AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ವಿಧಾನಸಭೆಯಲ್ಲಿನ್ನು ವಿಜಯ್​​ vs ಉದಯನಿಧಿ: ವಿಪಕ್ಷ ನಾಯಕನಾಗಿ ಮಾಜಿ ಡಿಸಿಎಂ ಆಯ್ಕೆ

ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಉದಯನಿಧಿ ಸ್ಟಾಲಿನ್ ಆಯ್ಕೆಯಾಗಿದ್ದಾರೆ. ಸಿ. ಜೋಸೇಫ್ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಎರಡನೇ ಅತಿದೊಡ್ಡ ಪಕ್ಷವಾದ ಡಿಎಂಕೆ ಈ ನಿರ್ಧಾರವನ್ನು ಪ್ರಕಟಿಸಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಅಂತಿಮಗೊಂಡಿದ್ದು, ಉದಯನಿಧಿ ಈಗ ವಿಧಾನಸಭೆಯಲ್ಲಿ ಡಿಎಂಕೆಯ ಹೋರಾಟವನ್ನು ಮುನ್ನಡೆಸಲಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿನ್ನು ವಿಜಯ್​​ vs ಉದಯನಿಧಿ: ವಿಪಕ್ಷ ನಾಯಕನಾಗಿ ಮಾಜಿ ಡಿಸಿಎಂ ಆಯ್ಕೆ
ಉದಯನಿಧಿ ಸ್ಟಾಲಿನ್​​Image Credit source: dinamalar.com
ಪ್ರಸನ್ನ ಹೆಗಡೆ
|

Updated on:May 10, 2026 | 9:48 PM

Share

ಚೆನ್ನೈ, ಮೇ 10: ತಮಿಳುನಾಡು ಸಿಎಂ ಆಗಿ ತಮಿಳಗ ವೆಟ್ರಿ ಕಳಗಂ (TVK) ಸ್ಥಾಪಕ ಮತ್ತು ಅಧ್ಯಕ್ಷ ಸಿ. ಜೋಸೇಫ್​​ ವಿಜಯ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯೂ ನಡೆದಿದೆ. ಚುನಾವಣಾ ಫಲಿತಾಂಶದಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿರುವ ಡಿಎಂಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಜಿ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್​​ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ.

ಎಂ.ಕೆ. ಸ್ಟಾಲಿನ್ ನೇತೃತ್ವದ ಸಭೆಯಲ್ಲಿ ತೀರ್ಮಾನ

ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್​​ ಅವರ ನೇತೃತ್ವದಲ್ಲಿ ಮೇ 7ರಂದು ಚೆನ್ನೈನಲ್ಲಿರುವ ಪಕ್ಷದ ಮುಖ್ಯ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕೆ.ಎನ್.​​ ನೆಹರು ಅವರನ್ನು ಪ್ರತಿಪಕ್ಷ ಉಪ ನಾಯಕ ಮತ್ತು ಇ.ವಿ. ವೇಲು ಅವರನ್ನು ಪಕ್ಷದ ವಿಪ್​​ ಆಗಿ ಆಯ್ಕೆ ಮಾಡಲಾಗಿದೆ ಎಂದು ಡಿಎಂಕೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು ಸಾಲದ ಬಗ್ಗೆ ಆರೋಪಿಸಿದ್ದ ಮುಖ್ಯಮಂತ್ರಿ ವಿಜಯ್​​ ಮಾತಿಗೆ ಮಾಜಿ ಸಿಎಂ ಸ್ಟಾಲಿನ್​​ ಆಕ್ರೋಶ 

ತಂದೆಯ ಸ್ಥಾನ ತುಂಬಲಿರುವ ಉದಯನಿಧಿ

ಕೊಲತ್ತೂರು ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಸೋತಿರುವ ಹಿನ್ನೆಲೆ, ತಂದೆಯ ಸ್ಥಾನವನ್ನು ಉದಯನಿಧಿ ತುಂಬಲಿದ್ದಾರೆ. ಡಿಎಂಕೆ ಯುವ ಘಟಕದ ನಾಯಕನಾಗಿ ನೇಮಕವಾದ ನಂತರ ಉದಯನಿಧಿ ಸ್ಟಾಲಿನ್ ಪಕ್ಷದಲ್ಲಿ ವೇಗವಾಗಿ ಪ್ರಭಾವ ಹೆಚ್ಚಿಸಿಕೊಂಡಿದ್ದರು. 2021ರಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದ ಬಳಿಕ ಮೊದಲು ಸಚಿವರಾಗಿ, ನಂತರ ಉಪ ಮುಖ್ಯಮಂತ್ರಿಯಾಗಿ ಪದೋನ್ನತಿ ಪಡೆದದಿದ್ದರು. ತಂದೆಯ ನಂತರ ಪಕ್ಷದ ಪ್ರಮುಖ ಶಕ್ತಿಕೇಂದ್ರವಾಗಿ ಹೊರಹೊಮ್ಮಿದ್ದ ಅವರಿಗೀಗ ಪ್ರತಿಪಕ್ಷ ನಾಯಕನ ಸ್ಥಾನವೂ ಸಿಕ್ಕಿದೆ. ಚೆಪಾಕ್-ತಿರುವಲ್ಲಿಕೆಣಿ ಕ್ಷೇತ್ರದಿಂದ ಎರಡನೇ ಬಾರಿ ಗೆದ್ದಿರುವ ಉದಯನಿಧಿ ಈಗ ವಿಧಾನಸಭೆಯಲ್ಲಿ ಡಿಎಂಕೆಯ ಪರ ಹೋರಾಟವನ್ನು ಮುನ್ನಡೆಸಬೇಕಾಗಿದೆ. ವಿಶೇಷವಾಗಿ ಹೊಸ ಸರ್ಕಾರವು ಹಿಂದಿನ ಆಡಳಿತದ ವಿರುದ್ಧ ವಿವಿಧ ಆಡಳಿತಾತ್ಮಕ ವೈಫಲ್ಯಗಳ ಹೊಣೆಗಾರಿಕೆಯನ್ನು ಬೊಟ್ಟು ಮಾಡಲು ಯತ್ನಿಸುವ ಸಂದರ್ಭದಲ್ಲೂ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವ ಸವಾಲು ಎದುರಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:47 pm, Sun, 10 May 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್