ಪ್ರಧಾನಿ ಮೋದಿಗೆ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ

ಕೊವಿಡ್-19 ಸಮಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆಯನ್ನು ಶ್ಲಾಘಿಸಿರುವ ಡೊಮಿನಿಕಾ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಘೋಷಿಸಿದೆ. ಕೊವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ದೇಶಕ್ಕೆ ನೀಡಿದ ಕೊಡುಗೆ ಮತ್ತು ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸುವುದಾಗಿ ಘೋಷಿಸಿದೆ.

ಪ್ರಧಾನಿ ಮೋದಿಗೆ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ
ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: Nov 14, 2024 | 3:45 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕೆರಿಬಿಯನ್ ರಾಷ್ಟ್ರಗಳ ಭೇಟಿಗೂ ಮುಂಚಿತವಾಗಿ, ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ದೇಶಕ್ಕೆ ಅವರು ನೀಡಿದ ಅಪಾರ ಕೊಡುಗೆಗಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಗೌರವವನ್ನು ಘೋಷಿಸಿದೆ. “ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ಅವರು ನೀಡಿದ ಕೊಡುಗೆಗಳನ್ನು ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೀಡಲಿದೆ” ಎಂದು ಇಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿಯು ಈ ಘೋಷಣೆಯನ್ನು ಮಾಡಿದ್ದು, ಕಾಮನ್‌ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷರಾದ ಸಿಲ್ವಾನಿ ಬರ್ಟನ್ ಭಾರತ-ಕ್ಯಾರಿಕಾಮ್ ಶೃಂಗಸಭೆ 2024ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19-21ರಿಂದ ಶೃಂಗಸಭೆ ನಡೆಯಲಿದೆ.

ಇದನ್ನೂ ಓದಿ: ಸೋಲಾರ್ ಪ್ಯಾನೆಲ್ ಅಳವಡಿಸಲು ಪ್ರತಿ ಮನೆಗೆ 75ರಿಂದ 80 ಸಾವಿರ ನೀಡುತ್ತೇವೆ; ಜಾರ್ಖಂಡ್‌ನಲ್ಲಿ ಮೋದಿ ಘೋಷಣೆ

ಮುಂಬರುವ ಭಾರತ-ಕ್ಯಾರಿಕಾಮ್ ಶೃಂಗಸಭೆಯಲ್ಲಿ ಡೊಮಿನಿಕನ್ ಅಧ್ಯಕ್ಷರು ಪ್ರಶಸ್ತಿಯನ್ನು ನೀಡಲಿದ್ದಾರೆ. ಫೆಬ್ರವರಿ 2021ರಲ್ಲಿ ಭಾರತವು ಡೊಮಿನಿಕಾಗೆ 70,000 ಡೋಸ್ ಅಸ್ಟ್ರಾಜೆನೆಕಾ COVID-19 ಲಸಿಕೆಯನ್ನು ಪೂರೈಕೆ ಮಾಡಿತ್ತು. ಇದು ಡೊಮಿನಿಕಾ ತನ್ನ ಕ್ಯಾರಿಬಿಯನ್ ನೆರೆಹೊರೆಯವರಿಗೆ ಬೆಂಬಲವನ್ನು ವಿಸ್ತರಿಸಲು ಅನುವು ಮಾಡಿಕೊಟ್ಟ ಕೊಡುಗೆಯಾಗಿದೆ.

ಪ್ರಧಾನಿ ಮೋದಿ ಗಯಾನಾಗೆ ಭೇಟಿ ನೀಡುವ ಕೆಲವು ದಿನಗಳ ಮೊದಲು ಈ ಪ್ರಮುಖ ಘೋಷಣೆಯು ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಇದು ಅರ್ಧ ಶತಮಾನದಿಂದ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕ್ಯಾರಿಬಿಯನ್ ರಾಷ್ಟ್ರಕ್ಕೆ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿ ಭಾರತದ ಬೆಂಬಲವನ್ನು ಡೊಮಿನಿಕಾ ಗುರುತಿಸಿದೆ. ಜಾಗತಿಕ ಮಟ್ಟದಲ್ಲಿ ಹವಾಮಾನ ಸ್ಥಿತಿಸ್ಥಾಪಕತ್ವ-ನಿರ್ಮಾಣ ಉಪಕ್ರಮಗಳು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ದೇಶವು ಶ್ಲಾಘಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸುಳ್ಳು ಭರವಸೆ ನೀಡಿದ ಕಾಂಗ್ರೆಸನ್ನು ಮಹಾರಾಷ್ಟ್ರದಿಂದ ದೂರವಿಡಿ; ಪುಣೆಯಲ್ಲಿ ಪ್ರಧಾನಿ ಮೋದಿ

“ಪ್ರಧಾನಿ ನರೇಂದ್ರ ಮೋದಿ ಡೊಮಿನಿಕಾಗೆ ನಿಜವಾದ ಪಾಲುದಾರರಾಗಿದ್ದಾರೆ. ವಿಶೇಷವಾಗಿ ಜಾಗತಿಕ ಆರೋಗ್ಯ ಬಿಕ್ಕಟ್ಟಿನ ನಡುವೆ ನಮ್ಮ ಅಗತ್ಯದ ಸಮಯದಲ್ಲಿ ಭಾರತದ ಬೆಂಬಲವನ್ನು ನಾವು ನೆನಪಿಸಿಕೊಳ್ಳಲೇಬೇಕಾಗಿದೆ. ಅವರ ಬೆಂಬಲಕ್ಕಾಗಿ ನಮ್ಮ ಕೃತಜ್ಞತೆಯ ಸಂಕೇತವಾಗಿ ಮತ್ತು ಪ್ರತಿಬಿಂಬವಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಅವರಿಗೆ ನೀಡುವುದು ಗೌರವವಾಗಿದೆ. ನಮ್ಮ ದೇಶಗಳ ನಡುವಿನ ಬಲವಾದ ಸಂಬಂಧಗಳನ್ನು ನಾವು ಈ ಪಾಲುದಾರಿಕೆಯನ್ನು ನಿರ್ಮಿಸಲು ಎದುರು ನೋಡುತ್ತಿದ್ದೇವೆ ಎಂದು ಡೊಮಿನಿಕಾ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್