ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸದಾಕೆಯ ಶವ ಪತ್ತೆ
ಶಾಸಕ ಜಾಹಿದ್ ಬೇಗ್ ಅವರ ಮನೆಯ ಟೆರೇಸ್‌ನಲ್ಲಿ ಮನೆ ಕೆಲಸದಾಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.17 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಕ್ಷದ ಶಾಸಕರೊಬ್ಬರ ಮನೆಯಲ್ಲಿ ಕೆಲಸದಾಕೆ ಶವವಾಗಿ ಪತ್ತೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶಾಸಕ ಜಾಹಿದ್ ಬೇಗ್ ಅವರ ಮನೆಯ ಟೆರೇಸ್‌ನಲ್ಲಿ ಸೋಮವಾರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನೆಯನ್ನು ದೃಢಪಡಿಸಿದ ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್ ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಮಾಹಿತಿ ಪಡೆದ ತಕ್ಷಣ ವಿಧಿವಿಜ್ಞಾನ ತಂಡ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಬಾಲಕಿ ಇಂಥಾ ನಿರ್ಧಾರ ತೆಗೆದುಕೊಳ್ಳಲು ಕಾರಣವೇನಿರಬಹುದು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.
ಮತ್ತಷ್ಟು ಓದಿ:ಲವರ್ ಜೊತೆ ರಾತ್ರಿ ಲಾಡ್ಜ್ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
ಭಾನುವಾರ ರಾತ್ರಿ ಊಟ ಮುಗಿಸಿ ಮಲಗಿದ್ದಳು ಎಂದು ಸಂತ್ರಸ್ತೆಯ ಕುಟುಂಬದವರು ತಿಳಿಸಿದ್ದಾರೆ. ಕಳೆದ ಆರು ವರ್ಷಗಳಿಂದ ಶಾಸಕರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ