AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿದ ಕಾಂಗ್ರೆಸ್: CWC ಸಭೆಯಲ್ಲಿ 3 ನಿರ್ಣಯ

ದೇಶದ ರಾಜಕಾರಣದಲ್ಲಿ ಈಗ ವೋಟ್ ಬ್ಯಾಂಕ್ ಪಾಲಿಟಿಕ್ಸ್ ಬದಲು ವೋಟ್ ಕಟ್' ಪಾಲಿಟಿಕ್ಸ್‌ನದ್ದೇ ಸಮರ ನಡೀತಿದೆ. ಕೇಂದ್ರ ಚುನಾವಣಾ ಆಯೋಗದ ವೋಟರ್ ಲಿಸ್ಟ್ ಪರಿಷ್ಕರಣೆ ಅಥವಾ SIR ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಇಂದು (ಸೆಪ್ಟೆಂಬರ್ 29) ದೆಹಲಿಯಲ್ಲಿ CWC ಸಭೆ ನಡೆದಿದ್ದು, CEC ಜ್ಞಾನೇಶ್ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆಗಳನ್ನ ಆಯೋಗದ ಮುಂದಿಟಟಿದೆ. ಹಾಗಿದ್ರೆ ಸಭೆಯಲ್ಲಿ ನಡೆದಿದ್ದು ಏನು? ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?ಎನ್ನುವ ಡಿಟೇಲ್ಸ್ ಇಲ್ಲಿದೆ.

ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿದ ಕಾಂಗ್ರೆಸ್: CWC ಸಭೆಯಲ್ಲಿ 3 ನಿರ್ಣಯ
Cwc Meeting
ರಮೇಶ್ ಬಿ. ಜವಳಗೇರಾ
|

Updated on:Sep 29, 2026 | 7:20 PM

Share

ನವದೆಹಲಿ, (ಸೆಪ್ಟೆಂಬರ್ 29): 2024ರ ಲೋಕಸಭಾ ಚುನಾವಣೆ ಸಮರದ ಬಳಿಕ, ಕಾಂಗ್ರೆಸ್ ಇದೀಗ ಚುನಾವಣಾ ಆಯೋಗದ ವಿರುದ್ಧ  ಸಮರ ಸಾರಿದೆ. ಇಂದು (ಸೆಪ್ಟೆಂಬರ್ 29) ದೆಹಲಿಯ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಅಂದ್ರೆ CWC ಸಭೆಯಲ್ಲಿ SIR ಅಂದ್ರೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಚರ್ಚೆ ನಡೆದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ, ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನ ಮೋದಿ ಸರ್ಕಾರದ ಕೈಗೊಂಬೆ ಎಂದು ಜರಿದಿರುವ ಖರ್ಗೆ, ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

CWC ಸಭೆಯ 3 ನಿರ್ಣಯಗಳು

ಇನ್ನು  CWC ಸಭೆಯಲ್ಲಿ 3 ನಿರ್ಣಯಗಳನ್ನೂ ಕೈಗೊಳ್ಳಲಾಗಿದೆ. ಅದೇನಂದ್ರೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು. ಹಾಗೂ SIR ಅನ್ನು ತಕ್ಷಣವೇ ಅಮಾನತುಗೊಳಿಸಬೇಕು. ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 13 ಕೋಟಿ 30 ಲಕ್ಷ ಹೆಸರುಗಳನ್ನು ತಕ್ಷಣವೇ ಮರುಸೇರ್ಪಡೆಗೊಳಿಸಬೇಕೆಂದು CWC ಸಭೆಯಲ್ಲಿ ನಿರ್ಣಯಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸಿಇಸಿ ಕೇಂದ್ರ ಸರ್ಕಾರದ ಕೈಗೊಂಬೆ, ತಕ್ಷಣ ವಜಾಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜ್ಞಾನೇಶ್ ಕುಮಾರ್ ಮೋದಿ ಕೈಗೊಂಬೆ

ಒಂದು ಷಡ್ಯಂತ್ರದ ಮೂಲಕ ಮತದಾರರ ಪಟ್ಟಿಯಿಂದ ಜನರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ಮೋದಿ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿರುವ ಖರ್ಗೆ, ಚುನಾವಣಾ ಆಯೋಗದ ಮುಂದೆ 5 ಬೇಡಿಕೆ ಇಟ್ಟಿದ್ದಾರೆ .

ಚುನಾವಣಾ ಆಯೋಗಕ್ಕೆ ಐದು ಬೇಡಿಕೆ

ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿರುವ, ಸೇರಿಸಿರುವ ದತ್ತಾಂಶವನ್ನ ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು. ಯಾರ ಮತ ಡಿಲೀಟ್ ಆಗಿವೆಯೋ ಅವರಿಗೆ ಮಾಹಿತಿ ನೀಡಿ, ಮೇಲ್ಮನವಿಗೆ ಅವಕಾಶ ಕೊಡಬೇಕು ಅಲ್ಲದೇ ಎಲ್ಲಾ ರಾಜಕೀಯ ಪಕ್ಷಗಳಿಗೂ ಸಾಮಾನ್ಯ ಫಾರ್ಮೆಟ್‌ನಲ್ಲಿ ವೋಟರ್ ಲಿಸ್ಟ್ ದತ್ತಾಂಶವನ್ನ ನೀಡಬೇಕು ಹಾಗೂ ವೋಟರ್ ಲಿಸ್ಟ್‌ನಲ್ಲಿ ಆಗಿರುವ ಲೋಪಗಳ ಬಗ್ಗೆ ಸ್ವತಂತ್ರ ತನಿಖೆ ಆಗಬೇಕು. ಅಂತಿಮವಾಗಿ ಚುನಾವಣಾ ಪ್ರಕ್ರಿಯೆ, ನಿರ್ಧಾರ ಹಾಗೂ ಡೇಟಾದಲ್ಲಿ 100% ಪಾರದರ್ಶಕತೆ ಇರಬೇಕು ಅಂತಾ CWC ಸಭೆಯಲ್ಲಿ ಬೇಡಿಕೆ ಇಡಲಾಗಿದೆ. ಈ ನಡುವೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೆಹಲಿಯ ಬೆಲಾ ಎಸ್ಟೇಟ್ ನ ವೋಟ್ ಚೋರಿ ಬಾಂಬ್ ಸಿಡಿಸಿದ್ದಾರೆ. 728 ಜನರ ಪೈಕಿ ಬರೋಬ್ಬರಿ 727 ಜನರ ವೋಟರ್ ಐಡಿಯನ್ನೇ ಡಿಲೀಟ್ ಮಾಡಲಾಗಿದೆ. ಬಡವರ ಹಕ್ಕನ್ನ ಕಸಿದುಕೊಳ್ಳಲಾಗ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಯೋಗ, ಆಕ್ಷೇಪಣೆ ಸಲ್ಲಿಸುವ ದಿನಾಂಕವನ್ನ ವಿಸ್ತರಿಸಲಾಗಿದೆ ಎಂದು ತಿಳಿಸಿದೆ. SIR ಕುರಿತು ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ, ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರೋ ಆರೋಪಕ್ಕೆ, ಬಿಜೆಪಿ ನಾಯಕರು ತಿರುಗೇಟು ಕೊಟ್ಟಿದ್ದಾರೆ.

ವರದಿ: ನಟರಾಜ್, ದೆಹಲಿ ಪ್ರತಿನಿಧಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Tue, 29 September 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ