AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MK Stalin: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹುಟ್ಟುಹಬ್ಬಕ್ಕೆ ಭರ್ಜರಿ ಸಿದ್ಧತೆ, ನವಜಾತ ಶಿಶುಗಳಿಗೆ ಚಿನ್ನದ ಉಂಗುರ ಉಡುಗೊರೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹುಟ್ಟುಹಬ್ಬಕ್ಕೆ ಡಿಎಂಕೆ ನಾಯಕರು ಭಾರಿ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್ 1 ರಂದು ಸ್ಟಾಲಿನ್ ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.

MK Stalin: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹುಟ್ಟುಹಬ್ಬಕ್ಕೆ ಭರ್ಜರಿ ಸಿದ್ಧತೆ, ನವಜಾತ ಶಿಶುಗಳಿಗೆ ಚಿನ್ನದ ಉಂಗುರ ಉಡುಗೊರೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್
ನಯನಾ ರಾಜೀವ್
|

Updated on: Feb 27, 2023 | 9:46 AM

Share

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹುಟ್ಟುಹಬ್ಬಕ್ಕೆ ಡಿಎಂಕೆ ನಾಯಕರು ಭಾರಿ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್ 1 ರಂದು ಸ್ಟಾಲಿನ್ ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಸ್ಟಾಲಿನ್ ಅವರ ಹುಟ್ಟುಹಬ್ಬಕ್ಕೆ ಡಿಎಂಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡುವುದು, ಕಲ್ಯಾಣ ಯೋಜನೆಗಳು, ಸಾರ್ವಜನಿಕ ಸಭೆಗಳು ಮತ್ತು ಕ್ರೀಡಾಕೂಟಗಳು ಇದರಲ್ಲಿ ಸೇರಿದೆ.

ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ಡಿಎಂಕೆಯ ದಕ್ಷಿಣ ಜಿಲ್ಲಾ ಘಟಕವು ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಭಾಗವಹಿಸಲಿದ್ದಾರೆ.

ನಮ್ಮ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ #HBDMKStalin70 ಆಚರಣೆಯಲ್ಲಿ ಪಾಲ್ಗೊಳ್ಳುವ ನಮ್ಮ ಎಲ್ಲಾ ಗಣ್ಯ ಅತಿಥಿಗಳು ಮತ್ತು ನಾಯಕರನ್ನು ಆಹ್ವಾನಿಸಲು ನಮಗೆ ತುಂಬಾ ಸಂತೋಷವಾಗಿದೆ ಎಂದು ಡಿಎಂಕೆ ಟ್ವೀಟ್‌ನಲ್ಲಿ ಬರೆದಿದೆ.

ಇಂಗ್ಲಿಷ್​ನಲ್ಲಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 1, 1953 ರಂದು ಜನಿಸಿದ ಸ್ಟಾಲಿನ್ 70 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಇಂತಹ ಸಂದರ್ಭದಲ್ಲಿ ನವಜಾತ ಶಿಶುಗಳಿಗೆ ಚಿನ್ನದ ಬಳೆ, ರೈತರಿಗೆ ಗಿಡ, ರಕ್ತದಾನ ಶಿಬಿರ, ನೇತ್ರ ಶಿಬಿರ ಹೀಗೆ ಸೇವಾ ಕಾರ್ಯಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹೊರಟಿದೆ.

ಸ್ಟಾಲಿನ್ ಅವರ ಜನ್ಮದಿನದಂದು ಕ್ರಿಕೆಟ್, ಕಬಡ್ಡಿ ಪಂದ್ಯಾವಳಿಗಳು ಮತ್ತು ಮ್ಯಾರಥಾನ್ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ