Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಡಿಎಂಕೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸುವಲ್ಲಿ ಯಶಸ್ವಿಯಾದ ಕೆಲವು ದಿನಗಳ ನಂತರ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಇಂದು ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಡಿಎಂಕೆಯ ಲೋಕಸಭಾ ಸಚೇತಕ ಮತ್ತು ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ ಅವರು ಡಿಎಂಕೆ ಪಕ್ಷದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಡಿಎಂಕೆ
Dmk Leader Mk Stalin
Follow us
ಸುಷ್ಮಾ ಚಕ್ರೆ
|

Updated on: Apr 07, 2025 | 5:21 PM

ನವದೆಹಲಿ, ಏಪ್ರಿಲ್ 7: ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಂದ ತಿದ್ದುಪಡಿಯನ್ನು ಪ್ರಶ್ನಿಸಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಅರ್ಜಿ ಸಲ್ಲಿಸಿದೆ. ಡಿಎಂಕೆಯ ಲೋಕಸಭಾ ಸಚೇತಕ ಮತ್ತು ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪಕ್ಷದ ಪರವಾಗಿ ಅರ್ಜಿ ಸಲ್ಲಿಸಿದ್ದಾರೆ. ಡಿಎಂಕೆ (DMK) ಮತ್ತು ಇತರ ಹಲವಾರು ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧಕ್ಕೆ ಕಾರಣವಾದ ವಕ್ಫ್ (ತಿದ್ದುಪಡಿ) ಮಸೂದೆ 2024 ರ ಲೋಕಸಭೆಯಲ್ಲಿ ಅಂಗೀಕಾರವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 2ರಂದು ಲೋಕಸಭೆಯಲ್ಲಿ ಭಾಷಣ ಮಾಡುವಾಗ ಅವರು ವಕ್ಫ್ ಮಸೂದೆಯ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಇದು ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ನ್ಯಾಯಾಂಗ ಸಮಗ್ರತೆಗೆ ನೇರ ಬೆದರಿಕೆಯಾಗಿದೆ ಎಂದು ಅವರು ಟೀಕಿಸಿದ್ದರು.

ಎ. ರಾಜಾ ಅವರು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಮಸೂದೆಯನ್ನು ಸಮರ್ಥಿಸಿಕೊಂಡಿದ್ದನ್ನು ಟೀಕಿಸಿದ್ದರು ಮತ್ತು ಅವರು ಸಂಸತ್ತಿಗೆ “ಕೋಳಿ ಮತ್ತು ಗೂಳಿ ಕಥೆ”ಯನ್ನು ಮಂಡಿಸಿದ್ದಾರೆ ಎಂದು ಆರೋಪಿಸಿದ್ದರು. ವಕ್ಫ್ ತಿದ್ದುಪಡಿಯು ಸುಧಾರಣೆಯ ನೆಪದಲ್ಲಿ ಆಸ್ತಿ ಹಕ್ಕುಗಳನ್ನು ಬದಲಾಯಿಸುವ ಪ್ರಯತ್ನವಾಗಿದೆ ಎಂದು ಡಿಎಂಕೆ ಸಂಸದ ರಾಜಾ ವಾದಿಸಿದ್ದರು. ಇದು ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಅಸ್ತಿತ್ವದಲ್ಲಿರುವ ಕಾನೂನು ರಕ್ಷಣೆಗಳನ್ನು ಕೆಡವುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಮುಖೇಶ್ ಅಂಬಾನಿಯ 15,000 ಕೋಟಿ ಮೌಲ್ಯದ ವಿಶ್ವದ ಐಷಾರಾಮಿ ಬಂಗಲೆಗೆ ವಕ್ಫ್ ಕಂಟಕ?

ಇದನ್ನೂ ಓದಿ
Image
ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ
Image
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
Image
ವಕ್ಫ್ ವಿಷಯದಲ್ಲಿ ವಿಪಕ್ಷಗಳಿಂದ ದೇಶ ಇಬ್ಭಾಗಿಸುವ ಪ್ರಯತ್ನ; ಅಮಿತ್ ಶಾ ಆರೋಪ
Image
ವಕ್ಫ್ ತಿದ್ದುಪಡಿ ಮಸೂದೆ ಹಿಂತೆಗೆದುಕೊಳ್ಳಿ; ಸಿಎಂ ಸ್ಟಾಲಿನ್ ಒತ್ತಾಯ

ಭಾರತದ ಜಾತ್ಯತೀತ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಗೌರವಿಸುವಂತೆ ರಾಜಾ ಸರ್ಕಾರವನ್ನು ಒತ್ತಾಯಿಸಿದ್ದಲ್ಲದೆ, ಈ ಮಸೂದೆಯು ದೇಶದ ಪ್ರಜಾಪ್ರಭುತ್ವ ಚೌಕಟ್ಟಿನ ಮೇಲೆ ದೀರ್ಘಕಾಲೀನ ಋಣಾತ್ಮಕ ಪರಿಣಾಮಗಳನ್ನು ಬೀರಬಹುದು ಎಂದು ಅವರು ಎಚ್ಚರಿಸಿದ್ದರು.

ಇನ್ನು, ಡಿಎಂಕೆ ನಾಯಕ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ವಕ್ಫ್ ತಿದ್ದುಪಡಿ ಮಸೂದೆಗೆ ಬಲವಾದ ವಿರೋಧ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಮಧ್ಯರಾತ್ರಿ ಈ ಮಸೂದೆ ಅಂಗೀಕಾರವನ್ನು ಖಂಡಿಸಿದ್ದಾರೆ. 12 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಚರ್ಚೆಯ ನಂತರ ಮಸೂದೆಯನ್ನು 288-232 ಮತಗಳಿಂದ ಅಂಗೀಕರಿಸಲಾಯಿತು. ಸ್ಟಾಲಿನ್ ಭಾಷಣದ ಸಮಯದಲ್ಲಿ ಬಿಜೆಪಿ ಶಾಸಕರು ಪ್ರತಿಭಟಿಸಿ ಹೊರನಡೆದರು. ಸಿಎಂ ಸ್ಟಾಲಿನ್ ಅವರು ಬೆಳಗಿನ ಜಾವ 2 ಗಂಟೆಗೆ ವಕ್ಫ್ ಮಸೂದೆ ಅಂಗೀಕಾರವನ್ನು ಸಂವಿಧಾನದ ಮೇಲಿನ ದಾಳಿ ಮತ್ತು ಭಾರತದ ಜಾತ್ಯತೀತ ಚೌಕಟ್ಟಿನ ಮೇಲೆ ಒಂದು ಹೊಡೆತ ಎಂದು ಟೀಕಿಸಿದ್ದರು.

ಇದನ್ನೂ ಓದಿ: Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಒತ್ತಾಯ

ಏಪ್ರಿಲ್ 3ರ ಗುರುವಾರ ತಮಿಳುನಾಡು ವಿಧಾನಸಭೆಯಲ್ಲಿ ಸ್ಟಾಲಿನ್, ಡಿಎಂಕೆ ಶಾಸಕರು ಮತ್ತು ಮಿತ್ರಪಕ್ಷಗಳೊಂದಿಗೆ ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸಿದರು. ಮಸೂದೆ ಅಂಗೀಕಾರದ ಹೊರತಾಗಿಯೂ, ಅದರ ವಿರುದ್ಧ ಚಲಾವಣೆಯಾದ ಗಮನಾರ್ಹ ಸಂಖ್ಯೆಯ ಮತಗಳನ್ನು ನಿರ್ಲಕ್ಷಿಸಬಾರದು ಎಂದು ಅವರು ಪ್ರತಿಪಾದಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ