AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು?

ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಹೊರತುಪಡಿಸಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ತಮಿಳುನಾಡು ಚುನಾವಣೆಯಲ್ಲಿ ರಾಹುಲ್ ಗಾಂಧಿ ನಟ ವಿಜಯ್ ಅವರ ಟಿ.ವಿ.ಕೆ. ಪಕ್ಷದೊಂದಿಗೆ ಮೈತ್ರಿ ಸೂಚಿಸಿದ್ದರು. ಆದರೆ ಪಕ್ಷದ ಹಿರಿಯ ಡಿಎಂಕೆ ಜೊತೆಗೂಡಲು ನಿರ್ಧರಿಸಿದರು. ಅವರ ಮಾತಿಗೆ ಮನ್ನಣೆ ನೀಡಿ ರಾಹುಲ್ ಸುಮ್ಮನಾಗಿದ್ದರು. ಈ ನಿರ್ಧಾರವೇ ತಮಿಳುನಾಡಿನಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನಕ್ಕೆ ಕಾರಣವಾಯಿತೇ ಎಂಬ ಚರ್ಚೆ ಈಗ ಶುರುವಾಗಿದೆ.

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು?
ಸಾಂದರ್ಭಿಕ ಚಿತ್ರ
ಹರೀಶ್ ಜಿ.ಆರ್​.
| Edited By: |

Updated on:May 04, 2026 | 2:49 PM

Share

ಚೆನ್ನೈ, ಮೇ 04: ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಒಂದನ್ನು ಹೊರತುಪಡಿಸಿದರೆ ಉಳಿದೆಡೆ ಕಾಂಗ್ರೆಸ್​ ಸಾಧನೆ ಹೇಳಿಕೊಳ್ಳುವ ಮಟ್ಟಿಗೆ ಏನೂ ಆಗಿಲ್ಲ. ಈ ನಡುವೆ ತಮಿಳುನಾಡು ಚುನಾವಣೆ ಸಂಬಂಧ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದ್ದು, ರಾಹುಲ್​​ ಗಾಂಧಿ ಹೇಳಿದ್ದ ಮಾತು ಕೇಳದೆ ಹೋಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ನ ಕಳಪೆ ಸಾಧನೆಗೆ ಕಾರಣವಾ? ಎಂಬ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಹಿರಿಯರ ಸಲಹೆ ಎಂದು ರಾಹುಲ್​​ ಸುಮ್ಮನಾಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ ಪಾಲಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

ರಾಹುಲ್​​ ಏನು ಹೇಳಿದ್ದರು?

ತಮಿಳುನಾಡು ವಿಧಾನಸಭೆ ಚುನಾವಣೆಗೆ ನಟ ದಳಪತಿ ವಿಜಯ್​​ ನೇತೃತತ್ವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವಂತೆ ರಾಹುಲ್​​ ಗಾಂಧಿ ಸೂಚಿಸಿದ್ದರು. ಆದರೆ ಟಿವಿಕೆ ಜತೆ ಮೈತ್ರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಿ.ಚಿದಂಬರಂ ಒಪ್ಪಿರಲಿಲ್ಲ. ಬದಲಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆಗೆ ಹೋಗೋಣ ಎಂದು ಅವರು ಸೂಚಿಸಿದ್ದರು. ಈ ವೇಳೆ ಹಿರಿಯರ ಮಾತಿಗೆ ಬೆಲೆ ಕೊಟ್ಟು ರಾಹುಲ್ ಗಾಂಧಿ ಕೂಡ ಸುಮ್ಮನಾಗಿದ್ದರು. ಹೀಗಾಗಿ ಖರ್ಗೆ, ಚಿದಂಬರಂ ನಿರ್ಧಾರದಿಂದ ಕಾಂಗ್ರೆಸ್​ಗೆ ಸೋಲು ಎಂಬ ಚರ್ಚೆ ಪಕ್ಷದಲ್ಲಿಯೇ ಶುರುವಾಗಿದೆ ಎಂದು ಎಐಸಿಸಿ ಮೂಲದ ನಾಯಕರಿಂದಲೇ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ?

ಟಿವಿಕೆ-ಕಾಂಗ್ರೆಸ್​​ ಮೈತ್ರಿಗೆ ವಿಜಯ್​​ ತಂದೆಯ ಬೆಂಬಲ

234 ಸದಸ್ಯರ ಬಲವನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯ ಅಧಿಕಾರ ಹಿಡಿಯಲು 118 ಸ್ಥಾನಗಳ ಅಗತ್ಯವಿದೆ. ನಟ ದಳಪತಿ ವಿಜಯ್​​ ನೇತೃತತ್ವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ ಬಹುಮತಕ್ಕೆ ಬೆರಳೆಣಿಕೆಯ ಸೀಟ್​​ಗಳು ಕೊರತೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಚುನಾವಣಾ ಫಲಿತಾಂಶ ಭಾರಿ ಕುತೂಹಲಕ್ಕೆ ಕಾರಣವಾಗಿದ್ದು, ಸರ್ಕಾರ ರಚಿಸಲು ಅನ್ಯರ ಬೆಂಬಲ ಅನಿವಾರ್ಯವಾದರೆ ವಿಜಯ್​​ ಯಾರ ಜೊತೆ ಕೈಜೋಡಿಸಲಿದ್ದಾರೆ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈ ನಡುವೆ ಮೈತ್ರಿ ಸಂಬಂಧ ಕಾಂಗ್ರೆಸ್​​ ಟಿವಿಕೆ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದ್ದು, ವಿಜಯ್​​ ತಂದೆಯೂ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 2:47 pm, Mon, 4 May 26

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ