ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತೆ? ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದೇನು?
ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ ಎನ್ನುವ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ರೈಲು ಪ್ರಯಾಣಿಕರಿಗೆ ಒದಗಿಸುವ ಹೊದಿಕೆಗಳನ್ನು ತಿಂಗಳಿಗೊಮ್ಮೆ ತೊಳೆಯಲಾಗುತ್ತದೆ ಮತ್ತು ಹಾಸಿಗೆಯ ಹೊದಿಕೆಯಾಗಿ ಅದರ ಬಳಕೆಗಾಗಿ ಹೆಚ್ಚುವರಿ ಬೆಡ್‌ಶೀಟ್ ಅನ್ನು ಬೆಡ್‌ರೋಲ್ ಕಿಟ್‌ನಲ್ಲಿ ನೀಡಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದರು.

ಭಾರತೀಯ ರೈಲ್ವೆಯಲ್ಲಿ ಬಳಸುವ ಕಂಬಳಿಯಂತಹ ಹೊದಿಕೆಯು ಹಗುರವಾಗಿದ್ದು, ತೊಳೆಯಲು ಕೂಡ ಸುಲಭ ಹಾಗೂ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡುತ್ತದೆ. ಯಾಂತ್ರೀಕೃತ ಲಾಂಡ್ರಿ ವ್ಯವಸ್ಥೆ ಇರುತ್ತದೆ, ಗುಣಮಟ್ಟದ ಯಂತ್ರಗಳ ಬಳಕೆ, ನಿರ್ದಿಷ್ಟ ರಾಸಾಯನಿಕಗಳ ಬಳಕೆ ಸೇರಿದಂತೆ ಪ್ರಯಾಣಿಕರ ಸುರಕ್ಷತೆ ಕಡೆಗೂ ಗಮನಹರಿಸಲಾಗುತ್ತದೆ.
ಮೂಲ ನೈರ್ಮಲ್ಯ ಮಾನದಂಡಗಳನ್ನು ಪೂರೈಸುವ ಹಾಸಿಗೆಗಳಿಗೆ ಪ್ರಯಾಣಿಕರು ಪಾವತಿಸುತ್ತಿದ್ದರೂ, ತಿಂಗಳಿಗೊಮ್ಮೆ ಹೊದಿಕೆಗಳನ್ನು ರೈಲ್ವೇ ತೊಳೆಯುತ್ತದೆಯೇ ಎಂದು ಕೇಳಿದ್ದ ಕಾಂಗ್ರೆಸ್ ಸಂಸದ ಕುಲದೀಪ್ ಇಂದೋರಾ ಅವರ ಪ್ರಶ್ನೆಗೆ ಅಶ್ವಿನಿ ವೈಷ್ಣವ್ ಈ ಮಾಹಿತಿ ನೀಡಿದರು.
ಮತ್ತಷ್ಟು ಓದಿ: Video: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಈಗ ರೈಲ್ವೇಯಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳಿವೆ. ರೈಲ್‌ಮದದ್ ಆ್ಯಪ್ ಮೂಲಕ ಪ್ರಯಾಣಿಕರು ತಮ್ಮ ದೂರುಗಳನ್ನು ದಾಖಲಿಸಿಕೊಳ್ಳುತ್ತಾರೆ. ದೂರು ಬಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಹೊದಿಕೆಗಳು ಅಥವಾ ಬೆಡ್‌ರೋಲ್‌ಗಳು ಇರಲಿ, ಎಲ್ಲವನ್ನೂ ಸ್ವಚ್ಛಗೊಳಿಸಲಾಗುತ್ತದೆ. ತೊಳೆದ ಲಿನಿನ್ ವಸ್ತುಗಳ ಗುಣಮಟ್ಟವನ್ನು ಪರೀಕ್ಷಿಸಲು ವೈಟೊ-ಮೀಟರ್ಗಳನ್ನು ಬಳಸಲಾಗುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ