಲದೆ ಪರೀಕ್ಷೆಗಳನ್ನು ನಡೆಸಲು ಬದ್ಧರಾಗಿದ್ದೇವೆ.NTA ಕಾರ್ಯನಿರ್ವಹಣೆಯನ್ನು ಸುಧಾರಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದೆ" ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ.
ದೆಹಲಿ ಜೂನ್ 20: ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ (NEET Exam) ಅಕ್ರಮ ನಡೆದಿದೆ ಎಂಬ ಆರೋಪದ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಕೇಂದ್ರವು ಗುರುವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ. “ನಾವು ಯಾವುದೇ ದೋಷಗಳಿಲ್ಲದೆ ಪರೀಕ್ಷೆಗಳನ್ನು ನಡೆಸಲು ಬದ್ಧರಾಗಿದ್ದೇವೆ. NTA ಕಾರ್ಯನಿರ್ವಹಣೆಯನ್ನು ಸುಧಾರಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದೆ” ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ.
ಎನ್‌ಟಿಎ, ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಮತ್ತು ಡೇಟಾ ಭದ್ರತಾ ಪ್ರೋಟೋಕಾಲ್ ಅನ್ನು ಇನ್ನಷ್ಟು ಸುಧಾರಿಸಲು ಉನ್ನತ ಮಟ್ಟದ ಸಮಿತಿಯಿಂದ ಶಿಫಾರಸುಗಳನ್ನು ನಿರೀಕ್ಷಿಸಲಾಗುವುದು. ಎನ್‌ಟಿಎಯ ಯಾವುದೇ ಅಧಿಕಾರಿಯು ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಚಿವರು ಹೇಳಿದ್ದಾರೆ. ಸರ್ಕಾರವು ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ. ಪಾರದರ್ಶಕತೆಯೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ.
ಧರ್ಮೇಂದ್ರ ಪ್ರಧಾನ್ ಸುದ್ದಿಗೋಷ್ಠಿ
Live: Press briefing https://t.co/OkuPyC9MVC
— Dharmendra Pradhan (@dpradhanbjp) June 20, 2024
ನಾವು ನೀಟ್ ಪರೀಕ್ಷೆಯ ಬಗ್ಗೆ ಬಿಹಾರ ಸರ್ಕಾರದಿಂದ ಮಾಹಿತಿ ಸ್ವೀಕರಿಸಿದ್ದೇವೆ. ಪಾಟ್ನಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಭಾರತ ಸರ್ಕಾರಕ್ಕೆ ವಿವರವಾದ ವರದಿಯನ್ನು ಕಳುಹಿಸುತ್ತಾರೆ. ಪ್ರಾಥಮಿಕ ಮಾಹಿತಿಯು ದೋಷಗಳು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿದೆ ಎಂದು ಸೂಚಿಸುತ್ತದೆ. ನಮ್ಮ ವ್ಯವಸ್ಥೆಗಳಲ್ಲಿ ನಮಗೆ ನಂಬಿಕೆ ಇರಲಿ; ಯಾವುದೇ ಅಕ್ರಮಗಳು ಅಥವಾ ದುಷ್ಕೃತ್ಯಗಳನ್ನು ಸರ್ಕಾರವು ಸಹಿಸುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.
ಯುಜಿಸಿ-ನೆಟ್ ಪರೀಕ್ಷೆಯ ಪತ್ರಿಕೆ ಡಾರ್ಕ್‌ನೆಟ್‌ನಲ್ಲಿ ಸೋರಿಕೆ
ಯುಜಿಸಿ-ನೆಟ್ ಪರೀಕ್ಷೆಯ ಪತ್ರಿಕೆ ಡಾರ್ಕ್‌ನೆಟ್‌ನಲ್ಲಿ ಸೋರಿಕೆಯಾಗಿದ್ದು, ಅದನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವರು ಹೇಳಿದ್ದಾರೆ. “ಡಾರ್ಕ್ ನೆಟ್‌ನಲ್ಲಿರುವ UGC-NET ಪ್ರಶ್ನೆಪತ್ರಿಕೆಯು UGC-NET ನ ಮೂಲ ಪ್ರಶ್ನೆಪತ್ರಿಕೆಗೆ ಹೊಂದಿಕೆಯಾಗುತ್ತದೆ ಎಂಬುದು ಸ್ಪಷ್ಟವಾದ ನಂತರ, ನಾವು ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ಪ್ರಧಾನ್ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:10 pm, Thu, 20 June 24