AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ, ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?’; ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ

ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ತಮ್ಮ ಪಕ್ಷದ ಯೋಜಿತ ಪ್ರತಿಭಟನೆಗೂ ಮುನ್ನ ದೆಹಲಿಗೆ ತೆರಳುವ ರೈಲುಗಳನ್ನು ರದ್ದುಗೊಳಿಸಿರುವುದನ್ನು ಟೀಕಿಸಿದ್ದು, ಸರ್ಕಾರಕ್ಕೆ ಯುವಜನತೆಯ ಭಯವಿದ್ದರೆ ಇಡೀ ದೇಶವನ್ನೇ ಬಂದ್ ಮಾಡಲಿ ಎಂದು ಹೇಳಿದ್ದಾರೆ. ಹಾಗೇ, ಪೊಲೀಸರು ನಮಗೆ ಅನುಮತಿ ನೀಡದೇ ಇದ್ದರೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ನಾವು ದೇಶವನ್ನು ಉಳಿಸಲು ಪ್ರತಿಭಟನೆ ಮಾಡಿಯೇ ತೀರುತ್ತೇವೆ ಎಂದು ದಿಪ್ಕೆ ಸವಾಲು ಹಾಕಿದ್ದಾರೆ. ಚುನಾವಣಾ ಆಯೋಗದ ಎಸ್​ಐಆರ್​​ನಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಕ್ಷವು ಪ್ರತಿಭಟನೆಗೆ ಕರೆ ನೀಡಿದೆ.

‘ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ, ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?’; ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ
ಅಭಿಜೀತ್ ದಿಪ್ಕೆImage Credit source: TV9
ಸುಷ್ಮಾ ಚಕ್ರೆ
|

Updated on: Oct 09, 2026 | 3:28 PM

Share

ನವದೆಹಲಿ, ಅಕ್ಟೋಬರ್ 9: ದೆಹಲಿ ಪೊಲೀಸರು ಪ್ರತಿಭಟನೆಗೆ ಸ್ಪಷ್ಟವಾಗಿ ಅನುಮತಿಯನ್ನು ನಿರಾಕರಿಸಿದ್ದರೂ ಸಹ, ಇಂದು (ಅಕ್ಟೋಬರ್ 10) ದೆಹಲಿಯ ಜಂತರ್ ಮಂತರ್‌ನಲ್ಲಿ ತಾವು ಮತ್ತು ತಮ್ಮ ಸಂಘಟನೆಯು ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಸ್ಪಷ್ಟಪಡಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದಿಪ್ಕೆ, “ನಮ್ಮ ಆಂದೋಲನ ನಿಲ್ಲುವುದಿಲ್ಲ. ಜಂತರ್ ಮಂತರ್ ನಿಗದಿತ ಪ್ರತಿಭಟನಾ ಸ್ಥಳವಾಗಿದೆ. ಸಂವಿಧಾನದ ವಿಧಿ 19 ಪ್ರತಿಭಟಿಸುವ ಮೂಲಭೂತ ಹಕ್ಕನ್ನು ನೀಡುತ್ತದೆ. ಹಾಗಿದ್ದಾಗ ಅನುಮತಿ ಪಡೆಯುವ ಅಗತ್ಯವೇನಿದೆ?” ಎಂದು ಪ್ರಶ್ನಿಸಿದ್ದಾರೆ.

ಎಸ್​ಐಆರ್​ ಪ್ರಕ್ರಿಯೆಯ ವಿಚಾರವಾಗಿ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “13 ಕೋಟಿ ಮತಗಳನ್ನು ತೆಗೆದುಹಾಕುವ ಮೊದಲು ಅವರು ಅನುಮತಿ ಪಡೆದಿದ್ದರೆ? ಹಾಗಿರುವಾಗ ಚುನಾವಣೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ನಾವು ಪ್ರತಿಭಟನೆ ನಡೆಸಬಾರದು ಎಂದು ಹೇಳುವುದು ಎಷ್ಟು ಸರಿ? ಇದು ಸಾಧ್ಯವಿಲ್ಲ. ದೇಶವನ್ನು ಉಳಿಸಲು ನಾವು ಪ್ರತಿಭಟನೆ ನಡೆಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಎಸ್​ಐಆರ್ ವಿರುದ್ಧ ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ: ಆಯೋಗದ ವಿರುದ್ಧ ಗುಡುಗಿದ ದೀಪ್ಕೆ, ಧ್ರುವ್ ರಾಠಿ, ಪ್ರಕಾಶ್​ ರಾಜ್​​

ದೆಹಲಿಯಲ್ಲಿ ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಭಾರತದಾದ್ಯಂತ ಸಾವಿರಾರು ಯುವಕರನ್ನು ಬಂಧಿಸಲಾಗುತ್ತಿದೆ ಎಂದು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ದಿಪ್ಕೆ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಈ ಹೇಳಿಕೆ ಬಂದಿದೆ. ಇಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ದಿಪ್ಕೆ, “ನಮ್ಮ ಅಕ್ಟೋಬರ್ 10ರ ಪ್ರತಿಭಟನೆಗೆ ಮುನ್ನ ಬಿಜೆಪಿ ಸರ್ಕಾರವು ದೇಶಾದ್ಯಂತ ಸಾವಿರಾರು ಯುವಕರನ್ನು ವಶಕ್ಕೆ ಪಡೆದಿದೆ. ಈ ಬೆದರಿಕೆ ತಂತ್ರಗಳು ನಡೆಯುವುದಿಲ್ಲ ಮೋದಿಯವರೇ. ಈ ದೇಶದ ಯುವಕರು ಇನ್ನು ಮುಂದೆ ನಿಮಗೆ ಹೆದರುವುದಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ, ಇದು ದೀರ್ಘಾವಧಿಯ ಹೋರಾಟ: ಅ. 10ರ ಜಂತರ್ ಮಂತರ್ ಚಲೋಗೆ ಸಿಜೆಪಿಯ ಸೌರವ್ ದಾಸ್ ಕರೆ

ಎಸ್​ಐಆರ್​ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಮತ್ತು ಸಿಜೆಪಿ ಆಗ್ರಹಿಸುತ್ತಿವೆ. ಆಂತರಿಕ ಸಭೆಯಲ್ಲಿ ಇಬ್ಬರು ಚುನಾವಣಾ ಆಯುಕ್ತರು ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಲು ಒಪ್ಪಿರಲಿಲ್ಲ ಮತ್ತು ಆಕ್ಷೇಪಣೆಗಳನ್ನು ಎತ್ತಿದ್ದರು ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದ ನಂತರ ಅವರ ರಾಜೀನಾಮೆಗೆ ಆಗ್ರಹ ತೀವ್ರಗೊಂಡಿದೆ. ಆದರೆ, ಈ ನಿರ್ಧಾರವು ಸರ್ವಸಮ್ಮತವಾಗಿತ್ತು ಮತ್ತು ಮೂವರು ಆಯುಕ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ