ಮೌನವಾಗಿ ಕುಳಿತು ಭಾರತದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ: ಕೇಂದ್ರ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

ಸಂಸತ್ತಿನಲ್ಲಿ ಇತ್ತೀಚಿನ ವಿದ್ಯಮಾನಗಳನ್ನು ಪ್ರಸ್ತಾಪಿಸಿದ ಸೋನಿಯಾ, ಅಧಿವೇಶನಗಳನ್ನು ಅಡ್ಡಿಪಡಿಸಲು ಮತ್ತು ನಿರುದ್ಯೋಗ, ಹಣದುಬ್ಬರ ಮತ್ತು ಸಾಮಾಜಿಕ ವಿಭಜನೆ, ವರ್ಷದ ಬಜೆಟ್ ಮತ್ತು ಅದಾನಿ ಹಗರಣ ಮೊದಲಾದ ಸಮಸ್ಯೆಗಳನ್ನು ಪ್ರತಿಪಕ್ಷಗಳು ಎತ್ತದಂತೆ ತಡೆಯಲು ಸರ್ಕಾರ  ಕಾರ್ಯತಂತ್ರ ನಡೆಸಿದೆ ಎಂದು ಸೋನಿಯಾ ಆರೋಪಿಸಿದ್ದಾರೆ.

ಮೌನವಾಗಿ ಕುಳಿತು ಭಾರತದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ: ಕೇಂದ್ರ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ
ಸೋನಿಯಾ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Apr 11, 2023 | 2:26 PM

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ದಿ ಹಿಂದೂ ಪತ್ರಿಕೆಗೆ ಬರೆದ ಅಭಿಪ್ರಾಯ ಲೇಖನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಬಲವಂತದ ಮೌನದಿಂದ ಭಾರತದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ’ ಎಂಬ ಶೀರ್ಷಿಕೆಯ ಲೇಖನದಲ್ಲಿ ಸೋನಿಯಾಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳು ದಿನದ ಅತ್ಯಂತ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸಿ, ಅಥವಾ ಈ ಸಮಸ್ಯೆಗಳಿಂದ ದೂರವಿರುವಂತವುಗಳಾಗಿವೆ ಎಂದಿದ್ದಾರೆ.  ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಭಾರತದ ಪ್ರಜಾಪ್ರಭುತ್ವದ ಎಲ್ಲಾ ಮೂರು ಸ್ತಂಭಗಳನ್ನು ವ್ಯವಸ್ಥಿತವಾಗಿ ಕಿತ್ತುಹಾಕುತ್ತಿದೆ ಎಂದು ಅವರು ಹೇಳಿದರು. ಸಂಸತ್ತಿನಲ್ಲಿ ಇತ್ತೀಚಿನ ವಿದ್ಯಮಾನಗಳನ್ನು ಪ್ರಸ್ತಾಪಿಸಿದ ಸೋನಿಯಾ, ಅಧಿವೇಶನಗಳನ್ನು ಅಡ್ಡಿಪಡಿಸಲು ಮತ್ತು ನಿರುದ್ಯೋಗ, ಹಣದುಬ್ಬರ ಮತ್ತು ಸಮಾಜದ ವಿಭಜನೆ, ವರ್ಷದ ಬಜೆಟ್ ಮತ್ತು ಅದಾನಿ ಹಗರಣ ಮೊದಲಾದ ಸಮಸ್ಯೆಗಳನ್ನು ಪ್ರತಿಪಕ್ಷಗಳು ಎತ್ತದಂತೆ ತಡೆಯಲು ಸರ್ಕಾರ  ಕಾರ್ಯತಂತ್ರ ನಡೆಸಿದೆ ಎಂದು ಸೋನಿಯಾ ಆರೋಪಿಸಿದ್ದಾರೆ.

ವಿರೋಧವನ್ನು ಎದುರಿಸಲು ಕೇಂದ್ರ ಸರ್ಕಾರವು ಕಠಿಣವಾದ ಕ್ರಮಗಳನ್ನು ಕೈಗೊಂಡಿದೆ ಎಂದ ಸೋನಿಯಾ ಲೋಕಸಭೆಯ ಸಂಸದರಾಗಿ ರಾಹುಲ್ ಗಾಂಧಿಯವರ ಅನರ್ಹತೆ ಮತ್ತು ಅವರ ಭಾಷಣದ ಭಾಗಗಳನ್ನು ಸಂಸತ್ತಿನ ದಾಖಲೆಗಳಿಂದ ಹೊರಹಾಕಿರುವ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಎಲ್ಲಾ ಕಳ್ಳರ ಸರ್​​ನೇಮ್ ಮೋದಿ ಎಂದೇ ಯಾಕಿದೆ ಎಂಬ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಸುಮಾರು 45 ಲಕ್ಷ ಕೋಟಿ ರೂಪಾಯಿಗಳ ವೆಚ್ಚವನ್ನು ಕಲ್ಪಿಸುವ ಕೇಂದ್ರ ಬಜೆಟ್ 2023 ಅನ್ನು ಅಂಗೀಕರಿಸಲು ಇಷ್ಟೊಂದು ಗೊಂದಲ ಸೃಷ್ಟಿಸಲಾಯಿತು. ಇದರ ಪರಿಣಾಮವಾಗಿ 45 ಲಕ್ಷ ಕೋಟಿ ರೂಪಾಯಿಗಳ ಜನರ ಹಣದ ಬಜೆಟ್ ಅನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು ಎಂದು ಸೋನಿಯಾ ಗಾಂಧಿ ಅವರು ದಿ ಹಿಂದೂ ಪತ್ರಿಕೆಯಲ್ಲಿನ ಲೇಖನದಲ್ಲಿ ಬರೆದಿದ್ದಾರೆ.

ಲೋಕಸಭೆಯಲ್ಲಿ ಹಣಕಾಸು ಮಸೂದೆ ಬಗ್ಗೆ ಚರ್ಚೆಯಾದಾಗ ಪ್ರಧಾನಿ ತಮ್ಮ ಕ್ಷೇತ್ರದಲ್ಲಿ ಯೋಜನೆಗಳನ್ನು ಉದ್ಘಾಟಿಸುವುದರಲ್ಲಿ ನಿರತರಾಗಿದ್ದರು. ತಮ್ಮ ಬಜೆಟ್ ಭಾಷಣದಲ್ಲಿ ನಿರುದ್ಯೋಗ ಅಥವಾ ಹಣದುಬ್ಬರವನ್ನು ಪ್ರಸ್ತಾಪಿಸದಿದ್ದಕ್ಕಾಗಿ  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತರಾಟೆಗೆ ತೆಗೆದುಕೊಂಡ ಸೋನಿಯಾ ಈ ಸಮಸ್ಯೆಗಳು ಅಸ್ತಿತ್ವದಲ್ಲಿಲ್ಲ ಎಂಬಂತೆ ಅವರಿದ್ದರು ಎಂದಿದ್ದಾರೆ.

ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸೋನಿಯಾ ಗಾಂಧಿ ಪುನರುಚ್ಛರಿಸಿದ್ದಾರೆ.95 ಪ್ರತಿಶತಕ್ಕೂ ಹೆಚ್ಚು ರಾಜಕೀಯ ಪ್ರಕರಣಗಳು ಪ್ರತಿಪಕ್ಷಗಳ ವಿರುದ್ಧ ಮಾತ್ರ ದಾಖಲಾಗಿವೆ. ಬಿಜೆಪಿಗೆ ಸೇರುವವರ ವಿರುದ್ಧದ ಪ್ರಕರಣಗಳು ಮಾಯವಾಗುತ್ತವೆ

2022ರಲ್ಲಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಹಲವು ಬಾರಿ ಸಮನ್ಸ್ ನೀಡಿತ್ತು. ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಸಮನ್ಸ್ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತ್ತು.

ಮಾರ್ಚ್ 2023 ರಲ್ಲಿ,14 ವಿರೋಧ ಪಕ್ಷಗಳು ತಮ್ಮ ನಾಯಕರನ್ನು ಬಂಧಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿವೆ ಎಂದು ಆರೋಪಿಸಿ ಸುಪ್ರೀಂಕೋರ್ಟ್‌ಗೆ ಮೊರೆ ಹೋದವು.

ಪತ್ರಕರ್ತರು, ಕಾರ್ಯಕರ್ತರು ಮತ್ತು ಪ್ರತಿಷ್ಠಿತ ಚಿಂತನ ಚಾವಡಿ ವಿರುದ್ಧ ರಾಷ್ಟ್ರೀಯ ಭದ್ರತೆಗಾಗಿ ಕಾನೂನುಗಳ ದುರುಪಯೋಗವು ಎಗ್ಗಿಲ್ಲದೆ ಸಾಗಿದೆ ಎಂದು ಸೋನಿಯಾ ಗಾಂಧಿ ಬರೆದಿದ್ದಾರೆ. ಕೆಲವು ನಿವೃತ್ತ ನ್ಯಾಯಾಧೀಶರ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ನೀಡಿದ ಭಾರತ ವಿರೋಧಿ ಹೇಳಿಕೆಯನ್ನು ಅವರು ಟೀಕಿಸಿದರು. ಇದು ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ದುರ್ಬಲಗೊಳಿಸುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಜನರ ದಾರಿತಪ್ಪಿಸಲು, ಅವರನ್ನು ಪ್ರಚೋದಿಸಲು ಮತ್ತು ಸೇವೆ ಸಲ್ಲಿಸುತ್ತಿರುವ ನ್ಯಾಯಾಧೀಶರನ್ನು ಬೆದರಿಸಲು ಆಯ್ಕೆಮಾಡಲಾಗಿದೆ ಎಂದು ಸೋನಿಯಾ ಹೇಳಿದರು.

ಸರ್ಕಾರದ ರಾಜಕೀಯ ಬೆದರಿಕೆ… ಬಿಜೆಪಿಯ ಸ್ನೇಹಿತರ ಆರ್ಥಿಕ ಶಕ್ತಿಯೊಂದಿಗೆ ಪತ್ರಿಕಾ ಸ್ವಾತಂತ್ರ್ಯವನ್ನು ರಾಜಿ ಮಾಡುತ್ತಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

ಇದನ್ನೂ ಓದಿ: ದೇಶದ ಮುಖ್ಯ ನ್ಯಾಯಾಧೀಶರಾಗುವ ಕನಸು ನನ್ನದು ಎಂದು ಹೇಳಿದ ಪ್ರತಿಭಾನ್ವಿತ ಬಾಲಕಿಗೆ ಮೋದಿ ಕೊಟ್ಟ ಸಲಹೆ ಹೀಗಿತ್ತು

ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷ ಮತ್ತು ಹಿಂಸಾಚಾರವನ್ನು ಮಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅದನ್ನು ನಿರ್ಲಕ್ಷಿಸಿದ್ದಾರೆ.ಪ್ರ ಧಾನಿ ಮೋದಿಯವರು ಒಮ್ಮೆಯೂ ಶಾಂತಿ ಅಥವಾ ಸೌಹಾರ್ದತೆಗಾಗಿ ಕರೆ ನೀಡಿಲ್ಲ ಅಥವಾ ಅಪರಾಧಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದರು.

ಧಾರ್ಮಿಕ ಹಬ್ಬಗಳು ಇತರರನ್ನು ಬೆದರಿಸುವ ಮತ್ತು ಹೀಯಾಳಿಸುವ ಸಂದರ್ಭಗಳಾಗಿ ಕಂಡುಬರುತ್ತವೆ – ಅವುಗಳು ಸಂತೋಷ ಮತ್ತು ಆಚರಣೆಯ ಸಂದರ್ಭಗಳು ಎಂಬುದು ಈಗಿಲ್ಲ ಬದಲಿಗೆ, ಅವರ ಧರ್ಮ, ಆಹಾರ, ಜಾತಿ, ಲಿಂಗ ಅಥವಾ ಭಾಷೆಯ ಕಾರಣದಿಂದಾಗಿ ಬೆದರಿಕೆ ಮತ್ತು ತಾರತಮ್ಯ ಅನುಭವಿಸಬೇಕಾಗುತ್ತದೆ ಎಂದು ಸೋನಿಯಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Tue, 11 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ