AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗೆ ರಾಜತಾಂತ್ರಿಕ ವಿವಾದ: ಜಿ20 ಸಂಸತ್ ಸ್ಪೀಕರ್‌ಗಳ ಶೃಂಗಸಭೆಯಲ್ಲಿ ಭಾಗವಹಿಸಲ್ಲ ಕೆನಡಾ

G20 Parliament Speakers' Summit: P20 ಶೃಂಗಸಭೆಯು ಅಕ್ಟೋಬರ್ 13-14 ರಂದು ನವದೆಹಲಿಯ ಯಶೋಭೂಮಿಯಲ್ಲಿರುವ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ನಲ್ಲಿ ನಡೆಯಲಿದೆ. ಭಾರತದ ಸಂಸತ್  G20 ಪ್ರೆಸಿಡೆನ್ಸಿಯ ವಿಶಾಲ ಚೌಕಟ್ಟಿನ ಅಡಿಯಲ್ಲಿ ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಭಾರತದೊಂದಿಗೆ ರಾಜತಾಂತ್ರಿಕ ವಿವಾದ: ಜಿ20 ಸಂಸತ್ ಸ್ಪೀಕರ್‌ಗಳ ಶೃಂಗಸಭೆಯಲ್ಲಿ ಭಾಗವಹಿಸಲ್ಲ ಕೆನಡಾ
ಜಿ20 ಸಂಸತ್ ಸ್ಪೀಕರ್‌ಗಳ ಶೃಂಗಸಭೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 12, 2023 | 7:23 PM

Share

ದೆಹಲಿ ಅಕ್ಟೋಬರ್ 12: ಜಿ20 ರಾಷ್ಟ್ರಗಳ ಸಂಸತ್ ಸ್ಪೀಕರ್​​ಗಳ ಶೃಂಗಸಭೆಯಿಂದ (G20 Parliament Speakers’ Summit) ಹೊರಗುಳಿಯಲು ಕೆನಡಾದ ಸೆನೆಟ್‌ನ ಸ್ಪೀಕರ್ ನಿರ್ಧರಿಸಿದ್ದಾರೆ. ಜೂನ್‌ನಲ್ಲಿ ಸರ್ರೆಯಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ (Hardeep Singh Nijjar) ಹತ್ಯೆಗೆ ಭಾರತ ಸರ್ಕಾರದ ಏಜೆಂಟರ “ಸಂಭಾವ್ಯ ಲಿಂಕ್” ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟ ನಂತರ ಈ ಬೆಳವಣಿಗೆ ನೆಡೆದಿದೆ.

ಇಂದು (ಗುರುವಾರ) ಕೆನಡಾದ ಸೆನೆಟ್‌ನ ಸ್ಪೀಕರ್ ರೇಮಂಡೆ ಗಗ್ನೆ ಅವರು ಜಿ20 ರಾಷ್ಟ್ರಗಳ ಪಿ20 ಸಭೆಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ. P20 ಸಭೆಯಲ್ಲಿ ಕೆನಡಾದಿಂದ ಯಾರೂ ಭಾಗವಹಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ. ನಾವು ಎಲ್ಲಾ ನಾಯಕರು ಮತ್ತು ಎಲ್ಲಾ ದೇಶಗಳನ್ನು ಭಾಗವಹಿಸಲು ಆಹ್ವಾನಿಸಿದ್ದೇವೆ. P20 ಶೃಂಗಸಭೆಗೆ ಹಾಜರಾಗಿರುವ ಬಗ್ಗೆ ಕೆನಡಾದವರಲ್ಲೇ ಕೇಳಲು ನಿಮ್ಮನ್ನು ವಿನಂತಿಸುತ್ತೇನೆ ಎಂದ ವಿದೇಶಾಂಗ ಸಚಿವಾಲಯ ಹೇಳಿದೆ.

P20 ಶೃಂಗಸಭೆಯು ಅಕ್ಟೋಬರ್ 13-14 ರಂದು ನವದೆಹಲಿಯ ಯಶೋಭೂಮಿಯಲ್ಲಿರುವ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ನಲ್ಲಿ ನಡೆಯಲಿದೆ. ಭಾರತದ ಸಂಸತ್  G20 ಪ್ರೆಸಿಡೆನ್ಸಿಯ ವಿಶಾಲ ಚೌಕಟ್ಟಿನ ಅಡಿಯಲ್ಲಿ ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಖಲಿಸ್ತಾನಿ ಭಯೋತ್ಪಾದಕರಿಗೆ ಆಶ್ರಯ ನೀಡಿರುವ ಆರೋಪ ಹೊತ್ತಿದ್ದ ಸಿಖ್ ವ್ಯಕ್ತಿಗೆ ಕೆನಡಾ ಬುಲಾವ್ 

ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು

ಕಳೆದ ತಿಂಗಳು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತ ಸರ್ಕಾರದ ಏಜೆಂಟರು “ಸಂಭಾವ್ಯ ಸಂಬಂಧ” ಹೊಂದಿದ್ದಾರೆ ಎಂಬುದಕ್ಕೆ ಕೆನಡಾದ ಭದ್ರತಾ ಏಜೆನ್ಸಿಗಳು “ವಿಶ್ವಾಸಾರ್ಹ ಪುರಾವೆಗಳು” ಎಂದು ಆರೋಪಿಸಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಗಲಾಟೆ ಪ್ರಾರಂಭವಾಯಿತು.

ಜೂನ್‌ನಲ್ಲಿ ಸರ್ರೆಯಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳಿಂದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಹರ್ದೀಪ್ ಸಿಂಗ್ ನಿಜ್ಜಾರ್, ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ. ಭಾರತ  ಕೆನಡಾ ಆರೋಪಗಳನ್ನು ನಿರಾಕರಿಸಿದ್ದು ಅದೆಲ್ಲ “ಅಸಂಬದ್ಧ” ಮತ್ತು “ಪ್ರಚೋದಿತ” ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ