ಚಂದ್ರಬಾಬು ನಾಯ್ಡು ಅವರನ್ನು ಎಂದಿಗೂ ನಂಬಲು ಸಾಧ್ಯವಿಲ್ಲ: ಅಸಾದುದ್ದೀನ್ ಓವೈಸಿ

Asaduddin Owaisi: ಸದ್ಯ ಆಂಧ್ರಪ್ರದೇಶದಲ್ಲಿ ಎರಡು ಪಕ್ಷಗಳಿದ್ದು, ಒಂದು ಟಿಡಿಪಿ ಮತ್ತು ಇನ್ನೊಂದು ಜಗನ್ ಅವರ ಪಕ್ಷ ವೈಸಿಪಿ. ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್  ರೆಡ್ಡಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಆದರೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಎಂದಿಗೂ ನಂಬಲು ಸಾಧ್ಯವಿಲ್ಲ. ಜನರು ಅವರನ್ನು ಎಂದಿಗೂ ನಂಬಬಾರದು ಎಂದು ಓವೈಸಿ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರನ್ನು ಎಂದಿಗೂ ನಂಬಲು ಸಾಧ್ಯವಿಲ್ಲ: ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ
Follow us
|

Updated on: Sep 26, 2023 | 3:14 PM

ಹೈದರಾಬಾದ್ ಸೆಪ್ಟೆಂಬರ್ 26: ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ ಆಂಧ್ರಪ್ರದೇಶವನ್ನು ಬೆಚ್ಚಿಬೀಳಿಸಿದ್ದು, ಚಂದ್ರಬಾಬು ನಾಯ್ಡು (Chandrababu Naidu) ಅವರ ಬಂಧನ ಮತ್ತು ರಿಮಾಂಡ್ ನಂತರ ಎಲ್ಲವೂ ಬದಲಾಯಿತು. ಕೌಶಲ್ಯ ಹಗರಣದಲ್ಲಿ ಬಂಧಿತರಾಗಿ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಟಿಪಿ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಜೈಲಿನಲ್ಲಿ ಖುಷಿಯಾಗಿದ್ದಾರೆ. ಜೈಲಿಗೆ ಹೋಗಿದ್ದೇಕೆ ಎಂಬುದು ನಿಮಗೆಲ್ಲ ಗೊತ್ತಿದೆ ಎಂದು ಎಐಎಐಎಂ (AIMIM) ಅಧ್ಯಕ್ಷ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಹೇಳಿದ್ದಾರೆ.

ಸದ್ಯ ಆಂಧ್ರಪ್ರದೇಶದಲ್ಲಿ ಎರಡು ಪಕ್ಷಗಳಿದ್ದು, ಒಂದು ಟಿಡಿಪಿ ಮತ್ತು ಇನ್ನೊಂದು ಜಗನ್ ಅವರ ಪಕ್ಷ ವೈಸಿಪಿ. ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್  ರೆಡ್ಡಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಆದರೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಎಂದಿಗೂ ನಂಬಲು ಸಾಧ್ಯವಿಲ್ಲ. ಜನರು ಅವರನ್ನು ಎಂದಿಗೂ ನಂಬಬಾರದು ಎಂದು ಓವೈಸಿ ಹೇಳಿದ್ದಾರೆ.

ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ಹೈದರಾಬಾದ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ತೆಲುಗು ರಾಜ್ಯಗಳ ಮಜ್ಲಿಸ್ ಕಾರ್ಯಕರ್ತರೊಂದಿಗೆ ವಿಶೇಷ ಸಭೆಯಲ್ಲಿ ಅಸಾದುದ್ದೀನ್ ಓವೈಸಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಬಿಆರ್‌ಎಸ್‌ಗೆ ಮತ ಹಾಕುವಂತೆ ತೆಲಂಗಾಣದ ಮುಸ್ಲಿಮರಿಗೆ ಕರೆ

ತಮ್ಮ ಭದ್ರಕೋಟೆಯಾದ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್‌ಗೆ ಮತ ಹಾಕುವಂತೆ ತೆಲಂಗಾಣದ ಮುಸ್ಲಿಮರಿಗೆ ಹೇಳಿದ್ದಾರೆ. ಸಂಸತ್ತಿನಲ್ಲಿ ಮುಸಲ್ಮಾನನ ಹತ್ಯೆಯಾಗುವ ದಿನ ದೂರವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಭಾನುವಾರ ಪಕ್ಷದ ಪ್ರಧಾನ ಕಛೇರಿ ದಾರುಸ್ಸಲಾಮ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಓವೈಸಿ, ಕಳೆದ ವಾರ ಬಿಆರ್‌ಎಸ್ ಮತ್ತು ಎಐಎಂಐಎಂ ಬಿಜೆಪಿಯೊಂದಿಗೆ ಪಾಲುದಾರಿಕೆಯಲ್ಲಿವೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡರು.

ನಾನು ಈ ಬಾರಿ ನಿಮ್ಮ ನಾಯಕನಿಗೆ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವ ಬದಲು ಹೈದರಾಬಾದ್‌ಗೆ ಬನ್ನಿ ಎಂದು ಹೇಳಲು ಬಯಸುತ್ತೇನೆ. ನಾನು ಸವಾಲು ಹಾಕುತ್ತಿದ್ದೇನೆ ವಯನಾಡಿಗೆ ಹೋಗಬೇಡಿ, (ಬದಲಿಗೆ) ಇಲ್ಲಿಗೆ ಬನ್ನಿ. ನಾವು ಆ ಕೈಯನ್ನು (ಕಾಂಗ್ರೆಸ್ ಚಿಹ್ನೆ) ಪರೀಕ್ಷಿಸುತ್ತೇವೆ. ನೀವು ದೊಡ್ಡ ದೊಡ್ಡ ಭಾಷಣಗಳನ್ನು ಮಾಡುತ್ತೀರಿ, ಹಾಗಾದರೆ ಟೋಪಿ ಮತ್ತು ಶೇರ್ವಾನಿ ಧರಿಸಿದ ವ್ಯಕ್ತಿಯ ವಿರುದ್ಧ ನೀವು ಏಕೆ ಇಲ್ಲಿ ಹೋರಾಡಬಾರದು? ಎಂದು ಓವೈಸಿ ಕೇಳಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್: ಟಿಡಿಪಿ-ಜನಸೇನೆ ಒಟ್ಟಾಗಿ ಆಂದ್ರ ಅಸೆಂಬ್ಲಿ ಚುನಾವಣೆ ಎದುರಿಸಲಿದೆ ಎಂದು ಘೋಷಣೆ

ಗಲಭೆಗೆ ಕಾಂಗ್ರೆಸ್ ಕಾರಣ ಎಂದ ಓವೈಸಿ

ಹೈದರಾಬಾದ್‌ನಲ್ಲಿ ನಡೆದ ಗಲಭೆಗಳು ಕಾಂಗ್ರೆಸ್‌ನ ಕೊಡುಗೆ ಎಂಬುದನ್ನು ನೆನಪಿಟ್ಟುಕೊಳ್ಳಲು ನಾನು ತೆಲಂಗಾಣದ ಜನರಿಗೆ ಮನವಿ ಮಾಡಲು ಬಯಸುತ್ತೇನೆ. ನಾವು ಸಾಕಷ್ಟು ಪ್ರಯತ್ನದಿಂದ ಇಲ್ಲಿ ಶಾಂತಿಯನ್ನು ತಂದಿದ್ದೇವೆ. ನಿಜ, ಮಾಡಬೇಕಾದ ಕೆಲಸ ಬಹಳಷ್ಟಿದೆ. ಬಾಬರಿ ಮಸೀದಿ ಧ್ವಂಸವಾದಾಗ ಅಧಿಕಾರದಲ್ಲಿದ್ದದ್ದು ಇದೇ ಕಾಂಗ್ರೆಸ್. ಸೆಕ್ರೆಟರಿಯೇಟ್‌ನಲ್ಲಿ ಮಸೀದಿಯನ್ನು ಕೆಡವಲಾಯಿತು, ಆದರೆ ಅದನ್ನು ಪುನರ್ನಿರ್ಮಿಸಲಾಯಿತು. ಆದರೆ, ಬಾಬರಿ ಮಸೀದಿಯನ್ನು ಮರುನಿರ್ಮಾಣ ಮಾಡಲೇ ಇಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಜ್ಲಿಸ್ (ಎಐಎಂಐಎಂ) ಅನ್ನು ಬಲಪಡಿಸಿ, ಮಜ್ಲಿಸ್ ಅಭ್ಯರ್ಥಿಗಳಿಗೆ ಮತ ನೀಡಿ. ಮಜ್ಲಿಸ್ ಅಭ್ಯರ್ಥಿ ಇಲ್ಲದಿದ್ದಲ್ಲಿ ಕೆಸಿಆರ್ ಅನ್ನು ಬೆಂಬಲಿಸಿ ಎಂದು ಒವೈಸಿ ನೆರೆದಿದ್ದ ಪ್ರೇಕ್ಷಕರನ್ನು ಉದ್ದೇಶಿಸಿ ಹೇಳಿದರು. ಇತ್ತೀಚೆಗೆ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ದ್ವೇಷದ ಭಾಷಣದ ಕುರಿತು ಮಾತನಾಡಿದ ಓವೈಸಿ, ಭಾಷಣವನ್ನು ಅನುವಾದಿಸಿ ಸೌದಿ ಅರೇಬಿಯಾದಂತಹ ಮುಸ್ಲಿಂ ರಾಷ್ಟ್ರಗಳ ಪ್ರಧಾನಿಗಳಿಗೆ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?