ದೆಹಲಿ: ಪತ್ನಿ, ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕೊಂದ ವ್ಯಕ್ತಿಯ ಬಂಧನ
ಕೌಟುಂಬಿಕ ಕಲಹ ಅತಿರೇಕಕ್ಕೆ ಹೋಗಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳ ನಂತರ ಮುಕುಂದ್ ವಿಹಾರ್ ಪ್ರದೇಶದಿಂದ 29 ವರ್ಷದ ಪರ್ದೀಪ್ ಕಶ್ಯಪ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಮನೆಯಲ್ಲಿ ಈ ಕೊಲೆಗಳು ನಡೆದಿವೆ, ದಂಪತಿ ನಡುವಿನ ದೀರ್ಘಕಾಲದ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ನವದೆಹಲಿ, ಆಗಸ್ಟ್ 10: ಕೌಟುಂಬಿಕ ಕಲಹ ಅತಿರೇಕಕ್ಕೆ ಹೋಗಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಹತ್ಯೆ(Murder) ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳ ನಂತರ ಮುಕುಂದ್ ವಿಹಾರ್ ಪ್ರದೇಶದಿಂದ 29 ವರ್ಷದ ಪರ್ದೀಪ್ ಕಶ್ಯಪ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಮನೆಯಲ್ಲಿ ಈ ಕೊಲೆಗಳು ನಡೆದಿವೆ, ದಂಪತಿ ನಡುವಿನ ದೀರ್ಘಕಾಲದ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.ಆದರೂ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆಗಸ್ಟ್ 9 ರಂದು ಬೆಳಗ್ಗೆ 7.15 ರ ಸುಮಾರಿಗೆ ಕರವಾಲ್ ನಗರ ಪೊಲೀಸ್ ಠಾಣೆಗೆ ಕೊಲೆಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಈಶಾನ್ಯ ಡಿಸಿಪಿ ಆಶಿಶ್ ಮಿಶ್ರಾ ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ತಂಡವೊಂದು ಸ್ಥಳಕ್ಕೆ ತಲುಪಿದಾಗ, 28 ವರ್ಷದ ಮಹಿಳೆ ಮತ್ತು ಆಕೆಯ 7 ಮತ್ತು 5 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳು ತಮ್ಮ ಕೋಣೆಯಲ್ಲಿ ಶವವಾಗಿ ಬಿದ್ದಿದ್ದರು. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103(1) ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕಿತನನ್ನು ಪತ್ತೆಹಚ್ಚಲು ವಿಶೇಷ ಸಿಬ್ಬಂದಿ/ಈಶಾನ್ಯ ಸೇರಿದಂತೆ ಹಲವಾರು ತಂಡಗಳನ್ನು ನಿಯೋಜಿಸಲಾಗಿತ್ತು. ಪೊಲೀಸರು ಕಶ್ಯಪ್ ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ ಆತ ತಾನು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಪತ್ನಿಯೊಂದಿಗೆ ನಿರಂತರ ವಿವಾದಗಳು ನಡೆಯುತ್ತಿತ್ತು ಎಂದು ಆತ ಹೇಳಿದ್ದಾನೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ದೆಹಲಿಯ ಜಿಟಿಬಿ ಆಸ್ಪತ್ರೆಗೆ ಕಳುಹಿಸಲಾಯಿತು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಮತ್ತಷ್ಟು ಓದಿ: ತಾಯಿ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದವನನ್ನ ಬರ್ಬರವಾಗಿ ಹತ್ಯೆಗೈದ ಮಕ್ಕಳು
ಪತಿಯನ್ನು ಕೊಲೆ ಮಾಡಿ ಪ್ರಿಯಕರನ ಜತೆ ಕೇರಳದಲ್ಲಿ ಸಂಸಾರ: ಒಂದೂವರೆ ವರ್ಷದ ಬಳಿಕ ಸಿಕ್ಕಿಬಿದ್ದಳು ಪತಿಯನ್ನು ಕೊಲೆ ಮಾಡಿ ಪ್ರಿಯಕರನ ಜತೆ ಕೇರಳಕ್ಕೆ ಪರಾರಿಯಾಗಿದ್ದ ಪತ್ನಿಯನ್ನು ಚನ್ನಗಿರಿ (Channagiri) ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಲಕ್ಷ್ಮೀ (38) ಬಂಧಿತ ಆರೋಪಿ. ಕೊಲೆ ಪ್ರಕರಣದಲ್ಲಿ ಭಾಗಿಯಾದ ಪ್ರಿಯಕರ ತಿಪ್ಪೇಶ್ ನಾಯ್ಕ್ (42) ಮತ್ತು ಸಂತೋಷ್ (40) ಎಂಬುವರನ್ನೂ ಕೂಡ ಪೊಲೀಸರು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ. ನಿಂಗಪ್ಪ ಕೊಲೆಯಾದ ವ್ಯಕ್ತಿ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತ್ಯಾಗದಕಟ್ಟೆಯ ನಿವಾಸಿ ಲಕ್ಷ್ಮೀ ಮತ್ತು ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದ ನಿವಾಸಿಯಾಗಿದ್ದ ನಿಂಗಪ್ಪ ಮದುವೆಯಾಗಿ ಎಂಟು ವರ್ಷ ಕಳೆದಿದೆ. ಮದುವೆಯಾಗಿ ಎಂಟು ವರ್ಷ ಕಳೆದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಮಕ್ಕಳ ಭಾಗ್ಯ ಪಡೆಯಲು ಲಕ್ಷ್ಮೀ ಪತಿಯೊಂದಿಗೆ ಸುತ್ತದ ದೇವಾಲಯವಿರಲಿಲ್ಲ, ಹೋಗದ ಆಸ್ಪತ್ರೆಗಳಿರಲಿಲ್ಲ. ಕೊನೆಗೆ ಒಂದು ದಿನ ನಿಂಗಪ್ಪನಿಗೆ ಮಕ್ಕಳಾಗುವ ಯೋಗವಿಲ್ಲ ಎಂಬುದು ಗೊತ್ತಾಗಿದೆ.
ನಿಂಗಪ್ಪ ಅಡಿಕೆ ಕೆಲಸ ಮಾಡುತ್ತಿದ್ದು ಆತನ ಸ್ನೇಹಿತರಾದ ತಿಪ್ಪೇಶ್ ನಾಯ್ಕ್ ಹಾಗೂ ಸಂತೋಷ್ ಕೂಲಿ ಕೆಲಸಕ್ಕೆ ಬರುತ್ತಿದ್ದರು. ಆಗ, ತಿಪ್ಪೇಶ್ ನಾಯ್ಕ್ಗೆ ಲಕ್ಷ್ಮೀಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ, ಅನೈತಿಕ ಸಂಬಂಧ ಬೆಳದಿದೆ. ಇದರ ಪರಿಣಾಮವಾಗಿ ಲಕ್ಷ್ಮೀ ಗರ್ಭಿಣಿಯಾಗಿದ್ದಳು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




