AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಆಪರೇಷನ್ ವೇಳೆ ಮಹಿಳೆಯ ದೇಹದೊಳಗೆ ಕತ್ತರಿ ಬಿಟ್ಟ ವೈದ್ಯರು; 2 ವರ್ಷದ ಬಳಿಕ ವಿಷಯ ಬಯಲು

ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಸಮಯದಲ್ಲಿ ವೈದ್ಯರು ಮಹಿಳೆಯ ದೇಹದೊಳಗೆ ಕತ್ತರಿ ಬಿಟ್ಟಿದ್ದಾರೆ. ಈ ವಿಷಯ 2 ವರ್ಷಗಳ ನಂತರ ಬಯಲಾಗಿದೆ. ಮಧ್ಯಪ್ರದೇಶದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿದ ನಂತರ ಮಹಿಳೆಯ ಹೊಟ್ಟೆಯಲ್ಲಿ ಕತ್ತರಿ ಕಾಣಿಸಿಕೊಂಡಿದೆ. ಇದಾದ ನಂತರ ವೈದ್ಯರು ಹಾಗೂ ಮಹಿಳೆಯ ಕುಟುಂಬದವರು ಇಷ್ಟೊಂದು ದೊಡ್ಡ ನಿರ್ಲಕ್ಷ್ಯ ಹೇಗೆ ನಡೆದಿದೆ ಎಂದು ಆಘಾತಗೊಂಡಿದ್ದಾರೆ.

ಕ್ಯಾನ್ಸರ್ ಆಪರೇಷನ್ ವೇಳೆ ಮಹಿಳೆಯ ದೇಹದೊಳಗೆ ಕತ್ತರಿ ಬಿಟ್ಟ ವೈದ್ಯರು; 2 ವರ್ಷದ ಬಳಿಕ ವಿಷಯ ಬಯಲು
ಕ್ಯಾನ್ಸರ್ ಆಪರೇಷನ್ ವೇಳೆ ಮಹಿಳೆಯ ದೇಹದೊಳಗೆ ಕತ್ತರಿ ಬಿಟ್ಟ ವೈದ್ಯರು
ಸುಷ್ಮಾ ಚಕ್ರೆ
|

Updated on: Nov 30, 2024 | 3:13 PM

Share

ಭೂಪಾಲ್: 2 ವರ್ಷಗಳ ಹಿಂದೆ ಕ್ಯಾನ್ಸರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಮಹಿಳೆಯ ಆಪರೇಷನ್ ಮಾಡಿದ ವೈದ್ಯರು ಆಕೆಯ ಹೊಟ್ಟೆಯೊಳಗೆ ಕತ್ತರಿ ಹಾಗೇ ಬಿಟ್ಟಿದ್ದಾರೆ. ಈ ವಿಷಯ ಇದೀಗ ಬಯಲಾಗಿದೆ. ವೈದ್ಯರ ನಿರ್ಲಕ್ಷ್ಯದ ಈ ಪ್ರಕರಣದಲ್ಲಿ ಎರಡು ವರ್ಷಗಳ ಬಳಿಕ ಮಹಿಳೆಯ ಹೊಟ್ಟೆಯ ಒಳಗಿನಿಂದ ಕತ್ತರಿ ಹೊರಗೆ ತೆಗೆಯಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ 2 ವರ್ಷಗಳ ಹಿಂದೆ ಗ್ವಾಲಿಯರ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಆ ಮಹಿಳೆ ಆಪರೇಷನ್ ಮಾಡಿಸಿಕೊಂಡಿದ್ದರು. ಈ ವೇಳೆ ವೈದ್ಯರು ಆಕೆಯ ಹೊಟ್ಟೆಯಲ್ಲಿ ಕತ್ತರಿ ಬಿಟ್ಟಿದ್ದಾರೆ.

ಇದೀಗ ಭಿಂಡ್ ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ರೋಗಿಯ ಕುಟುಂಬದವರು ಸಿಟಿ ಸ್ಕ್ಯಾನ್‌ನಲ್ಲಿ ಮಹಿಳೆಯ ಹೊಟ್ಟೆಯಲ್ಲಿ ಕತ್ತರಿ ಪತ್ತೆಯಾಗಿದ್ದರಿಂದ ಆಘಾತಕ್ಕೊಳಗಾಗಿದ್ದಾರೆ. ಭಿಂಡ್ ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಉಸ್ತುವಾರಿ ಸತೀಶ್ ಶರ್ಮಾ ಅವರು ಕಮಲಾ ಎಂಬ ಮಹಿಳೆಯ ಸಿಟಿ ಸ್ಕ್ಯಾನ್ ಮಾಡುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ಮಗು ಸಾವು; ಶಾಕಿಂಗ್ ವಿಡಿಯೋ ವೈರಲ್

ಎರಡು ವರ್ಷಗಳ ಹಿಂದೆ ಆ ಮಹಿಳೆಗೆ ಗ್ವಾಲಿಯರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಈ ಕಾರ್ಯಾಚರಣೆ ವೇಳೆ ಹೊಟ್ಟೆಯಲ್ಲಿ ಕತ್ತರಿ ಉಳಿದುಬಿಟ್ಟಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಭಿಂಡ್ ಜಿಲ್ಲೆಯ ನಿವಾಸಿ ಕಮಲಾ ಅವರಿಗೆ ಹೊಟ್ಟೆಯ ಕ್ಯಾನ್ಸರ್‌ಗಾಗಿ 2022ರ ಫೆಬ್ರವರಿ 20ರಂದು ಗ್ವಾಲಿಯರ್‌ನ ಕಮಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಆಪರೇಷನ್ ವೇಳೆ ವೈದ್ಯರು ನಿರ್ಲಕ್ಷ್ಯ ವಹಿಸಿ ಮಹಿಳೆಯ ಹೊಟ್ಟೆಯಲ್ಲಿ ಕತ್ತರಿ ಬಿಟ್ಟಿದ್ದಾರೆ. ಮಹಿಳೆಗೆ ಇದರ ಅರಿವೇ ಇರಲಿಲ್ಲ. ಆದರೆ, ಕಳೆದ ಕೆಲವು ದಿನಗಳಿಂದ ಮಹಿಳೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಔಷಧಿ ನೀಡಿದರೂ ನೋವು ಕಡಿಮೆಯಾಗದಿದ್ದಾಗ ವೈದ್ಯರು ಸಿಟಿ ಸ್ಕ್ಯಾನ್ ಮಾಡುವಂತೆ ಸೂಚಿಸಿದ್ದು, ಈ ವೇಳೆ ಹೊಟ್ಟೆಯಲ್ಲಿ ಕತ್ತರಿ ಸ್ಪಷ್ಟವಾಗಿ ಗೋಚರಿಸಿದೆ.

ಇದನ್ನೂ ಓದಿ: ಸಮಸ್ಯೆಯಿದ್ದ ಕಣ್ಣೇ ಬೇರೆ, ವೈದ್ಯರು ಆಪರೇಷನ್ ಮಾಡಿರುವ ಕಣ್ಣೇ ಬೇರೆ

ಹೊಟ್ಟೆಯಲ್ಲಿದ್ದ ಕತ್ತರಿ ಮಹಿಳೆಗೆ ಮಾರಕವಾಗಬಹುದು. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಹಾಗೂ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿರುವ ವೈದ್ಯ ಸತೀಶ್ ಶರ್ಮಾ ಕೂಡ ಇದನ್ನು ಖಚಿತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು