ನಾಲ್ಕು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿರುವ ಡಿಕೆಶಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಲ್ಕು ದಿನಗಳಿಗಾಗಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪಯಣ ಬೆಳೆಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಹ್ಮದ್ ಪಟೇಲ್ ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ನಾಲ್ಕು ದಿನ ದೆಹಲಿಯಲ್ಲೇ ಠೀಕಾಣಿ ಹೂಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆಗಸ್ಟ್ 19 ರಂದು ವೇಣುಗೋಪಾಲ್ ಭೇಟಿ ಮಾಡಿ ಡಿಜೆ ಹಳ್ಳಿ, ಕೆಜೆ ಹಳ್ಳಿ […]
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಲ್ಕು ದಿನಗಳಿಗಾಗಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪಯಣ ಬೆಳೆಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಹ್ಮದ್ ಪಟೇಲ್ ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ನಾಲ್ಕು ದಿನ ದೆಹಲಿಯಲ್ಲೇ ಠೀಕಾಣಿ ಹೂಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆಗಸ್ಟ್ 19 ರಂದು ವೇಣುಗೋಪಾಲ್ ಭೇಟಿ ಮಾಡಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಬಗ್ಗೆ ಚರ್ಚೆ ನಡೆಸಿ ನಂತರ ರಾಜೀವ್ ಗಾಂಧಿ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಆಗಸ್ಟ್ 20 ರಂದು ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ. ಸೋನಿಯಾ ಗಾಂಧಿ ಭೇಟಿ ಸಾಧ್ಯವಾದ್ರೆ ಪಕ್ಷ ಸಂಘಟನೆ, ರಾಜ್ಯ ರಾಜಕೀಯ ವಿಚಾರಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.