AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

49 ಸದಸ್ಯರು ಅಮಾನತು; ಇಲ್ಲಿವರೆಗೆ ಸಂಸತ್​​ನಿಂದ ಸಸ್ಪೆಂಡ್ ಆಗಿದ್ದು ವಿಪಕ್ಷದ 141 ಸಂಸದರು

MPs Suspended: ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಸಂಸದರನ್ನು ಸ್ಪೀಕರ್ ಬಿರ್ಲಾ ಅಮಾನತು ಮಾಡಿದ್ದಾರೆ. ನ್ಯಾಶನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕರಾದ ಶಶಿ ತರೂರ್ ಮತ್ತು ಕಾರ್ತಿ ಚಿದಂಬರಂ, ಎನ್‌ಸಿಪಿಯ ಸುಪ್ರಿಯಾ ಸುಳೆ ಮತ್ತು ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಸೇರಿದಂತೆ ವಿಪಕ್ಷ ಎಂಪಿಗಳನ್ನು ಮಂಗಳವಾರ ಅಮಾನತು ಮಾಡಲಾಗಿದೆ.

49 ಸದಸ್ಯರು ಅಮಾನತು; ಇಲ್ಲಿವರೆಗೆ ಸಂಸತ್​​ನಿಂದ ಸಸ್ಪೆಂಡ್ ಆಗಿದ್ದು ವಿಪಕ್ಷದ 141 ಸಂಸದರು
ವಿಪಕ್ಷ ಸಂಸದರ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on:Dec 19, 2023 | 1:52 PM

ದೆಹಲಿ ಡಿಸೆಂಬರ್ 19: ಸೋಮವಾರ ಒಂದೇ ದಿನದಲ್ಲಿ 79 ವಿರೋಧ ಪಕ್ಷದ ಸಂಸದರನ್ನು ಸಂಸತ್ತಿನಿಂದ (Parliament) ಅಮಾನತುಗೊಳಿಸಿರುವ (MPs Suspended) ಬೆನ್ನಲ್ಲೇ ಇಂದು (ಮಂಗಳವಾರ) 49 ಸದಸ್ಯರನ್ನು ಅಮಾನತು ಮಾಡಲಾಗಿದೆ. ಇದೀಗ ಈ ಅಧಿವೇಶನದಲ್ಲಿ ಅಮಾನತುಗೊಂಡ ಒಟ್ಟು ಸಂಸದರ ಸಂಖ್ಯೆ 141ಕ್ಕೇರಿದ್ದು, ಇದು ದಾಖಲೆ ಆಗಿದೆ. ಕಲಾಪಕ್ಕೆ ಅಡ್ಡಿಪಡಿಸಿದ ನ್ಯಾಶನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕರಾದ ಶಶಿ ತರೂರ್ (Shashi Tharoor) ಮತ್ತು ಕಾರ್ತಿ ಚಿದಂಬರಂ, ಎನ್‌ಸಿಪಿಯ ಸುಪ್ರಿಯಾ ಸುಳೆ ಮತ್ತು ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಸೇರಿದಂತೆ ವಿಪಕ್ಷ ಎಂಪಿಗಳನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ.

ಕಳೆದ ವಾರ ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಬ್ಬರು ಒಳನುಸುಳುಕೋರರು ಲೋಕಸಭೆಯ ಸಭಾಂಗಣಕ್ಕೆ ಪ್ರವೇಶಿಸಿ, ಡಬ್ಬಿಗಳಿಂದ ಬಣ್ಣದ ಹೊಗೆಯನ್ನು ಬಿಡುಗಡೆ ಮಾಡಿದ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಮಾತನಾಡಬೇಕೆಂದು ವಿಪಕ್ಷ ಸಂಸದರು ಒತ್ತಾಯಿಸುತ್ತಿದ್ದಾರೆ.

ಸದನದಲ್ಲಿ ಯಾವುದೇ ಭದ್ರತೆಗೆ ಸಂಬಂಧಿಸಿದ ಘಟನೆಗಳು ಸಚಿವಾಲಯದ ವ್ಯಾಪ್ತಿಗೆ ಬರುತ್ತವೆ ಮತ್ತು ಕೇಂದ್ರವು ಮಧ್ಯಪ್ರವೇಶಿಸಲು ಬಿಡುವುದಿಲ್ಲ ಎಂದು ಲೋಕಸಭಾ ಸ್ಪೀಕರ್ ಸಮರ್ಥಿಸಿಕೊಂಡಿದ್ದಾರೆ. “ಸರ್ಕಾರವು ಲೋಕಸಭೆಯ ಕಾರ್ಯದರ್ಶಿಯ (ಜವಾಬ್ದಾರಿಗಳಲ್ಲಿ) ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ನಾವು ಅದನ್ನೂ ಅನುಮತಿಸುವುದಿಲ್ಲ ಎಂದು ಬಿರ್ಲಾ ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ದೈನಿಕ್ ಜಾಗರಣ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಭದ್ರತಾ ಲೋಪವನ್ನು “ಅತ್ಯಂತ ಗಂಭೀರ” ವಿಷಯ ಎಂದಿದ್ದು ಇದನ್ನು ತನಿಖೆ ಮಾಡಬೇಕು ಎಂದು ಹೇಳಿದ್ದಾರೆ. ಆದರೆ, ಈ ಬಗ್ಗೆ ಚರ್ಚೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕಳೆದ ವಾರದಿಂದ ಅಮಾನತು ಕ್ರಮ ಆರಂಭವಾಗಿದೆ. ಭದ್ರತಾ ಉಲ್ಲಂಘನೆಯ ಒಂದು ದಿನದ ನಂತರ, ಪ್ರತಿಪಕ್ಷ ಸಂಸದರು ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಲು ಪ್ರಾರಂಭಿಸಿದರು. ಅಶಿಸ್ತಿನ ವರ್ತನೆಯ ಆಧಾರದ ಮೇಲೆ 13 ಲೋಕಸಭಾ ಸಂಸದರು ಮತ್ತು ಒಬ್ಬ ರಾಜ್ಯಸಭಾ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸೋಮವಾರ ಪ್ರತಿಪಕ್ಷಗಳ ಸಂಸದರು ಮತ್ತೆ ಪ್ರತಿಭಟನೆ ಆರಂಭಿಸಿದ್ದರು. ಇದು ಉಭಯ ಸದನಗಳಾದ್ಯಂತ ದಾಖಲೆಯ 79 ಸಂಸದರನ್ನು ಅಮಾನತು ಮಾಡಲು ಕಾರಣವಾಯಿತು.

ಈ 141 ಸಂಸದರ ಪೈಕಿ ಹೆಚ್ಚಿನವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದ್ದು, ಕೆಲವರು ಸದನದಲ್ಲಿ ಅವರ ನಡವಳಿಕೆಯ ಕುರಿತು ವಿಶೇಷಾಧಿಕಾರ ಸಮಿತಿಯ ವರದಿಗಾಗಿ ಕಾಯುತ್ತಿದ್ದಾರೆ. ತಮ್ಮ ಅಮಾನತು ಖಂಡಿಸಿ ಪ್ರತಿಪಕ್ಷಗಳ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುತ್ತಿನ ಅಮಾನತುಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, “ಸಂಪೂರ್ಣ ಶುದ್ಧೀಕರಣವನ್ನು ಕಾರ್ಯಗತಗೊಳಿಸಲಾಗುತ್ತಿದೆ. ಆದ್ದರಿಂದ ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸಲಾಗಿದೆ” ಎಂದು ಹೇಳಿದ್ದಾರೆ. ಇಬ್ಬರು ಸಂಸತ್ತಿನ ಒಳನುಗ್ಗುವವರ ಕಚೇರಿಗೆ ಪ್ರವೇಶಿಸಲು ಅನುಕೂಲ ಮಾಡಿದ ಬಿಜೆಪಿ ಸಂಸದರನ್ನು ರಕ್ಷಿಸುವುದಕ್ಕಾಗಿ ಈ ರೀತಿ ವಿಪಕ್ಷದವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಹೊಸ ಸಂಸತ್ತು ಅದರ ಎಲ್ಲಾ ದಬ್ಬಾಳಿಕೆಯಲ್ಲಿ ನ್ಯಾಮೋಕ್ರಸಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಅಮಾನತುಗೊಂಡ ಸಂಸದರಲ್ಲಿ ಒಬ್ಬರಾದ ಜೈರಾಮ್ ರಮೇಶ್ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿದ ನಂತರ ಮತ್ತು ಅವರಲ್ಲಿ ಕೆಲವರು ಸದನದ ಬಾವಿಗೆ ಬಂದ ನಂತರ ಇಂದು ಸಂಸದರನ್ನು ಅಮಾನತುಗೊಳಿಸಲಾಯಿತು. ಅನೇಕ ಸಂಸದರು ಫಲಕಗಳನ್ನು ಪ್ರದರ್ಶಿಸಿ ದ್ದು ,ಲವರು ಪ್ರಧಾನಿ ಮೋದಿಯವರ ಮಾರ್ಫ್ ಮಾಡಿದ ಚಿತ್ರವನ್ನು ತೋರಿಸಿದ್ದಾರೆ. ಸದನದೊಳಗೆ ಫಲಕಗಳನ್ನು ತರುವುದು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸ್ಪೀಕರ್ ಹೇಳಿದರು.

ಇದನ್ನೂ ಓದಿ:  ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ: ನರೇಂದ್ರ ಮೋದಿ

“ಈ ಸದನ ನಿಮಗೆ ಸೇರಿದ್ದು, ಸದನದೊಳಗೆ ಯಾರೂ ಫಲಕಗಳನ್ನು ತರಬಾರದು ಎಂದು ನಾವೆಲ್ಲರೂ ನಿರ್ಧರಿಸಿದ್ದೇವೆ. ಆದರೆ ನೀವು ಇಲ್ಲಿಗೆ ಪ್ಲೆಕಾರ್ಡ್‌ಗಳೊಂದಿಗೆ ಬಂದಿದ್ದೀರಿ. ನೀವೂ ವೇದಿಕೆಗೆ ಬಂದಿದ್ದೀರಿ. ಇದು ಸರಿಯೇ? ದಯವಿಟ್ಟು ನಿಮ್ಮ ನಿಮ್ಮ ಆಸನಗಳಿಗೆ ಹಿಂತಿರುಗಿ. ನಾನು ನಿಮಗೆ ಕೊನೆಯ ಎಚ್ಚರಿಕೆಯನ್ನು ನೀಡುತ್ತಿದೆ ”ಎಂದು ಅವರು ಹೇಳಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಎಲ್ಲಾ ಸಂಸದರು ಬಾವಿಗೆ ಬರದಿರಲು ನಿರ್ಧರಿಸಿದ್ದರು. ಪ್ರಧಾನಿಯವರ ಮಾರ್ಫ್ ಮಾಡಿದ ಚಿತ್ರ ಹೊಂದಿರುವ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎರಡೂ ಕಟ್ಟಡಗಳು ಸ್ಪೀಕರ್ ಅವರ ವ್ಯಾಪ್ತಿಗೆ ಒಳಪಟ್ಟಿವೆ. ನಾವು ಸ್ಪೀಕರ್ ಆದೇಶವನ್ನು ಅನುಸರಿಸುತ್ತಿದ್ದೇವೆ. ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ನಾವು ಸದನದ ಕಾರ್ಯನಿರ್ವಹಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳುವುದು … ಅವರು (ವಿರೋಧ ಪಕ್ಷ) ಜವಾಬ್ದಾರಿಯಿಂದ ವರ್ತಿಸಬೇಕು,” ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Tue, 19 December 23

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು