AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕ್ರಾಂತಿ ಮಾಡಿದ ಡಿಜಿಟಲ್ ಇಂಡಿಯಾಗೆ 11 ವರ್ಷದ ಸಂಭ್ರಮ

ಡಿಜಿಟಲ್ ಇಂಡಿಯಾ ಉಪಕ್ರಮವು ಜುಲೈ 1ಕ್ಕೆ 11 ವರ್ಷ ಪೂರೈಸಲಿದೆ. ಇದು ಭಾರತದ ಆಡಳಿತ ಮತ್ತು ಜನಸಾಮಾನ್ಯರ ಬದುಕಿನಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಇ-ಆಡಳಿತ, ಡಿಜಿಟಲ್ ಪಾವತಿ (ಯುಪಿಐ), ಆಧಾರ್, ಡಿಜಿಲಾಕರ್‌ನಂತಹ ಯೋಜನೆಗಳು ದೇಶದ ಪ್ರತಿಯೊಬ್ಬ ಪ್ರಜೆಯನ್ನು ತಂತ್ರಜ್ಞಾನದ ಮೂಲಕ ಸಬಲೀಕರಣಗೊಳಿಸಿವೆ.

ಭಾರತದಲ್ಲಿ ಕ್ರಾಂತಿ ಮಾಡಿದ ಡಿಜಿಟಲ್ ಇಂಡಿಯಾಗೆ 11 ವರ್ಷದ ಸಂಭ್ರಮ
ಡಿಜಿಟಲ್​ ಇಂಡಿಯಾ (ಸಂಗ್ರಹ ಚಿತ್ರ)Image Credit source: digitalindia.gov.in
ಗಂಗಾಧರ​ ಬ. ಸಾಬೋಜಿ
|

Updated on: Jun 27, 2026 | 7:41 PM

Share

ಮುಖ್ಯಾಂಶಗಳು

  • ಡಿಜಿಟಲ್ ಇಂಡಿಯಾದಿಂದ ಆಡಳಿತದಲ್ಲಿ ಕ್ರಾಂತಿಕಾರಿ ಬದಲಾವಣೆ
  • ಡಿಜಿಟಲ್ ಯೋಜನೆಗಳು ಜನಸಾಮಾನ್ಯರ ಸಬಲೀಕರಣ
  • 11 ವರ್ಷಗಳ ಡಿಜಿಟಲ್ ಪಯಣ ಭಾರತದ ಜಾಗತಿಕ ಡಿಜಿಟಲ್​ಗೆ ಶಕ್ತಿ

ದೆಹಲಿ, ಜೂನ್​​ 27: ಭಾರತದ ಆಡಳಿತ ವ್ಯವಸ್ಥೆ ಮತ್ತು ಜನಸಾಮಾನ್ಯರ ದೈನಂದಿನ ಬದುಕಿನಲ್ಲಿ ಅಭೂತಪೂರ್ವ ತಾಂತ್ರಿಕ ಬದಲಾವಣೆ ತಂದಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಡಿಜಿಟಲ್ ಇಂಡಿಯಾ’ (Digital India) ಉಪಕ್ರಮವು ಡಿಜಿಟಲ್ ಪರಿವರ್ತನೆಯ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಈ  ಉಪಕ್ರಮವು ಜುಲೈ 1ರಂದು ಯಶಸ್ವಿಯಾಗಿ 11 ವರ್ಷ ಪೂರೈಸಲಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಳಿಸದೆ, ದೇಶದ ಕಟ್ಟಕಡೆಯ ಪ್ರಜೆಯ ಸಬಲೀಕರಣದ ಪ್ರಬಲ ಅಸ್ತ್ರವನ್ನಾಗಿ ಪರಿವರ್ತಿಸುವಲ್ಲಿ ಈ ಯೋಜನೆ ಮಹತ್ತರ ಪಾತ್ರ ವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ.

ಇ-ಆಡಳಿತ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2015ರ ಜುಲೈ 1ರಂದು ಅಧಿಕೃತವಾಗಿ ಚಾಲನೆ ನೀಡಲಾಗಿದ್ದ ಈ ಉಪಕ್ರಮವು, ಇಂದು ಜಾಗತಿಕ ಮಟ್ಟದಲ್ಲಿ ಭಾರತದ ಡಿಜಿಟಲ್ ಶಕ್ತಿಯನ್ನು ಸಾಬೀತುಪಡಿಸಿದೆ. ಕಳೆದ 11 ವರ್ಷದ ಅವಧಿಯಲ್ಲಿ ಡಿಜಿಟಲ್ ಇಂಡಿಯಾ ಉಪಕ್ರಮದ ಮೂಲಕ ದೇಶದ ಮೂಲೆ ಮೂಲೆಗೂ ತಂತ್ರಜ್ಞಾನವನ್ನು ತಲುಪಿಸುವ ಮೂಲಕ ಇ-ಆಡಳಿತ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಾಗಿದೆ.

ಇದನ್ನೂ ಓದಿ: Digital Transformation: ಮೋದಿ ಸರ್ಕಾರದ 11 ವರ್ಷಗಳ ಡಿಜಿಟಲ್ ಮಿಷನ್ ಕೈಂಕರ್ಯ; ಯಶಸ್ವಿಯಾಗಿದ್ದೆಷ್ಟು?

ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಆಧಾರ್ ಮತ್ತು ಮೊಬೈಲ್ ಜೋಡಣೆಯ ಮೂಲಕ ದೇಶದ ಆರ್ಥಿಕತೆಯನ್ನು ಡಿಜಿಟಲೀಕರಣಗೊಳಿಸಲಾಗಿದೆ. ಯುಪಿಐನಂತಹ ಸುಲಭ ಪಾವತಿ ವ್ಯವಸ್ಥೆಯು ಜಾಗತಿಕ ಮಟ್ಟದಲ್ಲಿ ಭಾರತದ ತಾಂತ್ರಿಕ ಪ್ರಗತಿಯನ್ನು ಸಾಬೀತುಪಡಿಸಿದೆ. ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಮೂಲಕ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿಗೆ ಬ್ರೇಕ್​ ಹಾಕಲಾಗಿದೆ.

ಕೇಂದ್ರ ಸರ್ಕಾರದ ಪ್ರಮುಖ ಡಿಜಿಟಲ್ ಯೋಜನೆಗಳು

ಸುರಕ್ಷಿತ ಡಿಜಿಟಲ್ ಗುರುತು (ಆಧಾರ್)

ದೇಶದ ಪ್ರತಿಯೊಬ್ಬ ನಾಗರಿಕನಿಗೂ ವಿಶಿಷ್ಟ ಮತ್ತು ಅತ್ಯಂತ ಸುರಕ್ಷಿತ ಡಿಜಿಟಲ್ ಗುರುತನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ಆಧಾರ ಯೋಜನೆಯು ಪ್ರಸ್ತುತ 144 ಕೋಟಿಗೂ ಅಧಿಕ ಜರನ್ನು ಒಳಗೊಳ್ಳುವ ಮೂಲಕ ವಿಶ್ವದ ಅತ್ಯಂತ ದೊಡ್ಡ ಡಿಜಿಟಲ್ ಗುರುತು ವ್ಯವಸ್ಥೆಯಾಗಿ ಹೊರಹೊಮ್ಮಿದೆ.

ನಗದು ರಹಿತ ಆರ್ಥಿಕತೆ (ಯುಪಿಐ)

ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ಜಗತ್ತಿಗೆ ಸಾರಿದೆ. ಹಣಕಾಸು ವಲಯದಲ್ಲಿ ದಾಖಲೆ ಬರೆದಿದೆ. ಕೇವಲ ಕಳೆದ 2025-26ರ ಆರ್ಥಿಕ ವರ್ಷವೊಂದರಲ್ಲೇ ಯುಪಿಐ ಭರ್ಜರಿ 24,162 ಕೋಟಿಗೂ ಅಧಿಕ ಡಿಜಿಟಲ್ ವಹಿವಾಟುಗಳನ್ನು ಯಶಸ್ವಿಯಾಗಿ ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ಕಾಗದ ರಹಿತ ಆಡಳಿತ (ಡಿಜಿಲಾಕರ್)

ದಾಖಲೆಗಳ ಸುರಕ್ಷತೆ ಮತ್ತು ಕಾಗದ ರಹಿತ ಸೇವೆಗೆ ಡಿಜಿಲಾಕರ್ ಉತ್ತಮ ವೇದಿಕೆಯಾಗಿದೆ. ಪ್ರಸ್ತುತ ದೇಶದ 70.69 ಕೋಟಿಗೂ ಹೆಚ್ಚು ಜನರು ಇದರ ಪ್ರಯೋಜನ ಪಡೆಯುತ್ತಿದ್ದು, ಈವರೆಗೆ 850 ಕೋಟಿಗೂ ಹೆಚ್ಚಿನ ಅಧಿಕೃತ ಡಿಜಿಟಲ್ ದಾಖಲೆಗಳನ್ನು ಈ ವ್ಯವಸ್ಥೆಯ ಮೂಲಕ ವಿತರಿಸಲಾಗಿದೆ.

ಬೆರಳ ತುದಿಯಲ್ಲಿ ಆರೋಗ್ಯ ಸೇವೆ (ಇ-ಸಂಜೀವಿನಿ)

ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೆ ತರಲಾಗಿರುವ ‘ಇ-ಸಂಜೀವಿನಿ’ ಆರೋಗ್ಯ ವಲಯದಲ್ಲಿ ಮಹತ್ತರ ಬದಲಾವಣೆ ತಂದಿದೆ. ಈವರೆಗೆ ಬರೋಬ್ಬರಿ 48 ಕೋಟಿಗೂ ಅಧಿಕ ಡಿಜಿಟಲ್ ವೈದ್ಯಕೀಯ ಸಮಾಲೋಚನೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ನಾಗರಿಕರ ಮನೆಬಾಗಿಲಿಗೆ ಆರೋಗ್ಯ ಸೇವೆಯನ್ನು ತಲುಪಿಸಲಾಗಿದೆ.

ಗುಣಮಟ್ಟದ ಡಿಜಿಟಲ್ ಶಿಕ್ಷಣ (ದೀಕ್ಷಾ)

ದೇಶದಾದ್ಯಂತ ಶಾಲಾ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು ‘ದೀಕ್ಷಾ’ ಇ-ಲರ್ನಿಂಗ್ ಪೋರ್ಟಲ್ ತೆರೆಯಲಾಗಿದೆ. ಇದು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಪ್ರಸ್ತುತ 2 ಕೋಟಿಗೂ ಅಧಿಕ ನೋಂದಾಯಿತ ಬಳಕೆದಾರರನ್ನು ಹೊಂದಿದೆ.

ಮುಕ್ತ ಇ-ಕಾಮರ್ಸ್ ಕ್ರಾಂತಿ (ONDC)

ಸಣ್ಣ ವ್ಯಾಪಾರಿಗಳು ಮತ್ತು ಗ್ರಾಹಕರ ನಡುವೆ ಮುಕ್ತ ಡಿಜಿಟಲ್ ಮಾರುಕಟ್ಟೆ ಸೃಷ್ಟಿಸುವ ಉದ್ದೇಶದಿಂದ ಆರಂಭಿಸಲಾದ ಒಎನ್‌ಡಿಸಿ ವ್ಯವಸ್ಥೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸದ್ಯ ದೇಶದ ಸಾವಿರಕ್ಕೂ ಅಧಿಕ ನಗರಗಳಲ್ಲಿ ವಿಸ್ತರಿಸಿರುವ ನೆಟ್‌ವರ್ಕ್‌, 20 ಕೋಟಿಗೂ ಅಧಿಕ ಸಕ್ರಿಯ ಗ್ರಾಹಕರು ಡಿಜಿಟಲ್ ವ್ಯಾಪಾರದ ಸೌಲಭ್ಯ ಪಡೆಯುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ