AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಪ್ರಕರಣ: ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಜಾರಿ ನಿರ್ದೇಶನಾಲಯ ಕೋರ್ಟ್ ಸಮನ್ಸ್

ಅಕ್ರಮ ಆಸ್ತಿ ಪ್ರಕರಣ ಸಂಬಂಧ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ಸಮನ್ಸ್ ಕಳಿಸಿದ ಜಾರಿ ನಿರ್ದೇಶನಾಲಯ ಕೋರ್ಟ್ ಜನವರಿ 11ಕ್ಕೆ ಮುನ್ನ ಹಾಜರಾಗುವಂತೆ ಹೇಳಿದೆ.

ಅಕ್ರಮ ಆಸ್ತಿ ಪ್ರಕರಣ: ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಜಾರಿ ನಿರ್ದೇಶನಾಲಯ ಕೋರ್ಟ್ ಸಮನ್ಸ್
ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ
ರಶ್ಮಿ ಕಲ್ಲಕಟ್ಟ
|

Updated on: Jan 10, 2021 | 12:34 PM

Share

ಹೈದರಾಬಾದ್: ಅಕ್ರಮ ಆಸ್ತಿ ಪ್ರಕರಣ ಸಂಬಂಧ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಇತರ ಅಧಿಕಾರಿಗಳಿಗೆ ಸಮನ್ಸ್ ಕಳಿಸಿದ ಜಾರಿ ನಿರ್ದೇಶನಾಲಯ ಕೋರ್ಟ್ ಜನವರಿ 11ಕ್ಕೆ ಮುನ್ನ ಹಾಜರಾಗುವಂತೆ ಹೇಳಿದೆ.

ಅರಬಿಂದೊ ಫಾರ್ಮಾ ಮತ್ತು ಹೆಟೆರೊ ಡ್ರಗ್ಸ್ ಸಂಸ್ಥೆಗೆ ಜಮೀನು ಮಂಜೂರು ಮಾಡಿದ ಪ್ರಕರಣದಲ್ಲಿ ನಾಂಪಲ್ಲಿ ಮೆಟ್ರೊಪಾಲಿಟನ್ ಸೆಷನ್ಸ್ ಜಡ್ಜ್ (ಎಂಎಸ್​ಜೆ) ನ್ಯಾಯಾಲಯದಲ್ಲಿ ಆರೋಪಪಟ್ಟಿ ದಾಖಲಿಸಲಾಗಿತ್ತು. ಆದರೆ ಹಣ ಅವ್ಯವಹಾರ ತಡೆ ಕಾಯ್ದೆಯಡಿಯಲ್ಲಿ ವಿಚಾರಣೆ ನಡೆಯಬೇಕಾದ ಕಾರಣ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ನವೆಂಬರ್ 11ಕ್ಕೆ ಹಾಜರಾಗುವಂತೆ ಈ ಹಿಂದೆ ಇಡಿ ಸಮನ್ಸ್ ನೀಡಿತ್ತು.

ಜಗನ್ ಮೋಹನ್ ರೆಡ್ಡಿ ಅವರ ಜತೆ ಸಂಸದ ವಿಜಯ ಸಾಯಿರೆಡ್ಡಿ, ಹೆಟೆರೊ ಡ್ರಗ್ಸ್ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ್ ರೆಡ್ಡಿ, ಅರಬಿಂದೊ ಫಾರ್ಮಾ ವ್ಯವಸ್ಥಾಪಕ ನಿರ್ದೇಶಕ ನಿತ್ಯಾನಂದ ರೆಡ್ಡಿ, ಪಿವಿ ರಾಮಪ್ರಸಾದ ರೆಡ್ಡಿ, ಟೈಡೆಂಟ್ ಲೈಫ್ ಸಯನ್ಸೆಸ್ ನಿರ್ದೇಶಕ ಚಂದ್ರ ರೆಡ್ಡಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಬಿಪಿ ಆಚಾರ್ಯ ಅವರಿಗೆ ಇಡಿ ಕೋರ್ಟ್ ಸಮನ್ಸ್ ಕಳಿಸಿದೆ.

ಚಂದ್ರಬಾಬು ನಾಯ್ಡು ‘ಅಮರಾವತಿ’ ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?