AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮೋದಿಗೆ ಟ್ರಂಪ್ ಅಭಿನಂದನೆ

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿನಂದಿಸಿದ್ದಾರೆ. ಈ ಗೆಲುವನ್ನು 'ಐತಿಹಾಸಿಕ ಮತ್ತು ನಿರ್ಣಾಯಕ' ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ ಮೊದಲ ಬಾರಿ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮೋದಿಗೆ ಟ್ರಂಪ್ ಅಭಿನಂದನೆ
Donald Trump And Pm ModiImage Credit source: PTI
ಸುಷ್ಮಾ ಚಕ್ರೆ
|

Updated on:May 05, 2026 | 10:56 PM

Share

ನವದೆಹಲಿ, ಮೇ 5: ಪಶ್ಚಿಮ ಬಂಗಾಳ (West Bengal Election Results) ರಾಜ್ಯದಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಇದನ್ನು “ಐತಿಹಾಸಿಕ” ಮತ್ತು “ನಿರ್ಣಾಯಕ” ಫಲಿತಾಂಶ ಎಂದು ಕರೆದಿದ್ದಾರೆ. ಭಾರತವು ಅವರನ್ನು ನಾಯಕನನ್ನಾಗಿ ಪಡೆದಿರುವುದು ಅವರ ಅದೃಷ್ಟ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ತಿಂಗಳಷ್ಟೇ ತಮ್ಮ ಫೋನ್ ಕರೆಯಲ್ಲಿ, ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಧಾನಿ ಮೋದಿಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು. ಅವರನ್ನು ತನ್ನ ನಾಯಕನನ್ನಾಗಿ ಪಡೆದಿರುವುದು ಭಾರತದ ಅದೃಷ್ಟ ಎಂದು ಹೇಳಿದ್ದರು. ಇಂದು ಐತಿಹಾಸಿಕ ಮತ್ತು ನಿರ್ಣಾಯಕ ಚುನಾವಣಾ ಗೆಲುವಿಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ?

ರಾಜಕೀಯವಾಗಿ ಬಹಳ ಕಾಲದಿಂದ ತೃಣಮೂಲ ಕಾಂಗ್ರೆಸ್ ಪ್ರಾಬಲ್ಯ ಹೊಂದಿದ್ದ ಪಶ್ಚಿಮ ಬಂಗಾಳದ ಮೇಲೆ ಬಿಜೆಪಿ ಮೊದಲ ಬಾರಿಗೆ ಹಿಡಿತ ಸಾಧಿಸಿದೆ. ಈ ಫಲಿತಾಂಶವು ಬ್ಯಾನರ್ಜಿಯವರ 15 ವರ್ಷಗಳ ಅಧಿಕಾರದ ಹಿಡಿತವನ್ನು ಕೊನೆಗೊಳಿಸಿದೆ. ನರೇಂದ್ರ ಮೋದಿಗೆ ಇದು ಒಂದು ಪ್ರಮುಖ ರಾಜಕೀಯ ಲಾಭವೆಂದು ಪರಿಗಣಿಸಲಾಗುತ್ತಿದೆ.

ಸೋಮವಾರ ಪ್ರಕಟವಾದ ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದಿದೆ. ಕಳೆದ 15 ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದೆ. ಪಶ್ಚಿಮ ಬಂಗಾಳದಲ್ಲಿ ತನ್ನ ಮೊದಲ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಸಿದ್ಧತೆಗಳನ್ನು ನಡೆಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Tue, 5 May 26

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ