AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

Suresh Poojari: ಮಂಗಳೂರು ಮೂಲದ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ
ಸುರೇಶ್ ಪೂಜಾರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 19, 2021 | 2:58 PM

Share

ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಮಂಗಳೂರು ಮೂಲದ ಡಾನ್ ಸುರೇಶ್ ಪೂಜಾರಿ, ಭೂಗತ ಪಾತಕಿ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ. ನಂತರ ತನ್ನದೇ ಗ್ಯಾಂಗ್ ನಡೆಸುತ್ತಿದ್ದ. ಬೆಂಗಳೂರಿನ ಕೆಲವು ಕೇಸ್​ಗಳಲ್ಲೂ ಸುರೇಶ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಇದೀಗ ಫಿಲಿಫೈನ್ಸ್​​ನಲ್ಲಿ ಇಂಟರ್​ಪೋಲ್ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ.

ಕಳೆದ 10 ವರ್ಷದಿಂದ ರವಿ ಪೂಜಾರಿ ಗ್ಯಾಂಗ್​ನಿಂದ ಬೇರೆ ಆಗಿ, ಪ್ರತ್ಯೇಕ ಗ್ಯಾಂಗ್ ಮಾಡಿಕೊಂಡಿದ್ದ ಸುರೇಶ್ ಪೂಜಾರಿ, ಕಾಲ್ ಮಾಡಿ ಬೆದರಿಕೆ ಒಡ್ಡುತ್ತಿದ್ದ. ಈತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿತ್ತು. ಹಲವು ಎಫ್​ಐಆರ್​ಗಳು ದಾಖಲಾದ ನಂತರ ಭಾರತದಿಂದ ಪಲಾಯನ ಮಾಡಿ, ವಿವಿಧ ದೇಶಗಳಲ್ಲಿ ನಕಲಿ ಗುರುತಿನ ಕಾರ್ಡ್ ಬಳಸಿ ವಾಸಿಸುತ್ತಿದ್ದ. ಮೂಲಗಳ ಪ್ರಕಾರ, ಸುರೇಶ್ ಪೂಜಾರಿ ಅಕ್ಟೋಬರ್ 15ರಂದು ಸಿಕ್ಕಿಬಿದ್ದಿದ್ದು, ಪೊಲೀಶ್ ವಶದಲ್ಲಿದ್ದಾನೆ. ಈ ವರ್ಷದ ಆರಂಭದಲ್ಲಿ ಮತ್ತೊಬ್ಬ ಕುಖ್ಯಾತ ಡಾನ್ ರವಿ ಪೂಜಾರಿಯನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಸ್ತುತ ಸುರೇಶ್ ಪೂಜಾರಿಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ

Zomato: ‘ರಾಷ್ಟ್ರ ಭಾಷೆ’ ಹಿಂದಿ ಬರಲೇಬೇಕೆಂದ ಝೊಮ್ಯಾಟೊ ಎಕ್ಸ್​ಕ್ಯೂಟಿವ್; ಕಂಪೆನಿಗೆ ತಗುಲಿಕೊಂಡ ನೆಟ್ಟಿಗರು

Follow Us
TV9 Web
TV9 Web

TV9 Kannada

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ