ಜಮ್ಮು ಕಾಶ್ಮೀರದ ಮತಗಟ್ಟೆಗಳಿಗೆ ಭೇಟಿಕೊಟ್ಟ 15 ದೇಶಗಳ ಹಿರಿಯ ರಾಜತಾಂತ್ರಿಕರು

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಮಧ್ಯೆ, ಮತದಾನ ಪ್ರಕ್ರಿಯೆಯನ್ನು ವೀಕ್ಷಿಸಲು ವಿವಿಧ ದೇಶಗಳ ಹಿರಿಯ ರಾಜತಾಂತ್ರಿಕರ ಉನ್ನತ ಮಟ್ಟದ ನಿಯೋಗ ಬುಧವಾರ ಬುದ್ಗಾಮ್ ಮತ್ತು ಶ್ರೀನಗರ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದೆ.

ಜಮ್ಮು ಕಾಶ್ಮೀರದ ಮತಗಟ್ಟೆಗಳಿಗೆ ಭೇಟಿಕೊಟ್ಟ 15 ದೇಶಗಳ ಹಿರಿಯ ರಾಜತಾಂತ್ರಿಕರು
ರಾಜತಾಂತ್ರಿಕರುImage Credit source: PTI
Follow us
|

Updated on: Sep 25, 2024 | 2:20 PM

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಮಧ್ಯೆ, ಮತದಾನ ಪ್ರಕ್ರಿಯೆಯನ್ನು ವೀಕ್ಷಿಸಲು ವಿವಿಧ ದೇಶಗಳ ಹಿರಿಯ ರಾಜತಾಂತ್ರಿಕರ ಉನ್ನತ ಮಟ್ಟದ ನಿಯೋಗ ಬುಧವಾರ ಬುದ್ಗಾಮ್ ಮತ್ತು ಶ್ರೀನಗರ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಯುನೈಟೆಡ್ ಸ್ಟೇಟ್ಸ್, ಮೆಕ್ಸಿಕೊ, ಗಯಾನಾ, ದಕ್ಷಿಣ ಕೊರಿಯಾ, ಸೊಮಾಲಿಯಾ, ಪನಾಮ, ಸಿಂಗಾಪುರ, ನೈಜೀರಿಯಾ, ಸ್ಪೇನ್, ದಕ್ಷಿಣ ಆಫ್ರಿಕಾ, ನಾರ್ವೆ, ತಾಂಜಾನಿಯಾ, ರುವಾಂಡಾ, ಅಲ್ಜೀರಿಯಾ ಮತ್ತು ಫಿಲಿಪೈನ್ಸ್ ಸೇರಿದಂತೆ ಸುಮಾರು 15 ದೇಶಗಳ ರಾಜತಾಂತ್ರಿಕರ ನಿಯೋಗವನ್ನು ಆಹ್ವಾನಿಸಿತ್ತು.

ಹಿರಿಯ ರಾಜತಾಂತ್ರಿಕರು ಮತಗಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರು ಮತ್ತು ಮತದಾರರೊಂದಿಗೆ ಸಂವಾದ ನಡೆಸಿದರು. ಹಿಂದಿನ ಸರ್ಕಾರಗಳು ಮತದಾನದ ಸಮಯದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವೀಕ್ಷಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಅನುಮತಿಸುವ ಸಲಹೆಯನ್ನು ತಳ್ಳಿಹಾಕಿದ್ದವು. ಮತದಾನ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ನೋಡಿ ರಾಜತಾಂತ್ರಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದ ಚುನಾವಣಾ ಪ್ರಕ್ರಿಯೆಯು ಸಿಂಗಾಪುರದಂತೆಯೇ ಇದೆ ಎಂದು ಸಿಂಗಾಪುರ್ ಹೈಕಮಿಷನ್‌ನ ರಾಜತಾಂತ್ರಿಕರು ಹೇಳಿದ್ದಾರೆ.

ಮತ್ತಷ್ಟು ಓದಿ: J-K Election 2024 Phase 2: ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ

ನಿಯೋಗ ಭೇಟಿ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮತಗಟ್ಟೆಗಳಿಗೆ ವಿದೇಶಿ ರಾಜತಾಂತ್ರಿಕರು ಭೇಟಿ ನೀಡಿರುವ ಕುರಿತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ವಿಧಾನಸಭೆ ಚುನಾವಣೆಗೆ ಬುಧವಾರ ಬೆಳಗ್ಗೆ ಮತದಾನ ಆರಂಭವಾಗಿದೆ. 25 ಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಕೇಂದ್ರಾಡಳಿತ ಪ್ರದೇಶದ ಆರು ಜಿಲ್ಲೆಗಳ 26 ಕ್ಷೇತ್ರಗಳಲ್ಲಿ 239 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಪ್ರಮುಖ ಅಭ್ಯರ್ಥಿಗಳ ಪೈಕಿ ಪ್ರಮುಖ ಅಭ್ಯರ್ಥಿಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಬದ್ಗಾಮ್ ಮತ್ತು ಗಂದರ್ಬಲ್ ಎರಡೂ ಸ್ಥಾನಗಳಿಂದ ಜಮ್ಮು ಮತ್ತು ನೌಶೇರಾ ವಿಧಾನಸಭಾ ಕ್ಷೇತ್ರದಿಂದ ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಸೆಂಟ್ರಲ್-ಶಾಲ್ತೆಂಗ್ ಕ್ಷೇತ್ರದಿಂದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಕಣದಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ