ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ಸಾಂಕೇತಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 06, 2021 | 4:23 PM

ಚೆನ್ನೈ: ದಿವಂಗತ ಜಯಲಲಿತಾ ಅವರ ನಿವಾಸ ವೇದ ನಿಲಯಂ ಅನ್ನು ಸ್ಮಾರಕವನ್ನಾಗಿ ಬದಲಾಯಿಸುವ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮದ್ರಾಸ್​ ಹೈಕೋರ್ಟ್​ ನ್ಯಾಯಮೂರ್ತಿ ಎನ್​. ಸೇಷಸಾಯಿ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದ್ದಾರೆ.

ಜಯಲಲಿತಾ ಮೃತಪಟ್ಟ ನಂತರ ಅವರ ಮನೆ ವೇದ ನಿಯಯಂ ಅನ್ನು ಸ್ಮಾರಕವನ್ನಾಗಿ ಮಾಡಲು ತಮಿಳುನಾಡು ಸರ್ಕಾರ ಮುಂದಾಗಿತ್ತು. ಇದಕ್ಕಾಗಿ ಸರ್ಕಾರ 67.9 ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಸರ್ಕಾರದ ಈ ನಿರ್ಧಾರವನ್ನು ಜಯಲಲಿತಾ ಸೋದರಳಿಯ ದೀಪಕ್​ ಹಾಗೂ ಸೋದರ ಸೊಸೆ ಜೆ. ದೀಪಾ ವಿರೋಧಿಸಿದ್ದರು. ಅಲ್ಲದೆ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇವರು ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿತ್ತು.

ಸದ್ಯ, ಈ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿದೆ. ಆದರೆ, ಸಂಕ್ರಾಂತಿ ಹಬ್ಬದ ಮರುದಿನವೇ ಈ ಸ್ಮಾರಕ ಉದ್ಘಾಟನೆಗೆ ಸರ್ಕಾರ ನಿರ್ಧರಿಸಿದೆ ಎನ್ನುವ ಸುದ್ದಿ ಬಿತ್ತರವಾಗಿತ್ತು. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಜನವರಿ 27ರಂದು ನಾವು ಕೊನೆಯ ವಿಚಾರಣೆ ನಡೆಸುತ್ತೇವೆ. ಹೀಗಾಗಿ, ಅಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿದೆ.

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ