AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DHFL ಹಗರಣ : ಅವಿನಾಶ್ ಭೋಸಲೆ ಅವರ ಅಗಸ್ಟಾ ವೆಸ್ಟ್​ ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡ ಸಿಬಿಐ

ಡಿಎಚ್​ಎಫ್​ಎಲ್ ಹಗರಣಕ್ಕೆ ಸಂಬಂಧಿಸಿದಂತೆ ಪುಣೆ ಮೂಲದ ಉದ್ಯಮಿ ಅವಿನಾಶ್ ಭೋಸಲೆಗೆ ಸೇರಿದ ಅಗಸ್ಟಾ ವೆಸ್ಟ್​ಲ್ಯಾಂಡ್ ಹೆಲಿಕಾಪ್ಟರ್​ ಅನ್ನು ಸಿಬಿಐ ವಶಪಡಿಸಿಕೊಂಡಿದೆ.

DHFL ಹಗರಣ : ಅವಿನಾಶ್ ಭೋಸಲೆ ಅವರ ಅಗಸ್ಟಾ ವೆಸ್ಟ್​ ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡ ಸಿಬಿಐ
Agusta WestlandImage Credit source: India.com
TV9 Web
| Edited By: |

Updated on: Jul 31, 2022 | 9:56 AM

Share

ಡಿಎಚ್​ಎಫ್​ಎಲ್ ಹಗರಣಕ್ಕೆ ಸಂಬಂಧಿಸಿದಂತೆ ಪುಣೆ ಮೂಲದ ಉದ್ಯಮಿ ಅವಿನಾಶ್ ಭೋಸಲೆಗೆ ಸೇರಿದ ಅಗಸ್ಟಾ ವೆಸ್ಟ್​ಲ್ಯಾಂಡ್ ಹೆಲಿಕಾಪ್ಟರ್​ ಅನ್ನು ಸಿಬಿಐ ವಶಪಡಿಸಿಕೊಂಡಿದೆ. 34,614 ಕೋಟಿ ರೂ ಬ್ಯಾಂಕ್ ಹಗರಣದಲ್ಲಿ ಈ ಹೆಲಿಕಾಪ್ಟರ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹಗರಣ ಸಂಬಂಧ ಆಸ್ತಿ ವಶಕ್ಕೆ ಪಡೆಯಲು ಸಿಬಿಐ ಅಧಿಕಾರಿಗಳು ಅವಿನಾಶ್​ಗೆ ಸಂಬಂಧಿಸಿದ ಸಂಸ್ಥೆ ಹಾಗೂ ಆಸ್ತಿಗಳ ಮೇಲೆ ದಾಳಿ ನಡೆಸಿದ್ದರು.

ಈ ವೇಳೆ ಹೆಲಿಕಾಪ್ಟರ್ ಪತ್ತೆಯಾಗಿದ್ದು, ಅದನ್ನು ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಇತ್ತೀಚೆಗಷ್ಟೇ ಅವಿನಾಶ್ ಅಗಸ್ಟಾ ವೆಸ್ಟ್​ಲ್ಯಾಂಡ್ ನಿರ್ಮಾಣದ ಹೆಲಿಕಾಪ್ಟರ್ ಖರೀದಿಸಿದ್ದರು ಎಂದು ತಿಳಿದುಬಂದಿದೆ. ಜೂನ್ 20 ರಂದು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಡಿಎಚ್‌ಎಫ್‌ಎಲ್ ಅಧಿಕಾರಿಗಳಾದ ಕಪಿಲ್ ವಾಧವನ್, ದೀಪಕ್ ವಾಧವನ್ ಮತ್ತು ಇತರರ ವಿರುದ್ಧ ಸಿಬಿಐ ಆರೋಪ ಹೊರಿಸಿತ್ತು.

ಸಿಬಿಐ ಪ್ರಕಾರ, ಅವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್‌ಗಳ ಒಕ್ಕೂಟಕ್ಕೆ ಡಿಎಚ್‌ಎಫ್‌ಎಲ್‌ನ ಬೋಗಸ್ ಲೆಡ್ಜರ್‌ಗಳಲ್ಲಿ 34,615 ಕೋಟಿ ಬ್ಯಾಂಕ್ ಸಾಲಗಳನ್ನು ನೀಡುವ ಮೂಲಕ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೋಟಿಗಟ್ಟಲೆ ಮೌಲ್ಯದ ಪೇಂಟಿಂಗ್‌ಗಳು, ವಾಚ್‌ಗಳು ಮತ್ತು ಆಭರಣಗಳು ಸಿಬಿಐ ಈಗಾಗಲೇ ವಶಪಡಿಸಿಕೊಂಡಿದೆ. ಕೆಲವು ದಿನಗಳ ಹಿಂದೆ, DHFL ಒಳಗೊಂಡಿರುವ ದೇಶದ ಅತಿದೊಡ್ಡ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತಷ್ಟು ಹುಡುಕಾಟ ನಡೆಸಿತ್ತು.

ಈ ದಾಳಿಯ ವೇಳೆ ಕೇಂದ್ರ ಸಂಸ್ಥೆಯು ಜಾಕೋಬ್ ಆ್ಯಂಡ್ ಕಂ ಮತ್ತು ಫ್ರಾಂಕ್ ಮುಲ್ಲರ್ ಜಿನೀವಾ ಅವರ ಎರಡು ಸೂಪರ್ ಐಷಾರಾಮಿ ವಾಚ್‌ಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ ಸುಮಾರು 5 ಕೋಟಿ ರೂಪಾಯಿ ಎಂದು ಸಿಬಿಐ ತಿಳಿಸಿತ್ತು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ