‘ಬಾಂಗ್ಲಾದಲ್ಲಿರುವ ಹಿಂದೂಗಳಿಗಾಗಿ ಏನಾದರೂ ಮಾಡಿ’; ಪ್ಯಾಲೆಸ್ತೀನ್ ಬ್ಯಾಗ್ ವಿವಾದದ ನಂತರ ಪ್ರಿಯಾಂಕಾ ಗಾಂಧಿ ಮೊದಲ ಪ್ರತಿಕ್ರಿಯೆ

|

Updated on: Dec 16, 2024 | 7:13 PM

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು "ಪ್ಯಾಲೆಸ್ತೀನ್" ಎಂದು ಬರೆದಿರುವ ಬ್ಯಾಗ್ ಅನ್ನು ಹಾಕಿಕೊಂಡು ಲೋಕಸಭಾ ಅಧಿವೇಶನಕ್ಕೆ ಆಗಮಿಸಿದ್ದರು. ಇದಕ್ಕೆ ಬಿಜೆಪಿ ತೀವ್ರ ಟೀಕೆ ಮಾಡಿತ್ತು. ಈ ರೀತಿಯ ಅಗತ್ಯವಿಲ್ಲದ ವರ್ತನೆಗಳು ಸರಿಯಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಅಲ್ಲದೆ, ಸಂಸತ್ ಅಧಿವೇಶನದ ವೇಳೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದ ಬ್ಯಾಗ್ ಹಿಡಿದುಕೊಂಡು ಬಂದಿದ್ದರಿಂದ ಗದ್ದಲ ಉಂಟಾಯಿತು. ಇದಕ್ಕೆ ಇದೀಗ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಬಾಂಗ್ಲಾದಲ್ಲಿರುವ ಹಿಂದೂಗಳಿಗಾಗಿ ಏನಾದರೂ ಮಾಡಿ; ಪ್ಯಾಲೆಸ್ತೀನ್ ಬ್ಯಾಗ್ ವಿವಾದದ ನಂತರ ಪ್ರಿಯಾಂಕಾ ಗಾಂಧಿ ಮೊದಲ ಪ್ರತಿಕ್ರಿಯೆ
ಪ್ರಿಯಾಂಕಾ ಗಾಂಧಿ
Follow us on

ನವದೆಹಲಿ: ಕಾಂಗ್ರೆಸ್ ಸಂಸದೆ ಇಂದು ಲೋಕಸಭಾ ಅಧಿವೇಶನಕ್ಕೆ ಪ್ಯಾಲೆಸ್ತೀನ್ ಎಂದು ಬರೆದಿದ್ದ ಬ್ಯಾಗ್ ಹಾಕಿಕೊಂಡು ಬಂದಿದ್ದರು. ತಮ್ಮ ಬ್ಯಾಗ್ ಕುರಿತು ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಈ “ಕಸ”ದ ಬಗ್ಗೆ ಮಾತನಾಡುವ ಬದಲು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಸರ್ಕಾರ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಬಾಂಗ್ಲಾದೇಶದೊಂದಿಗೆ ಮಾತನಾಡಬೇಕು ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಏನಾದರೂ ಮಾಡಬೇಕು. ಈ ಬಗ್ಗೆ ಬಾಂಗ್ಲಾದೇಶ ಸರ್ಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.


ಇದನ್ನೂ ಓದಿ: Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ

ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಾಕಿಕೊಂಡು ಹೋಗುತ್ತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ, ಬಿಜೆಪಿ ಮತ್ತು ಇತರರಿಂದ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಏನಾದರೂ ಮಾಡುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಾಜಾದಲ್ಲಿ ಇಸ್ರೇಲ್‌ನ ಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಪ್ಯಾಲೆಸ್ಟೀನಿಯಾದವರಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ