AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆಯಿಂದ ರಾಜ್ಯಸಭೆಗೆ ಕಮಲ್ ಹಾಸನ್ ಆಯ್ಕೆ?; ಕುತೂಹಲ ಮೂಡಿಸಿದ ಉದಯನಿಧಿ ಸ್ಟಾಲಿನ್ ಭೇಟಿ

ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ರಾಜ್ಯಸಭೆಗೆ ನಾಮನಿರ್ದೇಶನವಾಗಲಿದ್ದಾರೆ ಎಂಬ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯಿಂದ ಕಮಲ್ ಹಾಸನ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ವದಂತಿಗಳ ನಡುವೆ ಇಂದು ತಮಿಳುನಾಡಿನ ಡಿಸಿಎಂ ಉದಯನಿಧಿ ಸ್ಟಾಲಿನ್ ಕಮಲ್ ಹಾಸನ್ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಮಲ್ ಹಾಸನ್ ರಾಜ್ಯಸಭಾ ಎಂಟ್ರಿ ಕುರಿತಾದ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.

ಡಿಎಂಕೆಯಿಂದ ರಾಜ್ಯಸಭೆಗೆ ಕಮಲ್ ಹಾಸನ್ ಆಯ್ಕೆ?; ಕುತೂಹಲ ಮೂಡಿಸಿದ ಉದಯನಿಧಿ ಸ್ಟಾಲಿನ್ ಭೇಟಿ
Udhayanidhi Stalin Met Kamal Haasan
ಸುಷ್ಮಾ ಚಕ್ರೆ
|

Updated on:Feb 13, 2025 | 3:50 PM

Share

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ರಾಜ್ಯಸಭಾ ಸಂಸದರಾಗಲಿದ್ದಾರೆ ಎಂಬ ವರದಿಗಳು ಕೆಲವು ದಿನಗಳಿಂದ ಹರಿದಾಡಿತ್ತು. ಇದರ ನಡುವೆ ಇಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕಮಲ್ ಹಾಸನ್ ಅವರನ್ನು ಭೇಟಿ ಮಾಡಿದ್ದಾರೆ. ದ್ರಾವಿಡ ಪಕ್ಷಗಳ ವಿರುದ್ಧ ತಮ್ಮದೇ ಆದ ಪಕ್ಷವನ್ನು ಪ್ರಾರಂಭಿಸಿದ ಕಮಲ್ ಹಾಸನ್ ರಾಜಕೀಯ ಕ್ಷೇತ್ರದಲ್ಲಿ ಸರಣಿ ಸೋಲುಗಳನ್ನು ಎದುರಿಸಿದರು. ಗಮನಾರ್ಹ ಮತ ಪಾಲನ್ನು ಪಡೆದರೂ ಅವರು ಗೆಲ್ಲಲು ಸಾಧ್ಯವಾಗಲಿಲ್ಲ. ಕೊನೆಗೆ ಅವರು ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಾದ್ಯಂತ ಡಿಎಂಕೆ ಮೈತ್ರಿಕೂಟದ ಪರ ಪ್ರಚಾರ ಮಾಡಿದರು.

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ತಮಿಳುನಾಡಿನಲ್ಲಿ ಮುಂಬರುವ ರಾಜ್ಯಸಭಾ ಚುನಾವಣೆಯೊಂದಿಗೆ ಈ ಸಭೆ ಮಹತ್ವ ಪಡೆದುಕೊಂಡಿದೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳ ಅವಧಿ ಈ ವರ್ಷ ಕೊನೆಗೊಳ್ಳುತ್ತಿದೆ. ಆದ್ದರಿಂದ, ಲೋಕಸಭಾ ಚುನಾವಣೆಯ ಸಮಯದಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರ, ಕಮಲ್‌ ಹಾಸನ್​ಗೆ ರಾಜ್ಯಸಭಾ ಸಂಸದ ಸ್ಥಾನವನ್ನು ಡಿಎಂಕೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವಿರುದ್ಧವಾಗಿ ಯಾರೇ ನಿಂತ್ರೂ ಗೆಲ್ಲುವುದು ಡಿಎಂಕೆ ಮಾತ್ರ: ಉದಯನಿಧಿ ಸ್ಟಾಲಿನ್

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಇಂದು ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ತಾವಿಬ್ಬರೂ ರಾಜಕೀಯದ ಬಗ್ಗೆ ಚರ್ಚಿಸಿದ್ದೇವೆ ಎಂದು ಉದಯನಿಧಿ ಹೇಳಿದ್ದಾರೆ. ಉದಯನಿಧಿ ಅವರು ಎಕ್ಸ್​ನಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ “ನಾವು ಇಂದು ಮಕ್ಕಳ್ ನೀಧಿ ಮೈಯಂ ನಾಯಕ ಕಮಲ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದೆವು. ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದ ಅವರು ರಾಜಕೀಯ ಮತ್ತು ಕಲೆಯಂತಹ ವಿವಿಧ ಕ್ಷೇತ್ರಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಕಮಲ್ ಸರ್‌ಗೆ ನನ್ನ ಪ್ರೀತಿ ಮತ್ತು ಕೃತಜ್ಞತೆಗಳು” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳು ಚಿತ್ರರಂಗದಲ್ಲಿ ದೊಡ್ಡ ಸಾಮ್ರಾಜ್ಯ ಕಟ್ಟಿದ ಕಮಲ್ ಹಾಸನ್ ಆಸ್ತಿ ಎಷ್ಟು ಕೋಟಿ?

ನಿನ್ನೆಯಷ್ಟೇ, ಹಿಂದೂ ಧಾರ್ಮಿಕ ಮತ್ತು ದತ್ತಿ ಸಚಿವ ಶೇಖರ್ ಬಾಬು ಕೂಡ ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ತಮಿಳು ಸೂಪರ್‌ಸ್ಟಾರ್ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರನ್ನು ಡಿಎಂಕೆ ಬೆಂಬಲದೊಂದಿಗೆ ತಮಿಳುನಾಡಿನಿಂದ ರಾಜ್ಯಸಭಾಕ್ಕೆ ನಾಮನಿರ್ದೇಶನ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ರಾಜ್ಯಸಭಾ ಚುನಾವಣೆಯ ಮುಂದಿನ ಸುತ್ತು ಜುಲೈ 2025ರಲ್ಲಿ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Thu, 13 February 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ