ಏನಾದರೂ ಮಾಡಿ; ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯದ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

|

Updated on: Feb 18, 2025 | 3:49 PM

ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯದ ನಿಯಂತ್ರಣದ ಕೊರತೆಯನ್ನು ಯೂಟ್ಯೂಬ್‌ಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗಮನಿಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಣವೀರ್ ಅಲ್ಲಾಬಾಡಿಯಾ ಅವರ 'ಇಂಡಿಯಾಸ್ ಗಾಟ್ ಲೇಟೆಂಟ್' ವಿವಾದದ ಮಧ್ಯೆ ಯೂಟ್ಯೂಬ್​ನಲ್ಲಿ ಅಶ್ಲೀಲ ವಿಷಯವನ್ನು ನಿಯಂತ್ರಿಸುವಂತೆ ಒತ್ತಾಯಿಸಿದೆ. ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಅತಿಥಿ ತೀರ್ಪುಗಾರರಾಗಿ ಭಾಗವಹಿಸಿದ್ದಾಗ ರಣವೀರ್ ಅಲ್ಲಾಹಬಾಡಿಯಾ ನೀಡಿದ ಹೇಳಿಕೆ ಬಹಳ ವಿವಾದಕ್ಕೆ ಕಾರಣವಾಯಿತು. ಈ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾದವು. ಮಹಾರಾಷ್ಟ್ರ ಮತ್ತು ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಕೇಸ್​ಗಳ ವಿಚಾರಣೆ ನಡೆಯುತ್ತಿದೆ.

ಏನಾದರೂ ಮಾಡಿ; ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯದ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
Ranveer Allahbadia
Follow us on

ನವದೆಹಲಿ: ಯೂಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ಅಶ್ಲೀಲ ವಿಷಯದ ನಿಯಂತ್ರಣವನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೆಲವು ಯೂಟ್ಯೂಬರ್​​ಗಳು ಯೂಟ್ಯೂಬ್ ಅನ್ನು ದುರುಪಯೋಗಪಡಿಸಿಕೊಳ್ಳುವುದರ ಬಗ್ಗೆ ಕಳವಳ ವ್ಯಕ್ತಪಡಿಸಿತು. ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿದೆ. ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯದ ಬಗ್ಗೆ ಏನಾದರೂ ಕ್ರಮ ತೆಗೆದುಕೊಳ್ಳಲು ಬಯಸುತ್ತೀರಾ? ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿತು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು “ಸರ್ಕಾರ ಈ ವಿಷಯದಲ್ಲಿ ಏನಾದರೂ ಮಾಡಬೇಕೆಂದು ನಾವು ಬಯಸುತ್ತೇವೆ. ಸರ್ಕಾರ ಏನಾದರೂ ಮಾಡಲು ಸಿದ್ಧರಿದ್ದರೆ ನಾವು ಸಂತೋಷಪಡುತ್ತೇವೆ. ಇಲ್ಲದಿದ್ದರೆ, ಯೂಟ್ಯೂಬ್ ಚಾನೆಲ್‌ಗಳು ಮತ್ತು ಯೂಟ್ಯೂಬರ್‌ಗಳು ಯೂಟ್ಯೂಬ್ ಅನ್ನು ದುರುಪಯೋಗಪಡಿಸಿಕೊಳ್ಳಲು ನಾವು ಬಿಡುವುದಿಲ್ಲ. ಈ ವಿಷಯದ ಪ್ರಾಮುಖ್ಯತೆ ಮತ್ತು ಸೂಕ್ಷ್ಮತೆಯನ್ನು ನಾವು ಕಡೆಗಣಿಸಬಾರದು” ಎಂದು ಹೇಳಿದೆ.

ಇದನ್ನೂ ಓದಿ: ಅಶ್ಲೀಲ ಹೇಳಿಕೆ ವಿವಾದ; ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ವಿರುದ್ಧ ಮಹಿಳಾ ಆಯೋಗ ಸಮನ್ಸ್ ಜಾರಿ

ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ, ಡಿಜಿಟಲ್ ವಿಷಯವನ್ನು ನಿಯಂತ್ರಿಸಲು ಮಧ್ಯಪ್ರವೇಶಿಸುವುದಾಗಿ ನ್ಯಾಯಾಲಯ ಎಚ್ಚರಿಸಿದೆ.


ಪಾಡ್‌ಕ್ಯಾಸ್ಟರ್ ಮತ್ತು ಯೂಟ್ಯೂಬರ್ ರಣವೀರ್ ಅಲ್ಲಾಹಬಾಡಿಯಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಮತ್ತು ಬಂಧನದ ವಿರುದ್ಧ ಮಧ್ಯಂತರ ರಕ್ಷಣೆ ನೀಡುವಂತೆ ಕೋರಿದ ಮನವಿಯನ್ನು ಪರಿಗಣಿಸುವಾಗ ನ್ಯಾಯಾಲಯವು ಈ ಅವಲೋಕನಗಳನ್ನು ಮಾಡಿದೆ.

ಇದನ್ನೂ ಓದಿ: ಕೊಲೆ ಬೆದರಿಕೆ ಬರುತ್ತಿದೆ, ಅಮ್ಮನ ಕ್ಲಿನಿಕ್​ಗೆ ನುಗ್ಗಿದ್ದಾರೆ; ರಣವೀರ್ ಅಲ್ಲಾಹಬಾಡಿಯಾ

ಯೂಟ್ಯೂಬರ್ ರಣವೀರ್ ಅಲ್ಲಾಹಬಾಡಿಯಾ ಅವರ ಅಶ್ಲೀಲ ಹೇಳಿಕೆಗಳಿಗಾಗಿ ಸುಪ್ರೀಂ ಕೋರ್ಟ್ ಟೀಕಿಸಿದೆ. ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾಣಿಸಿಕೊಂಡಾಗ ರಣವೀರ್ ಅಲ್ಲಾಹಬಾಡಿಯಾ ಅವರ ಅನುಚಿತ ಹೇಳಿಕೆಗಳ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ. “ಅವನ ಹೆತ್ತವರು ನಾಚಿಕೆಪಡುತ್ತಾರೆ; ಸಮಾಜವು ನಾಚಿಕೆಪಡುತ್ತದೆ. ಅವನ ಮನಸ್ಸಿನಲ್ಲಿ ಏನೋ ಕೊಳಕು ಇದೆ, ಆ ಕೊಳಕನ್ನೇ ಆತ ಈ ಕಾರ್ಯಕ್ರಮದಲ್ಲಿ ಕಕ್ಕಿದ್ದಾನೆ” ಎಂದು ನ್ಯಾಯಪೀಠ ಹೇಳಿದೆ.

ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಣವೀರ್ ಅಲ್ಲಾಬಾಡಿಯಾ ಆ ಶೋನಲ್ಲಿ ಭಾಗವಹಿಸಿದ್ದ ಯುವಕನೊಬ್ಬನ ಬಳಿ ಆತನ ತಂದೆ-ತಾಯಿಯ ಬಗ್ಗೆ ಮುಜುಗರಕಾರಿಯಾಗಿ ಮಾತನಾಡಿದ್ದರು. ನಿಮ್ಮ ತಂದೆ-ತಾಯಿ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಲೇ ದಿನ ದೂಡುತ್ತೀರಾ? ಅಥವಾ ನೀವು ಕೂಡ ಅವರೊಂದಿಗೆ ಸೇರಿಕೊಳ್ಳಲು ಬಯಸುತ್ತೀರಾ? ಎಂದು ರಣವೀರ್ ಕೇಳಿದ ಪ್ರಶ್ನೆಗೆ ಆ ಯುವಕ ತಲೆ ತಗ್ಗಿಸಿ ನಿಂತಿದ್ದ. ಇದನ್ನು ಕೇಳಿದ ಇತರೆ ತೀರ್ಪುಗಾರರು ಚಪ್ಪಾಳೆ ತಟ್ಟಿ ನಕ್ಕಿದ್ದರು. ಆದರೆ, ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ