AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪ್ರಮಾಣಪತ್ರದ ಮೇಲೆ ಡಿಜಿಟಲ್ ಐಡಿ ನಮೂದು? ಸಮಾಜದಲ್ಲಿ ಮೂಡಿದೆ ಪ್ರಶ್ನೆ

ಆಧಾರ್ ಸಂಖ್ಯೆ ನೀಡಿ ಲಸಿಕೆ ಪಡೆದವರಿಗೆ ನೀಡುವ ಸರ್ಟಿಫಿಕೆಟ್​ಗಳಲ್ಲಿ ಮಾತ್ರ ಡಿಜಿಟಲ್ ಹೆಲ್ತ್ ಐಡಿ ಸಿಗುತ್ತದೆ. ಇಂಥ ಐಡಿ ಜನರೇಟ್ ಮಾಡಲು ಲಸಿಕೆ ಪಡೆದವರು ಸಮ್ಮತಿ ನೀಡುವುದು ಅಗತ್ಯ ಎಂದು ಈ ಹಿಂದೆ ಹೇಳಲಾಗಿತ್ತು.

ಲಸಿಕೆ ಪ್ರಮಾಣಪತ್ರದ ಮೇಲೆ ಡಿಜಿಟಲ್ ಐಡಿ ನಮೂದು? ಸಮಾಜದಲ್ಲಿ ಮೂಡಿದೆ ಪ್ರಶ್ನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 09, 2021 | 9:30 PM

Share

ಬೆಂಗಳೂರು: ಕೊವಿಡ್ ಲಸಿಕೆ ಹಾಕಿಸಿಕೊಂಡವರಿಗೆ ನೀಡುವ ಪ್ರಮಾಣಪತ್ರದ (ಸರ್ಟಿಫಿಕೇಟ್) ಮೇಲೆ ಡಿಜಿಟಲ್ ಹೆಲ್ತ್ ಸಂಖ್ಯೆಯನ್ನು ಜನರೇಟ್ ಮಾಡಿ ನಮೂದಿಸಲಾಗುತ್ತಿದೆ. ನ್ಯಾಷನಲ್ ಡಿಜಿಟಲ್ ಹೆಲ್ತ್​ ಮಿಷನ್ ಯೋಜನೆಯಡಿ ಈ ಐಡಿಗಳನ್ನು ಜನರೇಟ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಆಧಾರ್ ಸಂಖ್ಯೆ ನೀಡಿ ಲಸಿಕೆ ಪಡೆದವರಿಗೆ ನೀಡುವ ಸರ್ಟಿಫಿಕೆಟ್​ಗಳಲ್ಲಿ ಮಾತ್ರ ಡಿಜಿಟಲ್ ಹೆಲ್ತ್ ಐಡಿ ಸಿಗುತ್ತದೆ. ಇಂಥ ಐಡಿ ಜನರೇಟ್ ಮಾಡಲು ಲಸಿಕೆ ಪಡೆದವರು ಸಮ್ಮತಿ ನೀಡುವುದು ಅಗತ್ಯ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಕೆಲವರು ತಮ್ಮ ಅನುಮತಿ ಇಲ್ಲದೆ ಡಿಜಿಟಲ್ ಹೆಲ್ತ್​ ಐಡಿ ಜನರೇಟ್ ಮಾಡಲಾಗಿದೆ ಎಂದು ಕೆಲವು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಈವರೆಗೆ 19 ಕೋಟಿಗೂ ಹೆಚ್ಚು ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಮೊದಲ ಬಾರಿಗೆ ಲಸಿಕೆ ಹಾಕಿಸಿಕೊಂಡ ಹಲವರಿಗೆ ನೀಡಿರುವ ಪ್ರಮಾಣ ಪತ್ರದ ಮೇಲೆ ಯೂನಿಕ್ ಹೆಲ್ತ್​ ಐಡಿ (Unique Health ID – UHID) ಅಥವಾ ಹೆಲ್ತ್​ ಐಡಿ ಗಮನಿಸಿದ್ದಾರೆ. ಈ ಸಂಖ್ಯೆಯ ಬಗ್ಗೆ ಹಲವರು ಮಾಹಿತಿ ಇಲ್ಲದೆ ಗೊಂದಲಕ್ಕೆ ಒಳಗಾಗಿದ್ದಾರೆ.

ಭಾರತದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಡಿಜಿಟಲ್​ ಮಾಡುವ ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಿದು. ಆರೋಗ್ಯ ಸೌಲಭ್ಯ ಒದಗಿಸುವ ವಿವಿಧ ವ್ಯವಸ್ಥೆಗಳಲ್ಲಿ (ಆಸ್ಪತ್ರೆ) ವ್ಯಕ್ತಿಯೊಬ್ಬರ ಆರೋಗ್ಯದ ಸಮಗ್ರ ಮಾಹಿತಿ ಒದಗಿಸುವ ಉದ್ದೇಶದಿಂದ ಡಿಜಿಟಲ್ ಐಡಿ ಜನರೇಟ್ ಮಾಡುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿತ್ತು.

(Digital Health ID in Vaccination Certificate Without Consent from People Many Questions Govt Action)

ಇದನ್ನೂ ಓದಿ: CoWIN vaccine certificate ಕೊವಿನ್ ಲಸಿಕೆ ಪ್ರಮಾಣ ಪತ್ರದಲ್ಲಿ ತಪ್ಪು ಇದ್ದರೆ ಸರಿ ಮಾಡುವುದು ಹೇಗೆ?

ಇದನ್ನೂ ಓದಿ: ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ -19 ಲಸಿಕೆ ಅಭಿಯಾನ; ದಿನಾಂಕಗಳು ಇಂತಿವೆ

Published On - 9:29 pm, Wed, 9 June 21

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್