AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK Files: ಅಣ್ಣಾಮಲೈ ವಿರುದ್ಧ ಡಿಎಂಕೆ ಕಿಡಿ; ಡಿಎಂಕೆ ಫೈಲ್ಸ್ ಕುರಿತ ದಾಖಲೆ ಬಿಡುಗಡೆ ಮಾಡದಿದ್ದರೆ ಕ್ರಿಮಿನಲ್ ಮೊಕದ್ದಮೆಯ ಎಚ್ಚರಿಕೆ

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಬಿಡುಗಡೆ ಮಾಡಿರುವ ‘ಡಿಎಂಕೆ ಫೈಲ್ಸ್’ ಈಗ ರಾಜ್ಯದಲ್ಲಿ ರಾಜಕೀಯ ಕಿಡಿ ಹೊತ್ತಿಸಿದೆ.

DMK Files: ಅಣ್ಣಾಮಲೈ ವಿರುದ್ಧ ಡಿಎಂಕೆ ಕಿಡಿ; ಡಿಎಂಕೆ ಫೈಲ್ಸ್ ಕುರಿತ ದಾಖಲೆ ಬಿಡುಗಡೆ ಮಾಡದಿದ್ದರೆ ಕ್ರಿಮಿನಲ್ ಮೊಕದ್ದಮೆಯ ಎಚ್ಚರಿಕೆ
ಅಣ್ಣಾಮಲೈ
Ganapathi Sharma
|

Updated on: Apr 14, 2023 | 3:15 PM

Share

ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ (DMK) ಪಕ್ಷದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ (Annamalai) ಬಿಡುಗಡೆ ಮಾಡಿರುವ ‘ಡಿಎಂಕೆ ಫೈಲ್ಸ್’ ಈಗ ರಾಜ್ಯದಲ್ಲಿ ರಾಜಕೀಯ ಕಿಡಿ ಹೊತ್ತಿಸಿದೆ. ಅಣ್ಣಾಮಲೈ ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ದಾಖಲೆ ಬಿಡುಗಡೆ ಮಾಡದಿದ್ದರೆ ಎಲ್ಲ ಶಾಸಕರೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಿದ್ದೇವೆ ಎಂದು ಡಿಎಂಕೆ ಎಚ್ಚರಿಕೆ ನೀಡಿದೆ. ‘ಡಿಎಂಕೆ ಫೈಲ್ಸ್’ ಬಿಡುಗಡೆ ಮಾಡಿದ ಕೆಲವೇ ಗಂಅಟೆಗಳಲ್ಲಿ ಆ ಕುರಿತು ಪ್ರತಿಕ್ರಿಯಿಸಿರುವ ಡಿಎಂಕೆ, ತಾಕತ್ತಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಿ. ದಾಖಲೆ ಸಮೇತ ಆರೋಪ ಸಾಬೀತುಪಡಿಸಿ ಎಂದು ಸವಾಲೆಸೆದಿದೆ. ಡಿಎಂಕೆ ನಾಯಕರ ಮತ್ತು ಸಚಿವರ ವಿರುದ್ಧ ಮಾಡಿರುವ ಆರೋಪಕ್ಕೆ ಅಣ್ಣಾಮಲೈ 15 ದಿನಗಳ ಒಳಗೆ ಸಾಕ್ಷ್ಯ ಒದಗಿಸಬೇಕು. ಅದಕ್ಕೆ ಸಂಬಂಧಪಟ್ಟವರು ಕಾನೂನಾತ್ಮಕವಾಗಿ ಪ್ರತಿಕ್ರಿಯೆ ನೀಡುತ್ತಾರೆ. ಇಲ್ಲವಾದಲ್ಲಿ ಕ್ರಿಮಿನಲ್ ಪ್ರಕರಣ ಎದುರಿಸಲು ಅವರು (ಅಣ್ಣಾಮಲೈ) ಸಿದ್ಧರಾಗಿರಲಿ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್​ಎಸ್​​ ಭಾರತಿ ತಿಳಿಸಿದ್ದಾರೆ.

ಅಣ್ಣಾಮಲೈ ಈ ಹಿಂದೆ ಘೋಷಿಸಿದ್ದಂತೆ ಡಿಎಂಕೆ ನಾಯಕರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಒಂದೇ ಒಂದು ದಾಖಲೆಯನ್ನೂ ಬಹಿರಂಗಪಡಿಸಿಲ್ಲ. ಅಣ್ಣಾಮಲೈ ಅವರ ಈ ಆರೋಪಗಳು (ಡಿಎಂಕೆ ಫೈಲ್ಸ್) ನಗು ಬರಿಸುವ ಸಂಗತಿಗಳಾಗಿವೆ. ಅಣ್ಣಾಮಲೈ ಅವರು ಈ ಹಿಂದೆ ಅಷ್ಟೊಂದು ದಿನ ಪೊಲೀಸ್ ಇಲಾಖೆಯಲ್ಲಿ ಹೇಗೆ ಇದ್ದರು ಎಂಬುದೇ ಆಶ್ಚರ್ಯ ಎಂದು ಅವರು ಟೀಕಿಸಿದ್ದಾರೆ.

ಅಣ್ಣಾಮಲೈ ಅವರಿಗೆ 15 ದಿನಗಳ ಕಾಲಾವಕಾಶ ನೀಡುತ್ತೇವೆ. ಅವರು ಮಾಡಿರು ಆರೋಪಗಳಿಗೆ ಸಾಕ್ಷ್ಯಗಳನ್ನು ಒದಗಿಸದಿದ್ದಲ್ಲಿ ತಮಿಳುನಾಡಿನಾದ್ಯಂತ ಕೋರ್ಟ್​​ಗಳನ್ನು ಅಲೆಯಬೇಕಾಗಲಿದೆ ಎಂದು ಭಾರತಿ ಹೇಳಿದ್ದಾರೆ.

ಏನಿದು ಡಿಎಂಕೆ ಫೈಲ್ಸ್? ಅದರಲ್ಲೇನಿತ್ತು?

ಶುಕ್ರವಾರ ಬೆಳಿಗ್ಗೆ ಅಣ್ಣಾಮಲೈ ಅವರು ಡಿಎಂಕೆಯ ಉನ್ನತ ನಾಯಕರ ಸಂಪತ್ತಿನ ವಿವರ ಒಳಗೊಂಡ ಡಿಎಂಕೆ ಫೈಲ್ಸ್ ಬಿಡುಗಡೆ ಮಾಡಿದ್ದರು. ಕೇವಲ 27 ಮಂದಿ ಡಿಎಂಕೆ ನಾಯಕರು 2.24 ಲಕ್ಷ ಕೋಟಿ ರೂ. ಸಂಪತ್ತು ಹೊಂದಿದ್ದಾರೆ. ಇದು ತಮಿಳುನಾಡಿನ ಜಿಡಿಪಿಯ ಶೇ 10ರಷ್ಟಾಗಿದೆ ಎಂದು ಡಿಎಂಕೆ ಫೈಲ್ಸ್​​ನಲ್ಲಿ ಅವರು ಪ್ರತಿಪಾದಿಸಿದ್ದರು. ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರಾಗಿರುವ ಎಂಕೆ ಸ್ಟಾಲಿನ್ ವಿರುದ್ಧ ಅಣ್ಣಾಮಲೈ 200 ಕೋಟಿ ರೂಪಾಯಿ ಭ್ರಷ್ಟಾಚಾರದ ಆರೋಪವನ್ನೂ ಮಾಡಿದ್ದರು. ಸಿಎಂಆರ್​ಎಲ್​​ಗೆ ಟೆಂಡರ್​ ನೀಡುವುದಕ್ಕಾಗಿ 2011ರಲ್ಲಿ ಶೆಲ್ ಕಂಪನಿಗಳ ಮೂಲಕ ಸ್ಟಾಲಿನ್ ಅವರು ಚುನಾವಣಾ ನಿಧಿ ಪಡೆದಿದ್ದರು ಎಂದೂ ಅಣ್ಣಾಮಲೈ ಆರೋಪ ಮಾಡಿದ್ದರು. ಈ ಬಗ್ಗೆ ಸಿಬಿಐಗೆ ದೂರು ನೀಡುವುದಾಗಿಯೂ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್