ಡಿಎಂಕೆ ಪಕ್ಷದ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ಆತ್ಮಹತ್ಯೆ

Tamilan Prasanna’s wife Suicide: ಮಂಗಳವಾರ ಆಕೆಯ ಹುಟ್ಟುಹಬ್ಬ ಆಗಿದ್ದು ತನ್ನ ಪತಿ ಅದ್ದೂರಿಯಾಗಿ  ಹುಟ್ಟುಹಬ್ಬವನ್ನು ಆಚರಿಸಬೇಕೆಂದು ನಾಧಿಯಾ ಬಯಸಿದ್ದಳು. ಆದರೆ ಕೊವಿಡ್ -19 ಪರಿಸ್ಥಿತಿಯಿಂದಾಗಿ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಪ್ರಸನ್ನ ವಿರೋಧ ವ್ಯಕ್ತಪಡಿಸಿದ್ದರು

ಡಿಎಂಕೆ ಪಕ್ಷದ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ಆತ್ಮಹತ್ಯೆ
ತಮಿಳನ್ ಪ್ರಸನ್ನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 08, 2021 | 6:15 PM

ಚೆನ್ನೈ: ಡಿಎಂಕೆ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ನಾಧಿಯಾ (35) ಸೋಮವಾರ ರಾತ್ರಿ ಚೆನ್ನೈನ ಕೊಡುಂಗೈಯೂರ್ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದಲೇ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ವಕೀಲರಾದ ಪ್ರಸನ್ನ ಅವರು ಡಿಎಂಕೆ ಸಾರ್ವಜನಿಕ ಸಂಪರ್ಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿದ್ದಾರೆ. ಮಂಗಳವಾರ ಆಕೆಯ ಹುಟ್ಟುಹಬ್ಬ ಆಗಿದ್ದು ತನ್ನ ಪತಿ ಅದ್ದೂರಿಯಾಗಿ  ಹುಟ್ಟುಹಬ್ಬವನ್ನು ಆಚರಿಸಬೇಕೆಂದು ನಾಧಿಯಾ ಬಯಸಿದ್ದಳು. ಆದರೆ ಕೊವಿಡ್ -19 ಪರಿಸ್ಥಿತಿಯಿಂದಾಗಿ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಪ್ರಸನ್ನ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ವರ್ಷ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸೋಣ ಎಂದಿದ್ದರು . ಈ ವಿಷಯದ ಬಗ್ಗೆ ಸೋಮವಾರ ರಾತ್ರಿ ದಂಪತಿಗಳ ನಡುವೆ ಜಗಳವಾಯಿತು.

ನಾಧಿಯಾ ತನ್ನ ಮಲಗುವ ಕೋಣೆಗೆ ಹೋಗಿ ಅದನ್ನು ಒಳಗಿನಿಂದ ಲಾಕ್ ಮಾಡಿದಳು . ಬೆಳಿಗ್ಗೆ ತನಕ ಅವಳ ಮಲಗುವ ಕೋಣೆ ಲಾಕ್ ಆಗಿದ್ದರಿಂದ ಪ್ರಸನ್ನ ಬಾಗಿಲು ಬಡಿದಿದ್ದಾರೆ.ಆದರೂ ಗಿಲು ತೆರೆದಾಗ ಅವಳು ನೇಣು ಬಿಗಿದ ಸ್ಥಿತಿಯಲ್ಲಿದ್ದಳು ಎಂದು ಎಂದು ಪ್ರಸನ್ನ ಅವರ ಹೇಳಿಕೆ ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ . ಪ್ರಸನ್ನ ತನ್ನ ಹೆಂಡತಿಯನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ತಪಾಸಣೆ ನಡೆಸಿ ಅವರ ಸಾವನ್ನು ದೃಢಪಡಿಸಿದರು. ನಾಧಿಯಾ ಅವರ ತಂದೆ ರವಿ ಸಲ್ಲಿಸಿದ ದೂರಿನ ಆಧಾರದ ಮೇಲೆ, ಕೊಡುಂಗೈಯೂರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಸನ್ನ ಅವರನ್ನು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಕೊವಿಡ್ ನಿರ್ವಹಣೆಯಲ್ಲಿ ನ್ಯಾಯಾಲಯದ ಪಾತ್ರಕ್ಕೆ ಶಾಲಾ ಬಾಲಕಿಯ ಮೆಚ್ಚುಗೆ ಪತ್ರ; ಮುಖ್ಯ ನ್ಯಾಯಮೂರ್ತಿಯ ಮನಮುಟ್ಟುವ ಉತ್ತರ

ಇದನ್ನೂ ಓದಿ:  ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ತೊಡಕುಂಟಾಗದಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ

(DMK spokesman Tamilan Prasanna’s wife Nadhiya ended her life by hanging in Chennai)

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ