ಅಕ್ರಮ ಆಸ್ತಿ ಪ್ರಕರಣ: ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಜಾರಿ ನಿರ್ದೇಶನಾಲಯ ಕೋರ್ಟ್ ಸಮನ್ಸ್

ಅಕ್ರಮ ಆಸ್ತಿ ಪ್ರಕರಣ ಸಂಬಂಧ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ಸಮನ್ಸ್ ಕಳಿಸಿದ ಜಾರಿ ನಿರ್ದೇಶನಾಲಯ ಕೋರ್ಟ್ ಜನವರಿ 11ಕ್ಕೆ ಮುನ್ನ ಹಾಜರಾಗುವಂತೆ ಹೇಳಿದೆ.

ಅಕ್ರಮ ಆಸ್ತಿ ಪ್ರಕರಣ: ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಜಾರಿ ನಿರ್ದೇಶನಾಲಯ ಕೋರ್ಟ್ ಸಮನ್ಸ್
ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ
ರಶ್ಮಿ ಕಲ್ಲಕಟ್ಟ

Updated on: Jan 10, 2021 | 12:34 PM

ಹೈದರಾಬಾದ್: ಅಕ್ರಮ ಆಸ್ತಿ ಪ್ರಕರಣ ಸಂಬಂಧ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಇತರ ಅಧಿಕಾರಿಗಳಿಗೆ ಸಮನ್ಸ್ ಕಳಿಸಿದ ಜಾರಿ ನಿರ್ದೇಶನಾಲಯ ಕೋರ್ಟ್ ಜನವರಿ 11ಕ್ಕೆ ಮುನ್ನ ಹಾಜರಾಗುವಂತೆ ಹೇಳಿದೆ.

ಅರಬಿಂದೊ ಫಾರ್ಮಾ ಮತ್ತು ಹೆಟೆರೊ ಡ್ರಗ್ಸ್ ಸಂಸ್ಥೆಗೆ ಜಮೀನು ಮಂಜೂರು ಮಾಡಿದ ಪ್ರಕರಣದಲ್ಲಿ
ನಾಂಪಲ್ಲಿ ಮೆಟ್ರೊಪಾಲಿಟನ್ ಸೆಷನ್ಸ್ ಜಡ್ಜ್ (ಎಂಎಸ್​ಜೆ) ನ್ಯಾಯಾಲಯದಲ್ಲಿ ಆರೋಪಪಟ್ಟಿ ದಾಖಲಿಸಲಾಗಿತ್ತು. ಆದರೆ ಹಣ ಅವ್ಯವಹಾರ ತಡೆ ಕಾಯ್ದೆಯಡಿಯಲ್ಲಿ ವಿಚಾರಣೆ ನಡೆಯಬೇಕಾದ ಕಾರಣ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ನವೆಂಬರ್ 11ಕ್ಕೆ ಹಾಜರಾಗುವಂತೆ ಈ ಹಿಂದೆ ಇಡಿ ಸಮನ್ಸ್ ನೀಡಿತ್ತು.

ಜಗನ್ ಮೋಹನ್ ರೆಡ್ಡಿ ಅವರ ಜತೆ ಸಂಸದ ವಿಜಯ ಸಾಯಿರೆಡ್ಡಿ, ಹೆಟೆರೊ ಡ್ರಗ್ಸ್ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ್ ರೆಡ್ಡಿ, ಅರಬಿಂದೊ ಫಾರ್ಮಾ ವ್ಯವಸ್ಥಾಪಕ ನಿರ್ದೇಶಕ ನಿತ್ಯಾನಂದ ರೆಡ್ಡಿ, ಪಿವಿ ರಾಮಪ್ರಸಾದ ರೆಡ್ಡಿ, ಟೈಡೆಂಟ್ ಲೈಫ್ ಸಯನ್ಸೆಸ್ ನಿರ್ದೇಶಕ ಚಂದ್ರ ರೆಡ್ಡಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಬಿಪಿ ಆಚಾರ್ಯ ಅವರಿಗೆ ಇಡಿ ಕೋರ್ಟ್ ಸಮನ್ಸ್ ಕಳಿಸಿದೆ.

ಚಂದ್ರಬಾಬು ನಾಯ್ಡು ‘ಅಮರಾವತಿ’ ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ

 

ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Loading...
Unable to load recommendations.
Follow Us