Tamil Nadu Election 2021: ಎಂ.ಕೆ.ಸ್ಟಾಲಿನ್ ಪುತ್ರಿ ಮನೆ ಮೇಲೆ ಐಟಿ ದಾಳಿ; ಆದಾಯ ತೆರಿಗೆ ಇಲಾಖೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಡಿಎಂಕೆ

ಶುಕ್ರವಾರ ಬೆಳಗ್ಗೆಯಿಂದ ಐಟಿ ಅಧಿಕಾರಿಗಳು ತಮಿಳುನಾಡಿನಲ್ಲಿ ಶೋಧ ಕಾರ್ಯ ಪ್ರಾರಂಭ ಮಾಡಿದರು. ಸ್ಟಾಲಿನ್ ಪುತ್ರಿ-ಅಳಿಯ, ಡಿಎಂಕೆಯ ಕರೂರ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಸೆಂಥಿಲ್​ ಬಾಲಾಜಿಯವರಿಗೆ ಸಂಬಂಧಪಟ್ಟ ಸ್ಥಳಗಳು, ಎಸ್​ಎನ್​ಜೆ ಡಿಸ್ಟಿಲರಿ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು.

Tamil Nadu Election 2021: ಎಂ.ಕೆ.ಸ್ಟಾಲಿನ್ ಪುತ್ರಿ ಮನೆ ಮೇಲೆ ಐಟಿ ದಾಳಿ; ಆದಾಯ ತೆರಿಗೆ ಇಲಾಖೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಡಿಎಂಕೆ
ಎಂ.ಕೆ.ಸ್ಟಾಲಿನ್​
Follow us
Lakshmi Hegde
|

Updated on:Apr 03, 2021 | 1:01 PM

ಚೆನ್ನೈ: ತಮಿಳುನಾಡಿನಲ್ಲಿ ವಿಧಾನ ಸಭೆ ಸಮೀಪಿಸುತ್ತಿರುವ ಬೆನ್ನಲ್ಲೇ, ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್​ ಅವರ ಮಗಳು ಸೆಂಥಮರೈ, ಅಳಿಯ ಶಬರೀಶನ್​ ಅವರ ಚೆನ್ನೈನ ಮನೆ ಸೇರಿ, ದಂಪತಿಗೆ ಸೇರಿದ ಒಟ್ಟು4 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದರು. ಈ ಐಟಿ ದಾಳಿಯಿಂದ ಕೋಪಗೊಂಡಿರುವ ಡಿಎಂಕೆ ಪಕ್ಷವೀಗ ಚುನಾವಣಾ ಆಯೋಗದ ಕದ ತಟ್ಟಿದೆ. ಹೀಗೆ ಚುನಾವನಾ ಕೆಲವೇ ದಿನ ಇರುವಾಗ ದಾಳಿ ನಡೆಸುವುದು, ಚುನಾವಣಾ ಕಾನೂನುಗಳ ಉಲ್ಲಂಘನೆ ಎಂದು ಆರೋಪಿಸಿ, ಆದಾಯ ತೆರಿಗೆ ಇಲಾಖೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿ ಕೆಲವೆಡೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದ ಮಾಹಿತಿ ಸಿಕ್ಕಿದ್ದ ಹಿನ್ನೆಲೆಯಲ್ಲಿ ತಮಿಳುನಾಡಿನ ವಿವಿಧೆಡೆ ದಾಳಿ ನಡೆಸಿದ್ದಾಗಿ ನೇರ ತೆರಿಗೆಗಳ ಕೇಂದ್ರ ಮಂಡಳಿ ಹೇಳಿದೆ. ಇನ್ನು ದಾಳಿಯ ವೇಳೆ, ತೆರಿಗೆ ವಂಚನೆಗೆ ಸಂಬಂಧಪಟ್ಟ ಹಲವು ವಿಚಾರಗಳು ಗೊತ್ತಾಗಿವೆ. ಡಿಸ್ಟಲರಿ, ಸಾರಾಯಿ ಮಳಿಗೆಗಳು, ರಿಯಲ್​ ಎಸ್ಟೇಟ್​ ಉದ್ಯಮಗಳನ್ನು ನಡೆಸುತ್ತಿರುವರ ಮೇಲೆ ದಾಳಿ ನಡೆಸಲಾಗಿದೆ ಎಂದೂ ಹೇಳಿದೆ.

ಶುಕ್ರವಾರ ಬೆಳಗ್ಗೆಯಿಂದ ಐಟಿ ಅಧಿಕಾರಿಗಳು ತಮಿಳುನಾಡಿನಲ್ಲಿ ಶೋಧ ಕಾರ್ಯ ಪ್ರಾರಂಭ ಮಾಡಿದರು. ಸ್ಟಾಲಿನ್ ಪುತ್ರಿ-ಅಳಿಯ, ಡಿಎಂಕೆಯ ಕರೂರ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಸೆಂಥಿಲ್​ ಬಾಲಾಜಿಯವರಿಗೆ ಸಂಬಂಧಪಟ್ಟ ಸ್ಥಳಗಳು, ಎಸ್​ಎನ್​ಜೆ ಡಿಸ್ಟಿಲರಿ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಈ ಬಗ್ಗೆ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿರುವ ಡಿಎಂಕೆ ನಾಯಕ ಸ್ಟಾಲಿನ್​, ಬಿಜೆಪಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣೆಯಲ್ಲಿ ಹೇಗೂ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಪ್ರತಿಪಕ್ಷಗಳ ಮೇಲೆ ಹೀಗೆ ಐಟಿ ದಾಳಿ ಮಾಡಿಸುತ್ತಿದೆ. ನಾವು ಇಲ್ಲಿ AIADMK ಪಕ್ಷದ ಗುಲಾಮರಲ್ಲ. ಇಂಥ ಬೆದರಿಕೆಗಳಿಗೆಲ್ಲ ಅವರ ಕಾಲಬುಡಕ್ಕೆ ಹೋಗಿ ಬೀಳುವುದಿಲ್ಲ. ನಮಗೆ ಯಾರ ಭಯವೂ ಇಲ್ಲ. ಧೈರ್ಯವಾಗಿ ಎಲ್ಲವನ್ನೂ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಷ್ಟು ದಿನ ನಿಮಗೆ ಹಣಕಾಸಿನ ನೆರವು ಕೊಟ್ಟಿದ್ಯಾರು? ಸಿಡಿ ಸಂತ್ರಸ್ತೆಗೆ ಎಸ್​ಐಟಿ ಅಧಿಕಾರಿಗಳ ನೇರ ಪ್ರಶ್ನೆ

ದೇಶದಲ್ಲಿ ಇಂದು 89 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲು; 714 ಮಂದಿ ಸಾವು

Published On - 12:59 pm, Sat, 3 April 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್