ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು
ವೈದ್ಯ
Follow us
ನಯನಾ ರಾಜೀವ್
|

Updated on: Oct 03, 2024 | 9:04 AM

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ಮಾತನಾಡಿ, ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರು, ಚಿಕಿತ್ಸೆ ಪಡೆದ ಬಳಿಕ ವೈದ್ಯರನ್ನು ಭೇಟಿಯಾಗಲೇಬೇಕು ಎಂದು ಮನವಿ ಮಾಡಿದರು, ವೈದ್ಯರ ಕ್ಯಾಬಿನ್​ಗೆ ಪ್ರವೇಶಿಸಿದಾಗ ವೈದ್ಯರನ್ನು ಹತ್ಯೆ ಮಾಡಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ವೈದ್ಯರು ತಮ್ಮ ಸುರಕ್ಷತೆ ಮತ್ತು ಭದ್ರತೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಘಟನೆ ವರದಿಯಾಗಿದೆ.

ಮತ್ತಷ್ಟು ಓದಿ: ಮುಂಬೈ: ಆಸ್ಪತ್ರೆಯಲ್ಲಿ ಕುಡುಕ ರೋಗಿಯಿಂದ ವೈದ್ಯೆ ಮೇಲೆ ಹಲ್ಲೆ

ಮತ್ತೊಂದು ಘಟನೆ

ಪಾದರಕ್ಷೆ ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಹಲ್ಲೆ: ಮೂವರ ಬಂಧನ ಗುಜರಾತಿನ ಭಾವನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸಾ ಕೊಠಡಿಗೆ ಪ್ರವೇಶಿಸುವ ಮುನ್ನ ಪಾದರಕ್ಷೆಗಳನ್ನು ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಹೋರ್‌ ನಗರದ ಶ್ರೇಯಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ಮೂವರನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಸೆಪ್ಟೆಂಬರ್‌ 12ರಂದು ತಲೆಗೆ ಪೆಟ್ಟಾಗಿದ್ದ ಮಹಿಳೆಯನ್ನು ಆರೋಪಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯನ್ನು ಪ್ರವೇಶಿಸುವಾಗ ಪಾದರಕ್ಷೆಗಳನ್ನು ತೆಗೆಯುವಂತೆ ವೈದ್ಯರು ಹೇಳಿದ್ದಾರೆ. ಇದನ್ನು ವಿರೋಧಿಸಿದ ಆರೋಪಿಗಳು ವೈದ್ಯರು ಮತ್ತು ನರ್ಸಿಂಗ್‌ ಸಿಬ್ಬಂದಿಯನ್ನು ನಿಂದಿಸಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ