ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್ ಮತ್ತೆ ಆಸ್ಪತ್ರೆಗೆ ದಾಖಲು
ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ನಟ, ರಾಜಕಾರಣಿ ವಿಜಯಕಾಂತ್ ಅವರು ಅನಾರೋಗ್ಯದ ಕಾರಣ ಕಳೆದ ಕೆಲವು ವರ್ಷಗಳಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಅವರು ಆಗಾಗ್ಗೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮಂಗಳವಾರ ಅವರು ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದು ಅವರ ಆರೋಗ್ಯ ಸುಧಾರಿಸಿದೆ ಎಂದು ಪಕ್ಷ ಹೇಳಿಕೆ ನೀಡಿದೆ.
ಚೆನ್ನೈ ಡಿಸೆಂಬರ್ 27: ಡಿಎಂಡಿಕೆ (DMDK )ಸಂಸ್ಥಾಪಕ ಹಾಗೂ ಅಧ್ಯಕ್ಷ ‘ಕ್ಯಾಪ್ಟನ್’ ವಿಜಯಕಾಂತ್ (Vijayakanth) ಅನಾರೋಗ್ಯದಿಂದಾಗಿ ಮಂಗಳವಾರ ಚೆನ್ನೈನ (Chennai) ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ವಿಜಯಕಾಂತ್ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಡಿಎಂಡಿಕೆ ಪಕ್ಷವು ವಿಜಯಕಾಂತ್ ಅವರ ಆರೋಗ್ಯದ ಬಗ್ಗೆ ಹೇಳಿಕೆ ನೀಡಿದೆ. ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್ ಅವರನ್ನು 15 ದಿನಗಳ ನಂತರ ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆತರಲಾಯಿತು. ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಆರೋಗ್ಯ ತಪಾಸಣೆ, ಪರೀಕ್ಷೆಯ ನಂತರ ನಾಳೆ ಮನೆಗೆ ಮರಳುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ನಟ, ರಾಜಕಾರಣಿ ವಿಜಯಕಾಂತ್ ಅವರು ಅನಾರೋಗ್ಯದ ಕಾರಣ ಕಳೆದ ಕೆಲವು ವರ್ಷಗಳಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಅವರು ಆಗಾಗ್ಗೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಕೆಲವು ವರ್ಷಗಳ ಹಿಂದೆ ಮೂತ್ರಪಿಂಡ ಕಸಿ ಮಾಡಿದ ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಬೇಕಾಯಿತು.
— DMDK Party (@dmdkparty2005) December 26, 2023
ಏತನ್ಮಧ್ಯೆ, ವಿಜಯಕಾಂತ್ ಅವರು ನವೆಂಬರ್ 18 ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ಅವರ ಆರೋಗ್ಯದ ಬಗ್ಗೆ ವಿವಿಧ ವದಂತಿಗಳು ಹರಡಿದ್ದವು. ಅವರು ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಮನೆಗೆ ಮರಳಿದರು.
ಇದನ್ನೂ ಓದಿ: ತಮಿಳುನಾಡು: ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ, ಹಲವು ಮಂದಿ ಅಸ್ವಸ್ಥ
ಇದರ ಬೆನ್ನಲ್ಲೇ, ತಮ್ಮ ಪತ್ನಿ ಪ್ರೇಮಲತಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಡಿಎಂಡಿಕೆ ಸಾಮಾನ್ಯ ಸಭೆಯಲ್ಲಿ ವಿಜಯಕಾಂತ್ ಭಾಗವಹಿಸಿದ್ದರು ಈ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ 2024ಕ್ಕೆ ಪಕ್ಷವನ್ನು ಸಜ್ಜುಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ