Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷವು ಸಂವಿಧಾನವನ್ನೇ ಬುಡಮೇಲು ಮಾಡುವ ಪಾಪ ಮಾಡಿತ್ತು: ಧಮೇಂದ್ರ ಪ್ರಧಾನ್

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಕಾಂಗ್ರೆಸ್​ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಿ.ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದಾಗ ಸಂವಿಧಾನವನ್ನು ದುರುಪಯೋಗಪಡಿಸಿಕೊಳ್ಳುವ ಪಾಪವನ್ನು ಮಾಡಿದ್ದರು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಸಂವಿಧಾನವನ್ನೇ ಬುಡಮೇಲು ಮಾಡುವ ಪಾಪ ಮಾಡಿತ್ತು: ಧಮೇಂದ್ರ ಪ್ರಧಾನ್
ಧಮೇಂದ್ರ ಪ್ರಧಾನ್
Follow us
ನಯನಾ ರಾಜೀವ್
|

Updated on: Jun 26, 2023 | 12:48 PM

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಕಾಂಗ್ರೆಸ್​ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಿ.ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದಾಗ ಸಂವಿಧಾನವನ್ನು ದುರುಪಯೋಗಪಡಿಸಿಕೊಳ್ಳುವ ಪಾಪವನ್ನು ಮಾಡಿದ್ದರು ಎಂದು ಹೇಳಿದ್ದಾರೆ. ಹೀಗಾಗಿ ಆ ದಿನವನ್ನು ಕರಾಳ ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ದೇಶದಲ್ಲಿ ಸಂವಿಧಾನವನ್ನು ಬುಡಮೇಲು ಮಾಡುವ ಪಾಪವನ್ನು ಕಾಂಗ್ರೆಸ್ ಮಾಡಿದೆ ಮತ್ತು ಅದೇ ದಿನವನ್ನು ಕರಾಳ ದಿನವನ್ನಾಗಿ ಆಚರಿಸುತ್ತೇವೆ ಎಂದಿದ್ದಾರೆ. 1975ರ ಜೂನ್ 25ರಂದು ಕಾಂಗ್ರೆಸ್​ ಪಕ್ಷವು ಜನರಿಗೆ ಎಷ್ಟು ಅಪಾಯಕಾರಿ ಎಂಬುದನ್ನು ತಿಳಿಸಿಕೊಟ್ಟಿತ್ತು. ತುರ್ತು ಪರಿಸ್ಥಿತಿಯು ಜೂನ್ 25 1075 ರಿಂದ ಮಾರ್ಚ್​ 21 1977ರವರೆಗೆ ಜಾರಿಯಲ್ಲಿತ್ತು. ಆ ದಿನದಂದು ಮಹಾ ಜನ ಸಂಪರ್ಕ ಅಭಿಯಾನವನ್ನು ನಡೆಸಲು ಪಕ್ಷವು ನಿರ್ಧರಿಸಿದೆ.

ಮತ್ತಷ್ಟು ಓದಿ: ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಅಭಿಯಾನದಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೌತಮಬುದ್ಧ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ, ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ ಹಾಗೂ ಸಚಿವೆ ಮೀನಾಕ್ಷಿ ಲೇಖಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವದ ಮನೋಭಾವವನ್ನು ಬಲಪಡಿಸಲು ಶ್ರಮಿಸಿದ ಎಲ್ಲ ಧೈರ್ಯಶಾಲಿಗಳಿಗೆ ನಾನು ಗೌರವ ಸಲ್ಲಿಸುತ್ತೇನೆ. ತುರ್ತು ಪರಿಸ್ಥಿತಿಯ ಕರಾಳ ದಿನಗಳು ನಮ್ಮ ಇತಿಹಾಸದ ಆ ಅವಧಿಯಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ. ಇದು ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ಸಂಪೂರ್ಣ ವಿರುದ್ಧವಾಗಿತ್ತು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ