
ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ರಾಜ್ಯಸಭಾ ಸಂಸದರಾಗಲಿದ್ದಾರೆ ಎಂಬ ವರದಿಗಳು ಕೆಲವು ದಿನಗಳಿಂದ ಹರಿದಾಡಿತ್ತು. ಇದರ ನಡುವೆ ಇಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕಮಲ್ ಹಾಸನ್ ಅವರನ್ನು ಭೇಟಿ ಮಾಡಿದ್ದಾರೆ. ದ್ರಾವಿಡ ಪಕ್ಷಗಳ ವಿರುದ್ಧ ತಮ್ಮದೇ ಆದ ಪಕ್ಷವನ್ನು ಪ್ರಾರಂಭಿಸಿದ ಕಮಲ್ ಹಾಸನ್ ರಾಜಕೀಯ ಕ್ಷೇತ್ರದಲ್ಲಿ ಸರಣಿ ಸೋಲುಗಳನ್ನು ಎದುರಿಸಿದರು. ಗಮನಾರ್ಹ ಮತ ಪಾಲನ್ನು ಪಡೆದರೂ ಅವರು ಗೆಲ್ಲಲು ಸಾಧ್ಯವಾಗಲಿಲ್ಲ. ಕೊನೆಗೆ ಅವರು ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಾದ್ಯಂತ ಡಿಎಂಕೆ ಮೈತ್ರಿಕೂಟದ ಪರ ಪ್ರಚಾರ ಮಾಡಿದರು.
ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ತಮಿಳುನಾಡಿನಲ್ಲಿ ಮುಂಬರುವ ರಾಜ್ಯಸಭಾ ಚುನಾವಣೆಯೊಂದಿಗೆ ಈ ಸಭೆ ಮಹತ್ವ ಪಡೆದುಕೊಂಡಿದೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳ ಅವಧಿ ಈ ವರ್ಷ ಕೊನೆಗೊಳ್ಳುತ್ತಿದೆ. ಆದ್ದರಿಂದ, ಲೋಕಸಭಾ ಚುನಾವಣೆಯ ಸಮಯದಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರ, ಕಮಲ್ ಹಾಸನ್ಗೆ ರಾಜ್ಯಸಭಾ ಸಂಸದ ಸ್ಥಾನವನ್ನು ಡಿಎಂಕೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ವಿರುದ್ಧವಾಗಿ ಯಾರೇ ನಿಂತ್ರೂ ಗೆಲ್ಲುವುದು ಡಿಎಂಕೆ ಮಾತ್ರ: ಉದಯನಿಧಿ ಸ್ಟಾಲಿನ್
மக்கள் நீதி மய்யத்தின் தலைவர் – கலைஞானி @ikamalhaasan சாரை இன்று அவருடைய இல்லத்தில் மரியாதை நிமித்தமாக சந்தித்தோம். அன்போடு வரவேற்று அரசியல், கலை என பல்வேறு துறைகள் சார்ந்து கருத்துக்களை பரிமாறிக்கொண்ட கமல் சாருக்கு என் அன்பும், நன்றியும்.@maiamofficial pic.twitter.com/YdLqu4KZs4
— Udhay (@Udhaystalin) February 13, 2025
ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಇಂದು ಮಕ್ಕಳ್ ನೀಧಿ ಮೈಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ತಾವಿಬ್ಬರೂ ರಾಜಕೀಯದ ಬಗ್ಗೆ ಚರ್ಚಿಸಿದ್ದೇವೆ ಎಂದು ಉದಯನಿಧಿ ಹೇಳಿದ್ದಾರೆ. ಉದಯನಿಧಿ ಅವರು ಎಕ್ಸ್ನಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ “ನಾವು ಇಂದು ಮಕ್ಕಳ್ ನೀಧಿ ಮೈಯಂ ನಾಯಕ ಕಮಲ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದೆವು. ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದ ಅವರು ರಾಜಕೀಯ ಮತ್ತು ಕಲೆಯಂತಹ ವಿವಿಧ ಕ್ಷೇತ್ರಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಕಮಲ್ ಸರ್‌ಗೆ ನನ್ನ ಪ್ರೀತಿ ಮತ್ತು ಕೃತಜ್ಞತೆಗಳು” ಎಂದು ಅವರು ಪೋಸ್ಟ್ ಮಾಡಿದ್ದಾರೆ.
மக்கள் நீதி மய்யம் கட்சியின் தலைவர் திரு. @ikamalhaasan அவர்களை, இந்து சமய அறநிலையத்துறை அமைச்சர் திரு. @PKSekarbabu அவர்கள் மரியாதை நிமித்தமாகச் சந்தித்து உரையாடினார்.
தலைவரின் அலுவலகத்தில் நடந்த இந்தச் சந்திப்பின்போது, கட்சியின் பொதுச்செயலாளர் திரு. @Arunachalam_Adv அவர்கள்… pic.twitter.com/ni4Ne3hqFb
— Makkal Needhi Maiam | மக்கள் நீதி மய்யம் (@maiamofficial) February 12, 2025
ಇದನ್ನೂ ಓದಿ: ತಮಿಳು ಚಿತ್ರರಂಗದಲ್ಲಿ ದೊಡ್ಡ ಸಾಮ್ರಾಜ್ಯ ಕಟ್ಟಿದ ಕಮಲ್ ಹಾಸನ್ ಆಸ್ತಿ ಎಷ್ಟು ಕೋಟಿ?
ನಿನ್ನೆಯಷ್ಟೇ, ಹಿಂದೂ ಧಾರ್ಮಿಕ ಮತ್ತು ದತ್ತಿ ಸಚಿವ ಶೇಖರ್ ಬಾಬು ಕೂಡ ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ತಮಿಳು ಸೂಪರ್‌ಸ್ಟಾರ್ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರನ್ನು ಡಿಎಂಕೆ ಬೆಂಬಲದೊಂದಿಗೆ ತಮಿಳುನಾಡಿನಿಂದ ರಾಜ್ಯಸಭಾಕ್ಕೆ ನಾಮನಿರ್ದೇಶನ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ರಾಜ್ಯಸಭಾ ಚುನಾವಣೆಯ ಮುಂದಿನ ಸುತ್ತು ಜುಲೈ 2025ರಲ್ಲಿ ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:49 pm, Thu, 13 February 25