AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​AirIndia: ತಾಂತ್ರಿಕ ದೋಷ, ದೋಹಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೋಳಿಕ್ಕೋಡ್​ಗೆ ವಾಪಸ್

ದೋಹಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ(Air India)ದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ಕೇರಳದ ಕೋಳಿಕ್ಕೋಡ್​ಗೆ ವಾಪಸಾಗಿದೆ. ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಮತ್ತೆ ಕೋಳಿಕ್ಕೋಡ್​ಗೆ ಹಿಂದಿರುಗಿದೆ. ಬೋಯಿಂಗ್ 737 ವಿಮಾನವು ಬೆಳಗ್ಗೆ 9.17ಕ್ಕೆ ಕೋಳಿಕ್ಕೋಡ್​​ನಿಂದ ಹೊರಟಿತ್ತು. ಸ್ವಲ್ಪ ಸಮಯದ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ಮೂಲ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ಸೂಚಿಸಲಾಯಿತು.

​AirIndia: ತಾಂತ್ರಿಕ ದೋಷ, ದೋಹಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೋಳಿಕ್ಕೋಡ್​ಗೆ ವಾಪಸ್
ವಿಮಾನ Image Credit source: Zee Business
ನಯನಾ ರಾಜೀವ್
|

Updated on:Jul 23, 2025 | 2:21 PM

Share

ತಿರುವನಂತಪುರಂ, ಜುಲೈ 23: ದೋಹಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ(Air India)ದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ಕೇರಳದ ಕೋಳಿಕ್ಕೋಡ್​ಗೆ ವಾಪಸಾಗಿದೆ. ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಮತ್ತೆ ಕೋಳಿಕ್ಕೋಡ್​ಗೆ ಹಿಂದಿರುಗಿದೆ. ಬೋಯಿಂಗ್ 737 ವಿಮಾನವು ಬೆಳಗ್ಗೆ 9.17ಕ್ಕೆ ಕೋಳಿಕ್ಕೋಡ್​​ನಿಂದ ಹೊರಟಿತ್ತು. ಸ್ವಲ್ಪ ಸಮಯದ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ಮೂಲ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ಸೂಚಿಸಲಾಯಿತು.

ಪ್ರಯಾಣಿಕರು ಪರ್ಯಾಯ ವಿಮಾನದಲ್ಲಿ ದೋಹಾಗೆ ಹೊರಟರು. ಮಂಗಳವಾರ ಹಾಂಗ್​ಕಾಂಗ್​ನಿಂದ ದೆಹಲಿಗೆ ಹೋಗುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸೋಮವಾರ ದೆಹಲಿಯಿಂದ ಕೋಲ್ಕತ್ತಾಗೆ ಹೊರಟಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. 160 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಮತ್ತೊಂದು ಘಟನೆಯಲ್ಲಿ ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ವಿಮಾನವು ಮುಂಬೈನ ರನ್​ವೇನಲ್ಲಿ ಸ್ಕಿಡ್ ಆಗಿತ್ತು. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.ವಿಮಾನವನ್ನು ಹೆಚ್ಚಿನ ಬಳಕೆಗೆ ಅನುಮತಿಸುವ ಮೊದಲು ಅಗತ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಕೊಚ್ಚಿಯಿಂದ ಆಗಮಿಸುತ್ತಿರುವ ವಿಮಾನವು ಜುಲೈ 21 ರಂದು ಬೆಳಗ್ಗೆ 9.27 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ಇಳಿಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ವಿಮಾನ ನಿಲ್ದಾಣದ ಪ್ರಾಥಮಿಕ ರನ್‌ವೇಗೆ ಸಣ್ಣಪುಟ್ಟ ಹಾನಿಗಳು ವರದಿಯಾಗಿವೆ.

ಮತ್ತಷ್ಟು ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಸೇಫ್

ಮುಂದಿನ ಎರಡು ದಿನಗಳಲ್ಲಿ ಮುಂಬೈ ನಿವಾಸಿಗಳು ಮತ್ತಷ್ಟು ಮಳೆ ಎದುರಿಸಲು ಸಿದ್ಧರಾಗಬೇಕು. ಮುಂದಿನ 48 ಗಂಟೆಗಳಲ್ಲಿ ಮಳೆ ಇನ್ನಷ್ಟು ತೀವ್ರವಾಗುವ ನಿರೀಕ್ಷೆಯಿದೆ ಮತ್ತು ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ನಿರಂತರ ಮಳೆಯಿಂದಾಗಿ, ನಗರದ ಅನೇಕ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಈ ವಾರದ ಆರಂಭದಲ್ಲಿ, ಅಂಧೇರಿ ಸಬ್‌ವೇ ಕೂಡ ಪ್ರವಾಹಕ್ಕೆ ಸಿಲುಕಿ ಜನರನ್ನು ಸುರಕ್ಷಿತವಾಗಿಡಲು ಸ್ವಲ್ಪ ಸಮಯದವರೆಗೆ ಮುಚ್ಚಬೇಕಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:20 pm, Wed, 23 July 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ