ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುತ್ತೇವೆ ಎಂದು ಈ ಹಿಂದಿನ ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಹೇಳಿದ್ದರು. ಹೀಗಾಗಿ ಡಿಕೆಶಿ ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಆದ್ರೆ, ಬೆಂಗಳೂರಿನಲ್ಲೇ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಸೇರಿದಂತೆ ಉಳಿದವರ ವಿಚಾರಣೆಗೆ ಇಡಿ ಅಧಿಕಾರಿಗಳು ಒಪ್ಪಿಲ್ಲ. ಹೀಗಾಗಿ ಅರ್ಜಿ ವಿಚಾರಣೆಯನ್ನು ಡಿ.18ಕ್ಕೆ ದೆಹಲಿ ಹೈಕೋರ್ಟ್ ಮುಂದೂಡಿದೆ.
Published On - 1:41 pm, Thu, 12 December 19