ನಿತೀಶ್ ಕುಮಾರ್ ಮೈತ್ರಿ ಸರ್ಕಾರದ ಆಡಳಿತ ವೈಫಲ್ಯ ಬಯಲಾಗಿದೆ: ಧರ್ಮೇಂದ್ರ ಪ್ರಧಾನ್

|

Updated on: Jul 14, 2023 | 11:02 AM

ಬಿಹಾರದಲ್ಲಿ ನಡೆದ ಪೊಲೀಸ್ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವ್ನನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಿತೀಶ್ ಕುಮಾರ್ ಮೈತ್ರಿ ಸರ್ಕಾರದ ಆಡಳಿತ ವೈಫಲ್ಯ ಬಯಲಾಗಿದೆ: ಧರ್ಮೇಂದ್ರ ಪ್ರಧಾನ್
ಧಮೇಂದ್ರ ಪ್ರಧಾನ್
Follow us on

ಬಿಹಾರದಲ್ಲಿ ನಡೆದ ಪೊಲೀಸ್ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವ್ನನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಲಾಠಿ ಚಾರ್ಜ್​, ಅಶ್ರುವಾಯು, ಸತ್ಯ ಹೇಳಿದವರನ್ನು ವಿಧಾನಸಭೆಯಿಂದ ಹೊರಹಾಕುವುದು ಇದು ನಿತೀಶ್​ ಕುಮಾರ್ ಮೈತ್ರಿ ಸರ್ಕಾರದ ಉತ್ತಮ ಆಡಳಿತವೇ ಎಂದು ಕಿಡಿಕಾರಿದ್ದಾರೆ.

ಪಕ್ಷದ ಪದಾಧಿಕಾರಿ ವಿಜಯ್ ಕುಮಾರ್ ಸಿಂಗ್ ಅವರ ಸಾವಿನಿಂದ ಬಿಜೆಪಿ ಕೋಪಗೊಂಡಿದೆ. ಶಿಕ್ಷಕರ ನೇಮಕಾತಿಗಾಗಿ ಹೊರ ರಾಜ್ಯಗಳಿಂದ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟಿಸಲು ಆಯೋಜಿಸಿದ್ದ ಸಭೆಯಲ್ಲಿ ಸಿಂಗ್ ಭಾಗವಹಿಸಿದ್ದರು.

ಪ್ರತಿಭಟನೆಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಟ್ನಾ ತಲುಪಿದ್ದರು. ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಒತ್ತಾಯಿಸಿದರು. ಈ ವೇಳೆ ಬಿಹಾರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹತ್ತಾರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಬಿಜೆಪಿ ಸಂಸದ ಜನಾರ್ದನ್ ಸಿಂಗ್, ಅಶೋಕ್ ಯಾದವ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ಲಾಠಿಚಾರ್ಜ್‌ನಲ್ಲಿ ಅವರೂ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು

ಬಿಜೆಪಿ ನಾಯಕ ವಿಜಯ್ ಕುಮಾರ್ ಸಿಂಗ್ ಅವರನ್ನು ಕೊಂದ ಲಾಠಿ ಚಾರ್ಜ್ ಪ್ರಜಾಪ್ರಭುತ್ವ ವಿರೋಧಿ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಬಿಹಾರದಲ್ಲಿ 1.7 ಲಕ್ಷ ಶಿಕ್ಷಕರ ಹುದ್ದೆಗಳಿಗೆ ಲಕ್ಷಾಂತರ ಅರ್ಜಿಗಳು ಬಂದಿವೆ, ತಿಭಟನೆಯಲ್ಲಿ ತೊಡಗಿದ್ದ ಹಲವು ಪಕ್ಷದ ಮುಖಂಡರನ್ನು ಬಂಧಿಸಲಾಗಿದೆ. ಬಿಜೆಪಿ ರಾಜ್ಯಸಭಾ ಸಂಸದ ಸುಶೀಲ್ ಮೋದಿ ಅವರನ್ನೂ ವಶಕ್ಕೆ ಪಡೆಯಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ