Kerala: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಕೇರಳ ಸರ್ಕಾರ

ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಕೇರಳ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

Kerala: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಕೇರಳ ಸರ್ಕಾರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 27, 2023 | 8:40 PM

ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್‌ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್​​.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಬಾಲಕನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: Stray Dog Attack: ತೆಲಂಗಾಣದಲ್ಲಿ ಬೀದಿನಾಯಿಗಳಿಂದ ದಾಳಿ 3 ವರ್ಷದ ಬಾಲಕನಿಗೆ ಗಂಭೀರ ಗಾಯ

ನಿಹಾಲ್‌ನ ಸಾವಿನ ಕೆಲವು ದಿನಗಳ ನಂತರ, ಮುಜಪ್ಪಿಲಂಗಾಡ್‌ನಲ್ಲಿ ಬೀದಿ ನಾಯಿ ದಾಳಿಯಿಂದ ಮತ್ತೊಬ್ಬ ಶಾಲಾ ಬಾಲಕಿ ಜಾನ್ವಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಳೆದ ವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ರೇಬಿಸ್ ಸೋಂಕಿನಿಂದ ಸಾವನ್ನಪ್ಪಿದ ಕೋಝಿಕ್ಕೋಡ್ ಮೂಲದ ಶೀಬಾಕುಮಾರಿ ಅವರ ಕುಟುಂಬಕ್ಕೆ ಕೇರಳ ಸರ್ಕಾರ 2 ಲಕ್ಷ ರೂ. ನೀಡಲಾಗಿದೆ.

ನಿಹಾಲ್ ನೌಶಾದ್ ಮೇಲೆ ನಾಯಿಗಳ ದಾಳಿ

ಕೇರಳದ ಕಣ್ಣೂರು ಜಿಲ್ಲೆಯ ಮುಜಪ್ಪಿಲಂಗಾಡ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಭಾನುವಾರ ರಾತ್ರಿ ಪತ್ತೆಯಾಗಿದ್ದಾನೆ.  ಬೀದಿನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕ, ವಾಕ್ ದೋಷದಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಬಾಲಕ ತನ್ನ ಮನೆಯಿಂದ ನಾಪತ್ತೆಯಾಗಿದ್ದನು. ಬಾಲಕ ಆಟವಾಡಲು ಹೋಗುತ್ತಿದ್ದ ಸಮೀಪದ ಪ್ಲಾಟ್‌ನಲ್ಲಿ ಹುಡುಕಿದ್ದಾರೆ. ಅಲ್ಲಿ ಆತ ನೆಲದ ಮೇಲೆ ಬಿದ್ದಿದ್ದು, ರಕ್ತಸ್ರಾವವಾಗುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ರಾತ್ರಿ 8.30 ರ ಹೊತ್ತಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದ್ದಾರೆ,

ಮರಣೋತ್ತರ ಪರೀಕ್ಷೆ ಬಳಿಕ ನಿಹಾಲ್ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಬೀದಿ ನಾಯಿಗಳ ಹಿಂಡು ದಾಳಿಯಲ್ಲಿ ಬಾಲಕನ ತೊಡೆಯ ಒಂದು ಭಾಗವನ್ನು ತಿಂದಿದೆ. ಘಟನೆಯ ನಂತರ, ಸ್ಥಳೀಯ ಸಂಸ್ಥೆಯು ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಸೆರೆಹಿಡಿಯಲು ಪ್ರಾರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:10 pm, Tue, 27 June 23

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ