Discount On Tomatoes: ಇಂದಿನಿಂದ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ, ಕರ್ನಾಟಕದ ಮಾರುಕಟ್ಟೆಗೆ ಡಿಮ್ಯಾಂಡ್

Tomatoes Price: ಇಂದಿನಿಂದ ದೇಶದ ವಿವಿಧ ಸ್ಥಳಗಳಲ್ಲಿ ಟೊಮೆಟೊಗಳನ್ನು ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

Discount On Tomatoes: ಇಂದಿನಿಂದ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ, ಕರ್ನಾಟಕದ ಮಾರುಕಟ್ಟೆಗೆ ಡಿಮ್ಯಾಂಡ್
ಟೊಮೆಟೊ
Follow us
|

Updated on: Jul 15, 2023 | 12:21 PM

ದೆಹಲಿ, ಜುಲೈ 15: ಟೊಮೆಟೊ… ಟೊಮೆಟೊ.. (Tomatoes) ಎಲ್ಲ ಕಡೆ ಟೊಮೆಟೊ ಬೆಲೆ ಏರಿಕೆಯ ಮಾತು, ಟೊಮೆಟೊಗೆ ಚಿನ್ನ ಬೆಲೆ ಆಗಿದೆ ಎಂದು ಎಲ್ಲರೂ ಚಿಂತೆ ಪಡುತ್ತಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಟೊಮೆಟೊದ್ದೇ ಟ್ರೆಂಡಿಂಗ್, ಯಾವಾಗ ಈ ಟೊಮೆಟೊ ಬೆಲೆ ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಯಲ್ಲಿರುವ ಗ್ರಾಹಕರೇ ಇಲ್ಲೊಮ್ಮೆ ನೋಡಿ, ಟೊಮೆಟೊವನ್ನು ರಿಯಾಯಿತಿ ಬೆಲೆಯಲ್ಲಿ ಮಾರಾಟ ಮಾಡಲು ಸರ್ಕಾರ ಮುಂದಾಗಿದೆ. ಇನ್ನೂ ರಿಯಾಯಿತಿ ಬೆಲೆಯಲ್ಲಿ ಟೊಮೆಟೊ ಎಲ್ಲೆಲ್ಲಿ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಇಂದಿನಿಂದ ದೆಹಲಿ, ಗುರುಗ್ರಾಮ್ ಮತ್ತು ಫರಿದಾಬಾದ್‌ನ ವಿವಿಧ ಸ್ಥಳಗಳಲ್ಲಿ ಟೊಮೆಟೊಗಳನ್ನು ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ. ಲಕ್ನೋ ಮತ್ತು ಕಾನ್ಪುರದಲ್ಲಿ ತಲಾ 15 ಮೊಬೈಲ್ ವ್ಯಾನ್‌ಗಳಲ್ಲಿ ಬೆಳಿಗ್ಗೆ 11 ರಿಂದ ಮಾರಾಟ ಪ್ರಾರಂಭವಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸರ್ಕಾರಿ ಸಂಸ್ಥೆಯಾದ ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ (ಎನ್‌ಸಿಸಿಎಫ್) ಚಿಲ್ಲರೆ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ಹೇಳಿರುವಂತೆ ಪ್ರತಿ ಕಿಲೋಗ್ರಾಂಗೆ ₹ 90 ದರದಲ್ಲಿ ಲಭ್ಯವಿರುತ್ತದೆ .

ಹೆಚ್ಚುತ್ತಿರುವ ಟೊಮೆಟೊ ಬೆಲೆಯನ್ನು ತಡೆಗಟ್ಟಲು ಪ್ರಮುಖ ಬಳಕೆ ಕೇಂದ್ರಗಳಲ್ಲಿ ವಿತರಿಸಲು ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ತಕ್ಷಣ ಟೊಮೆಟೊ ಖರೀದಿಸಲು ಕೇಂದ್ರವು ಸೂಚಿಸಿದೆ. ಕಳೆದ ಒಂದು ತಿಂಗಳಲ್ಲಿ ಚಿಲ್ಲರೆ ಬೆಲೆಗಳು ಗರಿಷ್ಠ ಏರಿಕೆಯಾಗಿರುವುದರಿಂದ ಪ್ರಮುಖ ಬಳಕೆ ಕೇಂದ್ರಗಳಲ್ಲಿ ಏಕಕಾಲದಲ್ಲಿ ವಿತರಿಸಲು ಮೂರು ರಾಜ್ಯಗಳ ಮಂಡಿಗಳಿಂದ ಟೊಮ್ಯಾಟೊವನ್ನು ತಕ್ಷಣವೇ ಖರೀದಿಸುವಂತೆ ಗ್ರಾಹಕ ವ್ಯವಹಾರಗಳ ಇಲಾಖೆಯು ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ:T ಬೆಲೆ ಏರಿಕೆ ಪರಿಣಾಮ; ಭೇಲ್ ಪುರಿಯಿಂದ ಮಾಯವಾಯ್ತು ಟೊಮೆಟೊ! 

ಗ್ರಾಹಕ ವ್ಯವಹಾರಗಳ ಸಚಿವಾಲಯವು, ಮುಂಗಾರು ಮತ್ತು ವಾತಾವರಣದ ಕಾರಣದಿಂದ ಟೊಮೆಟೊಗಳ ಬೆಲೆ ನಾಶವಾಗಿದೆ, ಜತೆಗೆ ಟೊಮೆಟೊಗಳ ಬೆಳೆಗಳಲ್ಲಿ ಹಿಂಜರಿತ ಕಂಡಿದ್ದು ಮತ್ತು ಅದನ್ನು ಸಮರ್ಪಕವಾಗಿ ಬೆಳೆಯಲು ಸರಿಯಾದ ಸಮಯದಲ್ಲಿ ಮಾನ್ಸೂನ್​​ ಆಗದ ಕಾರಣದಿಂದ ಟೊಮೆಟೊ ಬೆಲೆ ಹೆಚ್ಚಾಗಲು ಕಾರಣವಾಗಿದೆ ಎಂದು ಹೇಳಿದ್ದಾರೆ. ಸಾಮಾನ್ಯ ಈ ಸಮಯದಲ್ಲಿ ಟೊಮೆಟೊ ಬೆಲೆ ಕಡಿಮೆಯಾಗಬೇಕಿತ್ತು. ಆದರೆ ತಾತ್ಕಾಲಿಕ ಪೂರೈಕೆಗಳಿಗೆ ಅಡೆತಡೆಗಳು ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಇತರ ಅಂಶಗಳಿಂದಾಗಿ ಬೆಳೆ ಹಾನಿ ಹೆಚ್ಚಾಗಿ ಟೊಮೆಟೊ ಬೆಲೆಗಳಲ್ಲಿ ಹಠಾತ್ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ