AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್ ಸಂಸತ್‌ಗೆ ಮರಳಿದರು. ಎನ್‌ಡಿಎ ಸಂಸದರು ಭವ್ಯ ಸ್ವಾಗತ ನೀಡಿದರು. ಜೈರಾಮ್ ರಮೇಶ್ ಅವರ ವ್ಯಂಗ್ಯಕ್ಕೆ ಪ್ರಧಾನ್, "ನಾನು ಬೀದಿ ಹೋರಾಟಗಾರ, ಎಸಿ ಕೊಠಡಿಯಲ್ಲಿ ಕೂರುವ ಕಾರ್ಯಕರ್ತನಲ್ಲ" ಎಂದು ಖಡಕ್ ತಿರುಗೇಟು ನೀಡಿದರು. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಅವರ ನಿರ್ಧಾರವನ್ನು ಬಿಜೆಪಿ ನಾಯಕರು ಶ್ಲಾಘಿಸಿದ್ದಾರೆ, ಪ್ರಧಾನ್ ಅವರ ಮುಂದಿನ ರಾಜಕೀಯ ಪಾತ್ರ ಕುತೂಹಲ ಕೆರಳಿಸಿದೆ.

ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು
ಧರ್ಮೇಂದ್ರ ಪ್ರಧಾನ್
ನಯನಾ ರಾಜೀವ್
|

Updated on: Jul 27, 2026 | 3:30 PM

Share

ನವದೆಹಲಿ, ಜುಲೈ 27: ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ಸಂಸತ್ತಿಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಎನ್‌ಡಿಎ ಸಂಸದರು ಭವ್ಯ ಸ್ವಾಗತ ಕೋರಿದರು. ಈ ವೇಳೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರ ಹೇಳಿಕೆಗೆ ಪ್ರಧಾನ್ ನೀಡಿದ ತಿರುಗೇಟು ಸಂಸತ್ತಿನ ಅಂಗಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸಂಸತ್ತಿನ ಆವರಣದಲ್ಲಿ ಪ್ರಧಾನ್ ಅವರನ್ನು ಎದುರುಗೊಂಡ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, “ಇದೆಲ್ಲಾ ನಡೆಯುತ್ತಿರುತ್ತದೆ ಬಿಡಿ” ಎಂದು ವ್ಯಂಗ್ಯವಾಗಿ ಮಾತನಾಡಿ ಸಮಾಧಾನಪಡಿಸಲು ಯತ್ನಿಸಿದರು. ಇದಕ್ಕೆ ತಕ್ಷಣವೇ ಪ್ರತ್ಯುತ್ತರ ನೀಡಿದ ಪ್ರಧಾನ್, “ಏನೂ ಆಗಿಲ್ಲ, ನಾನು ಬೀದಿ ಹೋರಾಟಗಾರ , ಎಸಿ ಕೊಠಡಿಯಲ್ಲಿ ಕೂರುವ ಕಾರ್ಯಕರ್ತನಲ್ಲ ಎಂದು ಖಡಕ್ ಆಗಿ ತಿರುಗೇಟು ನೀಡಿದ್ದಾರೆ.

ಸಂಸತ್ತಿನಲ್ಲಿ ಭವ್ಯ ಸ್ವಾಗತ ಸೋಮವಾರ ಪ್ರಧಾನ್ ಅವರು ಕಾರಿನಿಂದ ಇಳಿಯುತ್ತಿದ್ದಂತೆ ಎನ್‌ಡಿಎ ಸಂಸದರು “ಧರ್ಮೇಂದ್ರ ಪ್ರಧಾನ್ ಜಿಂದಾಬಾದ್” ಎಂದು ಜಯಘೋಷ ಕೂಗಿದರು. ಒಬ್ಬ ಸಂಸದರು ಸಾಂಪ್ರದಾಯಿಕ ಟೋಪಿ ಹಾಕಿ, ಶಾಲು ಹೊದಿಸಿ ಗೌರವಿಸಿದರು. ಯಾವುದೇ ನೇರ ಆರೋಪಗಳಿಲ್ಲದಿದ್ದರೂ ಯುವಕರ ಭವಿಷ್ಯಕ್ಕಾಗಿ ಹಾಗೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಅವರ ನಿರ್ಧಾರವನ್ನು ಬಿಜೆಪಿ ನಾಯಕರು “ತ್ಯಾಗ ಮತ್ತು ರಾಜಕೀಯ ಹೊಣೆಗಾರಿಕೆಯ ಮಾದರಿ” ಎಂದು ಬಣ್ಣಿಸಿದ್ದಾರೆ.

ವಿಡಿಯೋ

ಒಡಿಶಾದ ಸಂಬಲ್ಪುರ ಕ್ಷೇತ್ರದ ಸಂಸದರಾಗಿರುವ ಧರ್ಮೇಂದ್ರ ಪ್ರಧಾನ್, ರಾಜ್ಯ ಬಿಜೆಪಿಯ ಅತ್ಯಂತ ಪ್ರಭಾವಿ ನಾಯಕರಾಗಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ಮತ್ತು 78 ಶಾಸಕರಲ್ಲಿ ಬಹುಪಾಲು ಶಾಸಕರನ್ನು ಬೆಳೆಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ.

ಮತ್ತಷ್ಟು ಓದಿ: ನೀಟ್​ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?

ಪ್ರಧಾನ್ ಅವರು ಕೇವಲ ಸಚಿವರಷ್ಟೇ ಅಲ್ಲದೆ, ಪಕ್ಷದ ಪ್ರಮುಖ ‘ಚುನಾವಣಾ ತಂತ್ರಜ್ಞ’ ಎಂದು ಹೆಸರು ಪಡೆದಿದ್ದಾರೆ. ಇತ್ತೀಚೆಗೆ ಹರಿಯಾಣ, ಬಿಹಾರ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದ ಭವಾನಿಪುರ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಗೆಲುವಿನ ಹಿಂದೆ ಇವರ ಪರಿಶ್ರಮವಿತ್ತು. ಸಚಿವ ಸ್ಥಾನದಿಂದ ಕೆಳಗಿಳಿದಿರುವ ಪ್ರಧಾನ್ ಅವರಿಗೆ ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಉಸ್ತುವಾರಿ ಅಥವಾ ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ರಾಷ್ಟ್ರೀಯ ಹುದ್ದೆಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ