AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ತನ್ನನ್ನು ನೋಡಿ ಬೊಗಳಿತೆಂದು ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ವ್ಯಕ್ತಿ

ನಾಯಿ(Dog) ತನ್ನನ್ನು ಬೊಗಳಿತೆಂದು ವ್ಯಕ್ತಿಯೊಬ್ಬ ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ವ್ಯಕ್ತಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಅವರ ಚಿಕ್ಕಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಾಯಿ ತನ್ನನ್ನು ನೋಡಿ ಬೊಗಳಿತೆಂದು ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ವ್ಯಕ್ತಿ
ನಾಯಿ-ಸಾಂದರ್ಭಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on:Aug 30, 2025 | 10:45 AM

Share

ಛತ್ತೀಸ್​ಗಢ, ಆಗಸ್ಟ್​ 30: ನಾಯಿ(Dog) ತನ್ನನ್ನು ಬೊಗಳಿತೆಂದು ವ್ಯಕ್ತಿಯೊಬ್ಬ ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ವ್ಯಕ್ತಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಅವರ ಚಿಕ್ಕಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.

ಫಿಟ್ಟಿಂಗ್‌ಪರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಜಿತ್ ಖಾಲ್ಖೋ ರಾತ್ರಿ 8.30 ರ ಸುಮಾರಿಗೆ ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಮೂವರು ವ್ಯಕ್ತಿಗಳು ಬಂದು ದಾಳಿ ನಡೆಸಿದ್ದಾರೆ. ಅವರ ಮೇಲೆ ಪದೇ ಪದೆ ಹರಿತವಾದ ಕೊಡಲಿಯಿಂದ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದರು, ಅವರನ್ನು ಉಳಿಸಲು ಚಿಕ್ಕಪ್ಪ ಸುರೇಶ್ ಮಿಂಜ್ ಪ್ರಯತ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಲಾಯಿತು.

ಸುಜಿತ್‌ನ ಸಾಕು ನಾಯಿ ಜತೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಯನ್ನು ನೋಡಿ ಅದು ಬೊಗಳಲು ಆರಂಭಿಸಿದಾಗ ಈ ಜಗಳ ಶುರುವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯು ನಿಂದನೆ ಮತ್ತು ಬೆದರಿಕೆಗಳಿಗೆ ಕಾರಣವಾಯಿತು. ದಾಳಿಕೋರರು ಬಲಿಪಶುವಿನ ಜೊತೆ ಹಳೆಯ ವೈಷಮ್ಯ ಹೊಂದಿದ್ದರು, ಇದು ದ್ವೇಷವನ್ನು ಇನ್ನಷ್ಟು ಹೆಚ್ಚಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Video: ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ

ದಾಳಿಯ ನಂತರ, ಪೊಲೀಸರು ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಶಂಕಿತರನ್ನು ಬಂಧಿಸಲಾಗಿದೆ.

ರಾಯ್‌ಗಢ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ಈ ಬಂಧನವನ್ನು ದೃಢಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ನಾಯಿ ಬೊಗಳುವ ವಿವಾದ ಮತ್ತು ಹಿಂದಿನ ದ್ವೇಷ ಎರಡೂ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ.ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sat, 30 August 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್